ಪಾಕಿಸ್ತಾನ | ರೈಲು ಹೈಜಾಕ್; 150ಕ್ಕೂ ಹೆಚ್ಚು ಒತ್ತೆಯಾಳುಗಳ ರಕ್ಷಣೆ, 27 ದಂಗೆಕೋರರ ಹತ್ಯೆ

Date:

ಪಾಕಿಸ್ತಾನದ ಲೂಚಿಸ್ತಾನ ಪ್ರದೇಶದಲ್ಲಿ 400ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ರೈಲನ್ನು ದಂಗೆಕೋರರು ಹೈಜಾಕ್ ಮಾಡಿದ್ದು, ಸದ್ಯ ಸುಮಾರು 150ಕ್ಕೂ ಹೆಚ್ಚು ಒತ್ತೆಯಾಳುಗಳನ್ನು ರಕ್ಷಿಸಲಾಗಿದೆ. ಹಾಗೆಯೇ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 27 ದಂಗೆಕೋರರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

- Advertisement -

ಬಂಡುಕೋರರೊಂದಿಗೆ ಗುಂಡಿನ ಚಕಮಕಿ ನಡೆದ ನಂತರ ಭದ್ರತಾ ಪಡೆಗಳು 155 ಒತ್ತೆಯಾಳುಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಕ್ಕಳು, ಮಹಿಳೆಯರು ಸೇರಿದಂತೆ ರಕ್ಷಿಸಲ್ಪಟ್ಟ ಒತ್ತೆಯಾಳುಗಳನ್ನು ಸಮೀಪದ ಪಟ್ಟಣ ಮಾಚ್‌ಗೆ ಕರೆದೊಯ್ಯಲಾಗಿದೆ. ಅಲ್ಲಿ ತಾತ್ಕಾಲಿಕ ಆಸ್ಪತ್ರೆ ಸ್ಥಾಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಪಾಕಿಸ್ತಾನ | ಬಂಡುಕೋರರಿಂದ ರೈಲು ‘ಹೈಜಾಕ್’; ಒತ್ತೆಯಾಳಾಗಿ 100 ಮಂದಿ ಸೆರೆ!

ಬಲೂಚಿಸ್ತಾನ್ ಲಿಬರೇಶನ್ ಆರ್ಮಿಯ (ಬಿಎಲ್‌ಎ) ಬಂಡುಕೋರರು ಮತ್ತು ಪಾಕಿಸ್ತಾನಿ ಪಡೆಗಳ ನಡುವಿನ ಗುಂಡಿನ ಚಕಮಕಿ ರಾತ್ರಿಯಿಡೀ ಮುಂದುವರೆದಿದೆ. ಸದ್ಯ ಜಾಫರ್ ಎಕ್ಸ್‌ಪ್ರೆಸ್‌ನಲ್ಲಿ ಎಷ್ಟು ಒತ್ತೆಯಾಳುಗಳು ಉಳಿದಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ. ಪ್ರತ್ಯೇಕತಾವಾದಿ ಗುಂಪು ಬಿಎಲ್‌ಎ ಯಾವುದೇ ಒತ್ತೆಯಾಳುಗಳ ಸಾವುನೋವನ್ನು ನಿರಾಕರಿಸಿದ್ದಾರೆ. ಆದರೆ 30 ಯೋಧರನ್ನು ಕೊಂದಿರುವುದಾಗಿ ಹೇಳಿಕೊಂಡಿದೆ. ಆದರೆ ಇದನ್ನು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ.

ಬಂಡುಕೋರರ ಗುಂಪೊಂದು ಕೆಲವು ಒತ್ತೆಯಾಳುಗಳನ್ನು ಪರ್ವತಗಳಿಗೆ ಕರೆದೊಯ್ದಿದ್ದು ಸದ್ಯ ಭದ್ರತಾ ಪಡೆಗಳು ಅವರನ್ನು ಬೆನ್ನಟ್ಟುತ್ತಿವೆ ಎಂದು ಹೇಳಲಾಗಿದೆ. ಇನ್ನು ಬಂಡುಕೋರರು ತಪ್ಪಿಸಿಕೊಳ್ಳಲು ಸಣ್ಣ ಗುಂಪುಗಳಾಗಿ ಬೇರ್ಪಟ್ಟಿದ್ದಾರೆ ಎಂದು ವರದಿಯಾಗಿದೆ. ಸದ್ಯ ಮಿಲಿಟರಿ ಪಡೆಗಳು ಸುರಂಗವನ್ನು ಸುತ್ತುವರೆದಿವೆ.

ಕ್ವೆಟ್ಟಾದಿಂದ ಪೇಶಾವರಕ್ಕೆ ಹೋಗುವ ದಾರಿಯಲ್ಲಿ ಸಾಗುತ್ತಿದ್ದ ಜಾಫರ್ ಎಕ್ಸ್‌ಪ್ರೆಸ್ ಅನ್ನು ಸುರಂಗವೊಂದರಲ್ಲಿ ಸಶಸ್ತ್ರ ದಾಳಿಕೋರರು ತಡೆದಿದ್ದಾರೆ. ರೈಲಿನ ಒಂಬತ್ತು ಬೋಗಿಗಳಲ್ಲಿ ಕನಿಷ್ಠ 400 ಪ್ರಯಾಣಿಕರಿದ್ದರು. ಒಂದು ತಿಂಗಳ ಕಾಲ ಈ ಮಾರ್ಗ ಮುಚ್ಚಲಾಗಿತ್ತು. ಆದರೆ ಇತ್ತೀಚೆಗೆ ಈ ರೈಲು ಮಾರ್ಗ ತೆರೆಯಲಾಗಿದೆ. ಇದೀಗ ಈ ಮಾರ್ಗದಲ್ಲಿಯೇ ರೈಲು ಹೈಜಾಕ್ ಆಗಿದೆ.

ಬಲೂಚಿಸ್ತಾನಕ್ಕೆ ಸ್ವಾತಂತ್ರ್ಯ ನೀಡಬೇಕು ಎಂದು ಆಗ್ರಹಿಸುತ್ತಿರುವ ಪ್ರಬಲ ಪ್ರತ್ಯೇಕತಾವಾದಿ ಗುಂಪು ಬಿಎಲ್‌ಎ ಈ ಅಪಹರಣದ ಬಗ್ಗೆ ತಿಳಿಸಿದೆ. ಮೊದಲು ಹಳಿಗಳನ್ನು ಸ್ಫೋಟಿಸಿದ್ದು ಬಳಿಕ ಲೋಕೋಮೋಟಿವ್ ಚಾಲಕನನ್ನು ಕೊಲ್ಲಲಾಗಿದೆ ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...