ಗಾಜಾದಲ್ಲಿ ಪ್ರತಿ 10 ಮಕ್ಕಳಲ್ಲಿ 1 ಮಗುವಿಗೆ ಅಪೌಷ್ಟಿಕತೆ: ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆ

Date:

ಗಾಜಾದಲ್ಲಿ ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆ (ಯುಎನ್‌ಆರ್‌ಡಬ್ಲ್ಯುಎ) ನಡೆಸುತ್ತಿರುವ ಕ್ಲಿನಿಕ್‌ಗಳಲ್ಲಿ ತಪಾಸಣೆಗೊಳಗಾಗಿರುವ ಪ್ರತಿ 10 ಮಕ್ಕಳಲ್ಲಿ ಒಂದು ಮಗು ಅಪೌಷ್ಟಿಕತೆಯಿಂದ ಬಳಲುತ್ತಿದೆ ಎಂದು ಸಂಸ್ಥೆಯು ಮಂಗಳವಾರ ತಿಳಿಸಿದೆ.

- Advertisement -

‘‘ನಾಲ್ಕು ತಿಂಗಳ ಹಿಂದೆ ಗಾಝಾದ ಮೇಲಿನ ಮುತ್ತಿಗೆಯನ್ನು ಇಸ್ರೇಲ್ ಸೈನಿಕರು ಬಿಗಿಗೊಳಿಸಿದ ಬಳಿಕ, ಗಾಜಾದಲ್ಲಿ ಅಪೌಷ್ಟಿಕತೆ ಪ್ರಮಾಣ ಹೆಚ್ಚುತ್ತಿರುವುದನ್ನು ನಮ್ಮ ಆರೋಗ್ಯ ತಂಡಗಳು ಪತ್ತೆಹಚ್ಚಿವೆ’’ ಎಂದು ಯುಎನ್‌ಆರ್‌ಡಬ್ಲ್ಯುಎಯ ಸಾರ್ವಜನಿಕ ಸಂಪರ್ಕಗಳ ನಿರ್ದೇಶಕಿ ಜೂಲಿಯಟ್ ಟೌಮ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಅವರು ಜೋರ್ಡಾನ್‌ನ ಅಮ್ಮಾನ್‌ನಿಂದ ವಿಡಿಯೋ ಲಿಂಕ್ ಮೂಲಕ ಪತ್ರಕರ್ತರೊಂದಿಗೆ ಮಾತನಾಡುತ್ತಾ ಈ ಮಾಹಿತಿಯನ್ನು ನೀಡಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕಾನೂನು ಅಸ್ತ್ರವಾಗದಿರಲಿ, ಬಡವರ ಬಗ್ಗೆ ವಿವೇಚನೆಯಿಂದ ಬಳಸಲಿ

2024ರ ಜನವರಿಯ ಬಳಿಕ, ಗಾಜಾದಲ್ಲಿರುವ ತನ್ನ ಐದು ಕ್ಲಿನಿಕ್‌ ಗಳಲ್ಲಿ, ಐದು ವರ್ಷಕ್ಕಿಂತ ಕೆಳಗಿನ 2,40,000ಕ್ಕೂ ಅಧಿಕ ಗಂಡು ಮತ್ತು ಹೆಣ್ಣು ಮಕ್ಕಳನ್ನು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಜೂಲಿಯಟ್ ತಿಳಿಸಿದರು. ಯುದ್ಧಕ್ಕಿಂತ ಮೊದಲು, ಗಾಜಾಪಟ್ಟಿಯಲ್ಲಿ ತೀವ್ರ ಅಪೌಷ್ಟಿಕತೆ ಅಪರೂಪವಾಗಿತ್ತು ಎಂದು ಅವರು ಹೇಳಿದರು.

