ಯುದ್ಧ ವರದಿ | ಇರಾನ್ ಮೇಲೆ ದಾಳಿ; ಭಾರತದಲ್ಲಿ 350 ವಿಮಾನಗಳ ಹಾರಾಟ ರದ್ದು

Date:

ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಇರಾನ್ ಕೂಡಾ ದಾಳಿ ನಡೆಸುತ್ತಲಿದೆ. ಈ ಯುದ್ಧದ ವಾತಾವರಣದ ನಡುವೆ ಮಾರ್ಚ್‌ 1ರಂದು ಭಾರತೀಯ ವಿಮಾನಯಾನ ಸಂಸ್ಥೆಗಳು ನಿರ್ವಹಿಸುವ ಸುಮಾರು 350 ವಿಮಾನಗಳ ಹಾರಾಟ ರದ್ದಾಗಿದೆ. ಈ ಹಿಂದೆ 440 ವಿಮಾನಗಳು ರದ್ದಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿತ್ತು.

- Advertisement -

ಈ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯ (MoCA) ಹೇಳಿಕೆ ಬಿಡುಗಡೆಗೊಳಿಸಿದ್ದು, “ಮಧ್ಯಪ್ರಾಚ್ಯದಲ್ಲಿನ ಭೌಗೋಳಿಕ ರಾಜಕೀಯ ಬೆಳವಣಿಗೆಗಳಿಂದ ಉಂಟಾದ ವಾಯುಪ್ರದೇಶದ ನಿರ್ಬಂಧಗಳನ್ನು ಗಮನದಲ್ಲಿಟ್ಟುಕೊಂಡು, ಮಾರ್ಚ್‌ 1ರಂದು ಭಾರತೀಯ ದೇಶೀಯ ವಿಮಾನಯಾನ ಸಂಸ್ಥೆಗಳು ನಿರ್ವಹಿಸುವ ಒಟ್ಟು 350 ವಿಮಾನ ಹಾರಾಟವನ್ನು ರದ್ದುಗೊಳಿಸಲಾಗಿದೆ” ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಇದನ್ನು ಓದಿದ್ದೀರಾ? ಯುದ್ಧ ವರದಿ: ಇರಾನ್‌ನ ಪ್ರಮುಖ ಕೇಂದ್ರಗಳ ಮೇಲೆ ಕ್ಷಿಪಣಿ ದಾಳಿಯ ವಿಡಿಯೋ ಬಿಡುಗಡೆಗೊಳಿಸಿದ ಇಸ್ರೇಲ್

ಫೆಬ್ರವರಿ 28ರಂದು ದೇಶೀಯ ವಿಮಾನಯಾನ ಸಂಸ್ಥೆಗಳ 410 ವಿಮಾನಗಳ ಹಾರಾಟ ರದ್ದಾಗಬಹುದು ಎಂದಿತ್ತು ಮತ್ತು ಪ್ರಯಾಣಿಕರು ಸಂಬಂಧಪಟ್ಟ ವಿಮಾನಯಾನ ಸಂಸ್ಥೆಗಳೊಂದಿಗೆ ತಮ್ಮ ವಿಮಾನ ಹಾರಾಟದ ಬಗ್ಗೆ ಮಾಹಿತಿ ಪಡೆಯುವಂತೆ ಸಲಹೆ ನೀಡಿತ್ತು. ಹಾಗೆಯೇ ವಿಮಾನ ಮಾರ್ಗ ಬದಲಾವಣೆಯನ್ನು ಸರಿಯಾಗಿ ನಿರ್ವಹಿಸಲು ಮತ್ತು ಪ್ರಯಾಣಿಕರಿಗೆ ಸರಿಯಾದ ಸೌಲಭ್ಯವನ್ನು ಒದಗಿಸುವ ನಿಟ್ಟಿನಲ್ಲಿ ಎಚ್ಚರಿಕೆಯಿಂದ ಕ್ರಮಕೈಗೊಳ್ಳುವಂತೆ ವಿಮಾನಯಾನ ಸಂಸ್ಥೆಗಳಿಗೆ ತಿಳಿಸಲಾಗಿದೆ ಎಂದೂ ಹೇಳಿತ್ತು.

ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ಭಾನುವಾರದಂದು 22 ಅಂತಾರಾಷ್ಟ್ರೀಯ ಸೇವೆಗಳನ್ನು ರದ್ದುಗೊಳಿಸಿದೆ. ಮಧ್ಯಪ್ರಾಚ್ಯ ಬಿಕ್ಕಟ್ಟಿನಿಂದಾಗಿ ಇದುವರೆಗೆ ಒಟ್ಟು 50 ವಿಮಾನಗಳ ಹಾರಾಟ ರದ್ದಾಗಿವೆ. ಹಾಗೆಯೇ ಮಾರ್ಚ್ 2ರವರೆಗೆ ವಿಮಾನ ವ್ಯತ್ಯಯವಾಗಲಿದೆ ಎಂದು ತಿಳಿಸಿದೆ.

ಏರ್ ಇಂಡಿಯಾ ಮತ್ತು ಇಂಡಿಗೋ ಎರಡೂ ಮಧ್ಯಪ್ರಾಚ್ಯಕ್ಕೆ ಮತ್ತು ಅಲ್ಲಿಂದ ಪ್ರಯಾಣಕ್ಕಾಗಿ ವಿನಾಯಿತಿಗಳನ್ನು ನೀಡುತ್ತಿವೆ. ಪ್ರಯಾಣಿಕರು ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ ತಮ್ಮ ವಿಮಾನಯಾನದ ಸಮಯವನ್ನು ಬೇರೆ ದಿನಾಂಕಕ್ಕೆ ಬದಲಾಯಿಸಲು ಅಥವಾ ಟಿಕೆಟ್‌ಗಾಗಿ ಪಾವತಿಸಿದ ಪೂರ್ಣ ಹಣವನ್ನು ಮರುಪಡೆಯಲು ಅವಕಾಶ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇರಾನ್-ಅಮೆರಿಕ ದಾಳಿ, ಪ್ರತಿದಾಳಿ: ಶಾಂತಿ ಮರೀಚಿಕೆ; ಕದನ ವಿರಾಮ ತತ್ತರ!

ಅಮೆರಿಕ ಮತ್ತು ಇರಾನ್ ನಡುವೆ ಕದನ ವಿರಾಮಕ್ಕಾಗಿ ನಡೆಸುತ್ತಿರುವ ಪ್ರಯತ್ನಗಳ ನಡುವೆಯೂ...

ಟ್ರಂಪ್ ಬೆದರಿಕೆ; ಮಾತುಕತೆಯಿಂದ ಹೊರನಡೆದ ಇರಾನ್ ಅಧಿಕಾರಿಗಳು: ಉದ್ವಿಗ್ನತೆ ತೀವ್ರ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟೆಹ್ರಾನ್ ಮೇಲೆ ಮತ್ತೆ ದಾಳಿ ನಡೆಸಲಾಗುವುದು...

ಇಸ್ರೇಲ್‌ನಿಂದ ಕದನ ವಿರಾಮ ಉಲ್ಲಂಘನೆ: ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್

ದಕ್ಷಿಣ ಲೆಬನಾನ್ ಮೇಲೆ ಇಸ್ರೇಲ್ ದಾಳಿ ನಡೆಸಿ ಅಮೆರಿಕದೊಂದಿಗೆ ನಡೆಸಿದ ಒಪ್ಪಂದವನ್ನು...

‘ಡ್ರೋನ್ ವ್ಯೂಹ’ಕ್ಕೆ ದೊಡ್ಡಣ್ಣನ ಪ್ರತಿಷ್ಠೆ ಧೂಳೀಪಟ: ಅಮೆರಿಕದ ಕೊಬ್ಬು ಇಳಿಸಿದ ಇರಾನ್

ಯಾವ ಇರಾನ್ ಸರ್ಕಾರವನ್ನು ಪತನಗೊಳಿಸಲು ಅಮೆರಿಕ ಯುದ್ಧ ಆರಂಭಿಸಿತ್ತೋ, ಅದೇ ಇರಾನ್...