ಆಸ್ಟ್ರೇಲಿಯಾ | ಯಹೂದಿ ಹಬ್ಬ ಹನುಕ್ಕಾ ಆಚರಣೆ ವೇಳೆ ಬೋಂಡಿ ಬೀಚ್‌ನಲ್ಲಿ ಭೀಕರ ಗುಂಡಿನ ದಾಳಿ; ಕನಿಷ್ಠ 10 ಮಂದಿ ಸಾವು

Date:

ಆಸ್ಟ್ರೇಲಿಯಾದ ಸಿಡ್ನಿ ನಗರದ ಪ್ರಸಿದ್ಧ ಬೋಂಡಿ ಬೀಚ್‌ ನಲ್ಲಿ ಯಹೂದಿ ಸಮುದಾಯದ ಎಂಟು ದಿನಗಳ ಹಬ್ಬವಾದ ಹನುಕ್ಕಾ ಆಚರಣೆ ಆರಂಭವಾಗುತ್ತಿದ್ದ ವೇಳೆ ನಡೆದ ಭೀಕರ ಗುಂಡಿನ ದಾಳಿಯಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದಾರೆ. ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಮೃತರ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ.

- Advertisement -

ಸ್ಥಳೀಯ ಕಾಲಮಾನ ಸಂಜೆ 6.30ರ ನಂತರ ಬೀಚ್ ಪ್ರದೇಶದಲ್ಲಿ ಇಬ್ಬರು ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಹನುಕ್ಕಾ ಹಬ್ಬದ ಮೊದಲ ರಾತ್ರಿ ಆಚರಣೆಗೆ ಸಂಬಂಧಿಸಿದ ‘ಚಾನುಕಾ ಬೈ ದಿ ಸೀ’ ಕಾರ್ಯಕ್ರಮಕ್ಕಾಗಿ ನೂರಾರು ಜನರು ಬೀಚ್‌ ನಲ್ಲಿ ಸೇರಿದ್ದ ಸಂದರ್ಭದಲ್ಲೇ ಈ ಘಟನೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಪ್ರತ್ಯಕ್ಷದರ್ಶಿಗಳ ಪ್ರಕಾರ, ದಾಳಿಯ ವೇಳೆ ಮಕ್ಕಳು ಮತ್ತು ವೃದ್ಧರನ್ನು ಗುರಿಯಾಗಿಸಿ ಸುಮಾರು 50 ಗುಂಡುಗಳು ಹಾರಿಸಲಾಗಿತ್ತು ಎನ್ನಲಾಗಿದೆ. ಗಾಯಾಳುಗಳಿಗೆ ಸಾರ್ವಜನಿಕರು ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ಹಾಗೂ ಸಿಪಿಆರ್ ನೀಡುತ್ತಿರುವ ದೃಶ್ಯಗಳು ಕಂಡುಬಂದಿವೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕುಸ್ತಿ ಅಖಾಡಕ್ಕೆ ಮರಳುವ ವಿನೇಶ್‌ ಫೋಗಟ್‌ ನಿರ್ಧಾರಕ್ಕೆ ಸ್ವಾಗತ!

ಭಾರತೀಯ ಕಾಲಮಾನ ಮಧ್ಯಾಹ್ನ 2.17ರ ಸುಮಾರಿಗೆ ನ್ಯೂ ಸೌತ್ ವೇಲ್ಸ್ ಪೊಲೀಸರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬೋಂಡಿ ಬೀಚ್‌ ನಲ್ಲಿ ಗುಂಡಿನ ದಾಳಿಯ ಬಗ್ಗೆ ತಿಳಿಸಿ, ಸ್ಥಳದಲ್ಲಿರುವವರು ಸುರಕ್ಷಿತ ಆಶ್ರಯ ಪಡೆಯುವಂತೆ ಎಚ್ಚರಿಕೆ ನೀಡಿದ್ದರು. ಬಳಿಕ ಪೊಲೀಸರು ಇಬ್ಬರು ಶೂಟರ್‌ ಗಳನ್ನು ವಶಕ್ಕೆ ಪಡೆಯಲಾಗಿದೆ. ಆ ಪ್ರದೇಶದಲ್ಲಿ ಪೊಲೀಸ್ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.

