ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಾಲಿದಾ ಝಿಯಾ ನಿಧನ

Date:

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಮಾಜಿ ಪ್ರಧಾನಿ, ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಕ್ಷದ ಅಧ್ಯಕ್ಷೆ ಬೇಗಂ ಖಾಲಿದಾ ಝಿಯಾ ಮಂಗಳವಾರ ಬೆಳಗ್ಗೆ ನಿಧನರಾಗಿದ್ದಾರೆ.

- Advertisement -

ಅವರಿಗೆ 80 ವರ್ಷ ವಯಸ್ಸಾಗಿತ್ತು. ‌ವಯೋಸಹಜ ಅನಾರೋಗ್ಯದ ಜೊತೆಗೆ ಹೃದಯ ಸಮಸ್ಯೆ ಹೊಂದಿದ್ದ ಖಾಲಿದಾ ಅವರು, ಮಂಗಳವಾರ ಬೆಳಗ್ಗೆ 6ರ ಸುಮಾರಿಗೆ ಕೊನೆಯುಸಿರೆಳೆದಿರುವುದಾಗಿ ಬಾಂಗ್ಲಾದೇಶ್ ನ್ಯಾಷನಲ್ ಪಾರ್ಟಿ(BNP)ಯ ವಕ್ತಾರರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

1991ರಲ್ಲಿ ಖಾಲಿದಾ ಝಿಯಾ ಅವರು ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿಯಾಗಿ ಆಯ್ಕೆಯಾಗಿದ್ದರು.

ಬಾಂಗ್ಲಾದೇಶದ ರಾಜಕೀಯದಲ್ಲಿ ಪ್ರಮುಖ ನಾಯಕಿಯಾಗಿ ಗುರುತಿಸಿದ್ದ ಖಾಲಿದಾ ಅವರು, ಮಾಜಿ ಪ್ರಧಾನಿ, ಸಂಘರ್ಷದ ಬಳಿಕ ಸದ್ಯ ಭಾರತದಲ್ಲಿ ಆಶ್ರಯ ಪಡೆದಿರುವ ಶೇಖ್ ಹಸೀನಾ ಅವರೊಂದಿಗೆ ಪೈಪೋಟಿಗೆ ಹೆಸರುವಾಸಿಯಾಗಿದ್ದರು.

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಖಾಲಿದಾ ಝಿಯಾ ಅವರು, ಢಾಕಾದ ಎವರ್‌ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ.

ಖಾಲಿದಾ ಝಿಯಾ ಅವರಿಗೆ ಭ್ರಷ್ಟಾಚಾರ ಪ್ರಕರಣದಲ್ಲಿ 2018ರಲ್ಲಿ 17 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಪ್ರಧಾನಿಯಾಗಿದ್ದ ಶೇಖ್ ಹಸೀನಾ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿ ಪಲಾಯನ ಮಾಡಿದ ಬೆನ್ನಲ್ಲೇ, ಬಾಂಗ್ಲಾದೇಶದ ಸೇನೆ ದೇಶದ ಅಧಿಕಾರ ತನ್ನ ಹಿಡಿತದಲ್ಲಿಟ್ಟುಕೊಂಡಿತ್ತು. ಈ ನಡುವೆ ಮಾಜಿ ಪ್ರಧಾನಿ ಹಾಗೂ ಪ್ರತಿಪಕ್ಷ ನಾಯಕಿ ಖಾಲಿದಾ ಝಿಯಾ ಅವರನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಆದೇಶಿಸಿದ್ದರಿಂದ ಜೈಲಿನಿಂದ ಬಿಡುಗಡೆ ಹೊಂದಿದ್ದರು.

ಕಳೆದ ವರ್ಷ ಶೇಖ್ ಹಸೀನಾ ಸರ್ಕಾರದ ಪತನಕ್ಕೆ ಕಾರಣವಾದ ಸಾಮೂಹಿಕ ಪ್ರತಿಭಟನೆಗಳಲ್ಲಿ ಪ್ರಮುಖವಾಗಿ ಕಾಣಿಸಿಕೊಂಡಿದ್ದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಎಂಬಾತನ ಹತ್ಯೆಯ ನಂತರ ಬಾಂಗ್ಲಾದಲ್ಲಿ ಅಶಾಂತಿ ಮತ್ತು ರಾಜಕೀಯ ಅಸ್ಥಿರತೆ ತೀವ್ರಗೊಂಡಿದೆ. ಇದರ ಮಧ್ಯೆಯೇ 17 ವರ್ಷಗಳ ಕಾಲ ಸ್ವಯಂ ಗಡಿಪಾರಿನ ನಂತರ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷ (ಬಿಎನ್‌ಪಿ)ದ ಹಂಗಾಮಿ ಅಧ್ಯಕ್ಷ, ಖಾಲಿದಾ ಝಿಯಾ ಅವರ ಮಗ ತಾರಿಕ್ ರೆಹಮಾನ್ ಇತ್ತೀಚೆಗಷ್ಟೇ ಸ್ವದೇಶಕ್ಕೆ ಮರಳಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾರ್ಮುಜ್ ಜಲಸಂಧಿಯಲ್ಲಿ ಕುವೈತ್ ಹಡಗಿನ ಮೇಲೆ ದಾಳಿ: ಐವರು ಭಾರತೀಯರ ರಕ್ಷಣೆ

ಹಾರ್ಮುಜ್ ಜಲಸಂಧಿಯಲ್ಲಿ ಕುವೈತ್ ಧ್ವಜವಿದ್ದ ತೈಲ ಹಡಗಿನ ಮೇಲೆ ಸ್ಫೋಟಕ ವಸ್ತುವಿನಿಂದ...

‘Instagram ಹೆಣ್ಮಕ್ಕಳಿಗೆ ಮಾತ್ರ’; ಎಲಾನ್ ಮಸ್ಕ್ ಹೀಗ್ಯಾಕಂದ್ರು?

ಟೆಕ್ ಜೈಂಟ್ ಎಲಾನ್ ಮಸ್ಕ್ ಮತ್ತೊಮ್ಮೆ ತಮ್ಮ ವಿವಾದಾತ್ಮಕ ಹೇಳಿಕೆಗಳ...