ಡಿ.14ರಂದು ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ

Date:

ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಡಿಸೆಂಬರ್ 14ರಂದು ಚುನಾವಣೆ ನಡೆಯಲಿದೆ. ಈಗಾಗಲೇ ನ.15ರಿಂದ 24ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ಸದ್ಯ ಸ್ತ್ರಿವಾದಿ ಲೇಖಕಿ ಆರ್ ಸುನಂದಮ್ಮ ಮತ್ತು ಲೇಖಕಿ, ಪ್ರಾಧ್ಯಾಪಕಿ ನಿರ್ಮಲಾ ಎಲಿಗಾರ್ ಕಣದಲ್ಲಿದ್ದಾರೆ. ಈಗಾಗಲೇ ಪ್ರಾಥಮಿಕ ಪಟ್ಟಿ ಪ್ರಕಟಿಸಲಾಗಿದೆ.

- Advertisement -

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಚುನಾವಣಾಧಿಕಾರಿ ಪ್ರತಿಭಾ ಆರ್, “ನಾಮಪತ್ರಗಳನ್ನು ಹಿಂಪಡೆಯಲು ನವೆಂಬರ್ 28ರ ಮಧ್ಯಾಹ್ನ 12ರಿಂದ ಸಂಜೆ 4 ಗಂಟೆವರೆಗೆ ಅವಕಾಶವಿದೆ. ಅಭ್ಯರ್ಥಿಗಳ ಅಂತಿಮ ಪಟ್ಟಿಯ 29ರಂದು ಸಂಜೆ 4 ಗಂಟೆಗೆ ಪ್ರಕಟಿಸಲಾಗುತ್ತದೆ. ಡಿಸೆಂಬರ್ 14ರಂದು ಬೆಂಗಳೂರಿನ ಶಂಕರಪುರದಲ್ಲಿರುವ ಅಶೋಕ ಶಿಶುವಿಹಾರದಲ್ಲಿ ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ಮತದಾನಕ್ಕೆ ಅವಕಾಶವಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಕರ್ನಾಟಕ ಲೇಖಕಿಯರ ಸಂಘಕ್ಕೆ 1 ಕೋಟಿ ರೂ. ವಿಶೇಷ ಅನುದಾನ ನೀಡಲು ಸಿಎಂಗೆ ಮನವಿ

ಈ ಬಗ್ಗೆ ಈ ದಿನ ಡಾಟ್‌ ಕಾಮ್‌ಗೆ ಪ್ರತಿಕ್ರಿಯಿಸಿದ ಕರ್ನಾಟಕ ಲೇಖಕಿಯರ ಸಂಘದ ಹಾಲಿ ಅಧ್ಯಕ್ಷೆ, ಕವಯತ್ರಿ, ನಾಟಕಕಾರ್ತಿ ಮತ್ತು ವಿಮರ್ಶಕಿ ಡಾ. ಎಚ್ ಎಲ್ ಪುಷ್ಪ, “ಕರ್ನಾಟಕ ಲೇಖಕಿಯರ ಸಂಘದ ಚುನಾವಣೆಯು ಪ್ರತಿ ಮೂರು ವರ್ಷಕ್ಕೊಮ್ಮೆ ನಡೆಯುತ್ತದೆ. ಲೇಖಕಿಯರ ಬೆಂಗಳೂರು ನಗರದಲ್ಲಿ ವಾಸವಿರುವವರು ಮಾತ್ರ ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಹರಾಗಿರುತ್ತಾರೆ. ಆಯ್ಕೆಯಾದವರು ಎಲ್ಲಾ ಜಿಲ್ಲಾ ಘಟಕಗಳಿಗೆ ಒಬ್ಬರೇ ಅಧ್ಯಕ್ಷರಾಗಿರುತ್ತಾರೆ. ಅವರೇ ಕಾರ್ಯಕಾರಿ ಸಮಿತಿ ಮತ್ತು ಪದಾಧಿಕಾರಿಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಬಳಿಕ ತಮ್ಮ ಕೆಲಸಗಳನ್ನು ಮುಂದುವರಿಸುತ್ತಾರೆ” ಎಂದು ತಿಳಿಸಿದ್ದಾರೆ.

