ಮಂಗಳೂರಿನ ಉರ್ವ ಚಿಲಿಂಬಿ ಸಾಯಿ ಬಾಬಾ ಮಂದಿರದ ಬಳಿ ಘಟನೆ ನಡೆದಿದ್ದು, ದೇವಸ್ಥಾನದ ಬಳಿ ಶಾಸಕ ವೇದವ್ಯಾಸ ಕಾಮತ್ ನೇತೃತ್ವದ ಬಿಜೆಪಿ ಕಾರ್ಯಕರ್ತರ ತಂಡವು ಪ್ರಚಾರ ನಡೆಸುತ್ತಿತ್ತು. ಇದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ಎತ್ತಿದ್ದಾರೆ. ಪ್ರಚಾರದ ವಿಚಾರವಾಗಿ ಆರಂಭವಾದ ವಾಗ್ವಾದವು, ಹೊಯ್ ಕೈ ನಡೆಸುವ ಹಂತಕ್ಕೆ ತಲುಪಿತು. ವಿಷಯ ತಿಳಿದ ಕೂಡಲೇ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ನೇತೃತ್ವದ ಕಾಂಗ್ರೆಸ್ ಮುಖಂಡರು ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ. ವಾಗ್ವಾದವು ವಿಪರೀತಕ್ಕೆ ತಲುಪುತ್ತಿದ್ದಂತೆಯೇ ಮಧ್ಯಪ್ರವೇಶಿಸಿದ ಪೊಲೀಸರು, ಸ್ಥಳದಲ್ಲಿದ್ದವರನ್ನು ಸಮಾಧಾನ ಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ಮಂದಿರದ ಬಳಿ ಪ್ರಚಾರ ನಡೆಸಬಾರದು ಎಂದು ಕೈ ಕಾರ್ಯಕರ್ತರ ಆಕ್ಷೇಪ
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: