‘ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್ ಪ್ರಕರಣ ನನ್ನ ಗಮನಕ್ಕೆ ಬಂದಿಲ್ಲ. ಅವೆಲ್ಲ ಊಹಾಪೋಹ’ ಎಂದು ಹೇಳುವ ಮೂಲಕ ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಜಿ ಟಿ ದೇವೇಗೌಡ ಅವರು ಮಾಧ್ಯಮಗಳ ಮುಂದೆ ಮುಜುಗರಕ್ಕೆ ಒಳಗಾದರು. ಅಷ್ಟೇ ಅಲ್ಲ ಮಾಧ್ಯಮಗಳ ತೀಕ್ಷ್ಣ ಪ್ರಶ್ನೆಗಳಿಗೆ ತಬ್ಬಿಬ್ಬಾದ ಪ್ರಸಂಗ ನಡೆಯಿತು.