“ಸದ್ಯಕ್ಕೆ ನನ್ನ ಕೆಲವು ವೈಯಕ್ತಿಕ ಕೆಲಸಗಳು ಮಾಡಲಿರುವುದರಿಂದ, ಬರಹಗಳ ಕಡೆ ಹೆಚ್ಚು ಗಮನಹರಿಸಬೇಕಾದ ಕಾರಣ ಈ ಬಾರಿ ನಾನು ಚುನಾವಣೆಗೆ ನಿಲ್ಲುತ್ತಿಲ್ಲ. ಸದ್ಯ ಚುನಾವಣೆಗೆ ನಿಂತಿರುವ ನಿರ್ಮಲಾ ಎಲಿಗಾರ್ ಮತ್ತು ಆರ್ ಸುನಂದಮ್ಮ ಪ್ರಚಾರ ನಡೆಸುತ್ತಿದ್ದಾರೆ. ಎಲ್ಲಾ ಕಡೆ ಮಿಶ್ರ ಪ್ರತಿಕ್ರಿಯೆಯಿದ್ದು ಇಬ್ಬರ ನಡುವೆ ಕಠಿಣ ಸ್ಪರ್ಧೆಯಿದೆ. ಡಿಸೆಂಬರ್ 14ರ ಸಂಜೆ ಫಲಿತಾಂಶ ಹೊರಬೀಳಲಿದೆ” ಎಂದು ಹೇಳಿದ್ದಾರೆ.

2022ರಲ್ಲಿ ನಡೆದ ಲೇಖಕಿಯರ ಸಂಘದ ಚುನಾವಣೆಯಲ್ಲಿ ಅಂದಿನ ಅಧ್ಯಕ್ಷೆ ವನಮಾಲಾ ಸಂಪನ್ನಕುಮಾರ್‌ ಹಾಗೂ ಪುಷ್ಪ ಅವರ ನಡುವೆ ನೇರ ಸ್ಪರ್ಧೆ ನಡೆದಿತ್ತು. ಸಂಘದ 1,330 ಸದಸ್ಯರಲ್ಲಿ1,295 ಮಂದಿ ಮತದಾನದ ಅರ್ಹತೆ ಹೊಂದಿದ್ದರು. ಒಟ್ಟಾರೆಯಾಗಿ ರಾಜ್ಯದ ಎಲ್ಲೆಡೆಯಿಂದ ಒಟ್ಟಾರೆ 699 ಮತಗಳು ಚಲಾವಣೆಯಾಗಿದ್ದವು. ಈ ಪೈಕಿ 44 ಮತಗಳು. ತಿರಸ್ಕರಿಸಲ್ಪಟ್ಟಿದ್ದವು. ಅಂತಿಮವಾಗಿ 62 ಮತಗಳ ಅಂತರದಿಂದ ಪುಷ್ಪ ಗೆಲುವು ಸಾಧಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭ್ಯತೆ ಮತ್ತು ಹೆಣ್ಣುಮಕ್ಕಳು ಮಾಡಿಕೊಳ್ಳುವ ಲೆಕ್ಕಾಚಾರಗಳು

ಫೀಲ್ಡ್‌ಗೆ ಇಳಿದು ಕೆಲಸ ಮಾಡುವಾಗ ಮಹಿಳಾ ಪತ್ರಕರ್ತೆಯರು ಎದುರಿಸುವ ರಿಸ್ಕ್ ಮತ್ತು...

ಎಸ್‌ಐಆರ್ ಕುರಿತು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ: ಸಿಎಂ ಡಿ.ಕೆ. ಶಿವಕುಮಾರ್

ಎಸ್‌ಐಆರ್ (SIR) ದತ್ತಾಂಶಗಳ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವತಿಯಿಂದ ಸುಪ್ರೀಂ...

ರಾಜ್ಯದ 12 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ: ಹವಾಮಾನ ಇಲಾಖೆ

ತೀವ್ರ ಮಳೆ ಕೊರತೆಯಿಂದ ಕೂಡಿದ್ದ ಮುಂಗಾರು ಹಂಗಾಮು ಕೊನೆಗೊಂಡಿದೆ. ಹಿಂಗಾರು ಆರಂಭವಾಗಿದೆ....

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...