ಘಟನೆಗೆ ಪ್ರತಿಕ್ರಿಯಿಸಿದ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್, “ಬೋಂಡಿಯಲ್ಲಿನ ದೃಶ್ಯಗಳು ಅತ್ಯಂತ ಆಘಾತಕಾರಿಯಾಗಿದೆ. ಪೊಲೀಸರು ಮತ್ತು ತುರ್ತು ಸೇವಾ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ,” ಎಂದು ಹೇಳಿದ್ದಾರೆ. NSW ಸರ್ಕಾರ ಮತ್ತು ಫೆಡರಲ್ ಪೊಲೀಸರೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ಅವರು ತಿಳಿಸಿದ್ದಾರೆ.

ವಿರೋಧ ಪಕ್ಷದ ನಾಯಕಿ ಸುಸಾನ್ ಲೇ ಕೂಡ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. “ನಾವೆಲ್ಲರೂ ಪ್ರೀತಿಸುವ ಬೋಂಡಿಯಂತಹ ಸ್ಥಳದಲ್ಲಿ ದ್ವೇಷಪೂರಿತ ಹಿಂಸಾಚಾರ ನಡೆದಿದೆ. ಶಾಂತಿ ಮತ್ತು ಭರವಸೆಯ ಸಂಕೇತವಾಗಿದ್ದ ಹನುಕ್ಕಾ ಆಚರಣೆಯ ವೇಳೆ ಈ ದಾಳಿ ಸಂಭವಿಸಿರುವುದು ಆತಂತಕಾರಿಯಾಗಿದೆ,” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

CNN, MS NOW, Politicoಗೆ ಶ್ವೇತಭವನ ಪ್ರವೇಶ ನಿರ್ಬಂಧ; ಟ್ರಂಪ್ ಆದೇಶಕ್ಕೆ ಫೆಡರಲ್ ಕೋರ್ಟ್ ತಡೆ

CNN, MS NOW ಮತ್ತು Politico ಸುದ್ದಿ‌ ಸಂಸ್ಥೆಗಳ ಪತ್ರಕರ್ತರಿಗೆ ಶ್ವೇತಭವನ...

ಸೂಚನೆಯಿಲ್ಲದೆ ಆಸ್ಟ್ರೇಲಿಯಾದ ಸರ್ಕಾರಿ ವೆಬ್‌ಸೈಟ್ ಹ್ಯಾಕ್ ಮಾಡಿದ ‘OpenAI’

ಆಸ್ಟ್ರೇಲಿಯಾದ ಸರ್ಕಾರಿ ಆರೋಗ್ಯ ಇಲಾಖೆಯ ವೆಬ್‌ಸೈಟ್‌ ಒಂದನ್ನು ಕೃತಕ ಬುದ್ಧಿಮತ್ತೆ (AI)...

10 ಸಾವಿರ ಸಂಸ್ಥೆಗಳ ಇ-ಮೇಲ್ ಹ್ಯಾಕ್: ಸೈಬರ್ ವಂಚಕರ ‘ಎಐ ಚಾಟ್‌ಬಾಟ್’ ಸ್ಥಗಿತಗೊಳಿಸಿದ ಮೈಕ್ರೋಸಾಫ್ಟ್

ವಿಶ್ವಾದ್ಯಂತ 10,000ಕ್ಕೂ ಹೆಚ್ಚು ಸಂಸ್ಥೆಗಳಿಗೆ ಸೇರಿದ 12,000ಕ್ಕೂ ಅಧಿಕ ಇ-ಮೇಲ್ ಖಾತೆಗಳನ್ನು...

11 ವರ್ಷಗಳ ಬಳಿಕ ಅಮೆರಿಕಕ್ಕೆ ಜಿನ್‌ಪಿಂಗ್; ಭೇಟಿಯ ನಿರೀಕ್ಷೆ ಏನು?

ಚೀನಾದ ಅಧ್ಯಕ್ಷ ಕ್ಷಿ ಜಿನ್‌ಪಿಂಗ್ 11 ವರ್ಷಗಳ ಬಳಿಕ ಅಮೆರಿಕಕ್ಕೆ ಅಧಿಕೃತ...