‘‘ಹಿಂದೆ, ಇಂಥ ಅಪೌಷ್ಟಿಕತೆಯ ಪ್ರಕರಣಗಳನ್ನು ತಾನು ಪಠ್ಯಪುಸ್ತಕಗಳು ಮತ್ತು ಸಾಕ್ಷ್ಯಚಿತ್ರಗಳಲ್ಲಿ ಮಾತ್ರ ನೋಡಿರುವುದಾಗಿ ನಾವು ಮಾತನಾಡಿದ ಓರ್ವ ನರ್ಸ್ ಹೇಳಿದ್ದಾರೆ. ಔಷಧ, ಪೌಷ್ಟಿಕ ಆಹರ, ಸ್ವಚ್ಛತಾ ಸಲಕರಣೆಗಳು, ಇಂಧನ ಎಲ್ಲವೂ ಕ್ಷಿಪ್ರವಾಗಿ ಮುಗಿಯುತ್ತಿದೆ’’ ಎಂದು ಅವರು ತಿಳಿಸಿದರು.

ಗಾಜಾದ ಮೇಲಿನ 11 ವಾರಗಳ ದಿಗ್ಬಂಧನವನ್ನು ಇಸ್ರೇಲ್‌ ಮೇ 19ರಂದು ತೆರವುಗೊಳಿಸಿದೆ. ಆ ಮೂಲಕ, ವಿಶ್ವಸಂಸ್ಥೆಯಿಂದ ಸೀಮಿತ ಪ್ರಮಾಣದ ಸರಬರಾಜುಗಳಿಗೆ ಅವಕಾಶ ನೀಡಿದೆ. ಆದರೆ, ಯುಎನ್‌ಆರ್‌ಡಬ್ಲ್ಯುಎ ಗಾಜಾಕ್ಕೆ ನೆರವು ತರುವುದನ್ನು ನಿಷೇಧಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಳುಗುತ್ತಿರುವ ಬ್ಯಾಂಕಾಕ್: 50 ಜಿಲ್ಲೆಗಳಲ್ಲಿ ‘ವಿಪತ್ತು’ ಘೋಷಣೆ, ಸ್ತಬ್ಧಗೊಂಡ ಜನಜೀವನ

ಸತತ ಮಳೆಯಿಂದಾಗಿ ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್ ಅಕ್ಷರಶಃ ಜಲಾವೃತಗೊಂಡಿದ್ದು, ನಗರದ ಎಲ್ಲಾ...

ವಿಶ್ವಸಂಸ್ಥೆಯಲ್ಲಿ ನೆತನ್ಯಾಹು ಭಾಷಣಕ್ಕೆ ಜಾಗತಿಕ ಬಹಿಷ್ಕಾರ: ಖುರ್ಚಿಗೆ ಅಂಟಿಕೊಂಡ ಭಾರತದ ಧೋರಣೆಗೆ ಖಂಡನೆ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (UNGA) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾಷಣ...

CNN, MS NOW, Politicoಗೆ ಶ್ವೇತಭವನ ಪ್ರವೇಶ ನಿರ್ಬಂಧ; ಟ್ರಂಪ್ ಆದೇಶಕ್ಕೆ ಫೆಡರಲ್ ಕೋರ್ಟ್ ತಡೆ

CNN, MS NOW ಮತ್ತು Politico ಸುದ್ದಿ‌ ಸಂಸ್ಥೆಗಳ ಪತ್ರಕರ್ತರಿಗೆ ಶ್ವೇತಭವನ...

ಸೂಚನೆಯಿಲ್ಲದೆ ಆಸ್ಟ್ರೇಲಿಯಾದ ಸರ್ಕಾರಿ ವೆಬ್‌ಸೈಟ್ ಹ್ಯಾಕ್ ಮಾಡಿದ ‘OpenAI’

ಆಸ್ಟ್ರೇಲಿಯಾದ ಸರ್ಕಾರಿ ಆರೋಗ್ಯ ಇಲಾಖೆಯ ವೆಬ್‌ಸೈಟ್‌ ಒಂದನ್ನು ಕೃತಕ ಬುದ್ಧಿಮತ್ತೆ (AI)...