ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಾಲಿದಾ ಝಿಯಾ ನಿಧನ

Date:

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಮಾಜಿ ಪ್ರಧಾನಿ, ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಕ್ಷದ ಅಧ್ಯಕ್ಷೆ ಬೇಗಂ ಖಾಲಿದಾ ಝಿಯಾ ಮಂಗಳವಾರ ಬೆಳಗ್ಗೆ ನಿಧನರಾಗಿದ್ದಾರೆ.

- Advertisement -

ಅವರಿಗೆ 80 ವರ್ಷ ವಯಸ್ಸಾಗಿತ್ತು. ‌ವಯೋಸಹಜ ಅನಾರೋಗ್ಯದ ಜೊತೆಗೆ ಹೃದಯ ಸಮಸ್ಯೆ ಹೊಂದಿದ್ದ ಖಾಲಿದಾ ಅವರು, ಮಂಗಳವಾರ ಬೆಳಗ್ಗೆ 6ರ ಸುಮಾರಿಗೆ ಕೊನೆಯುಸಿರೆಳೆದಿರುವುದಾಗಿ ಬಾಂಗ್ಲಾದೇಶ್ ನ್ಯಾಷನಲ್ ಪಾರ್ಟಿ(BNP)ಯ ವಕ್ತಾರರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | 40 ವರ್ಷ ದುಡಿದರೂ ಗಜಾನನ ಸಂಸ್ಥೆ...

ಮಲೆನಾಡಿನ ಸಾರಿಗೆ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದ ಸಾಗರ ತಾಲೂಕಿನ ಹೆಸರಾಂತ ಗಜಾನನ ಬಸ್ ಸಂಸ್ಥೆ ಒಂದು ಕಾಲದಲ್ಲಿ ಸುಮಾರು 150ಕ್ಕೂ ಹೆಚ್ಚು ಬಸ್‌ಗಳ ಮೂಲಕ ಜನಪ್ರಿಯತೆ ಗಳಿಸಿತ್ತು. ಸಂಸ್ಥೆಯ ಬೆಳವಣಿಗೆಯಲ್ಲಿ...

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ ಸೌಲಭ್ಯವಾದ ಡಾಂಬರ್ ರಸ್ತೆ ಕಾಣದೆ ಅದೆಷ್ಟೋ ವರ್ಷ ಕಳೆದಿದೆ. ನಮ್ಮ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಯಾವ ರಾಜಕೀಯ ಪಕ್ಷಗಳು...

ಪ.ಬಂಗಾಳ- SIR ಮೇಲ್ಮನವಿ | 19 ನ್ಯಾಯಾಧಿಕರಣಗಳ ದುರ್ಗತಿ-...

ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯ (ಎಸ್‌ಐಆರ್‌) ಮೇಲ್ಮನವಿಗಳ ಇತ್ಯರ್ಥಕ್ಕೆ ಸ್ಥಾಪಿಸಲಾದ 19 ನ್ಯಾಯಾಧಿಕರಣಗಳು ಸಾಲುಸಾಲು ಸಮಸ್ಯೆಗಳ ಸುಳಿಯಲ್ಲಿ ಸಿಲುಕಿವೆ. ಕಾರ್ಯಭಾರ, ಕೆಂಪುಪಟ್ಟಿ ಆಡಳಿತದಿಂದ ನಿವೃತ್ತ ನ್ಯಾಯಮೂರ್ತಿಗಳ ರಾಜೀನಾಮೆ, ಸಿಬ್ಬಂದಿಯ ವೇತನ ವಿಳಂಬದ...

1991ರಲ್ಲಿ ಖಾಲಿದಾ ಝಿಯಾ ಅವರು ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿಯಾಗಿ ಆಯ್ಕೆಯಾಗಿದ್ದರು.

ಬಾಂಗ್ಲಾದೇಶದ ರಾಜಕೀಯದಲ್ಲಿ ಪ್ರಮುಖ ನಾಯಕಿಯಾಗಿ ಗುರುತಿಸಿದ್ದ ಖಾಲಿದಾ ಅವರು, ಮಾಜಿ ಪ್ರಧಾನಿ, ಸಂಘರ್ಷದ ಬಳಿಕ ಸದ್ಯ ಭಾರತದಲ್ಲಿ ಆಶ್ರಯ ಪಡೆದಿರುವ ಶೇಖ್ ಹಸೀನಾ ಅವರೊಂದಿಗೆ ಪೈಪೋಟಿಗೆ ಹೆಸರುವಾಸಿಯಾಗಿದ್ದರು.

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಖಾಲಿದಾ ಝಿಯಾ ಅವರು, ಢಾಕಾದ ಎವರ್‌ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ.

ಖಾಲಿದಾ ಝಿಯಾ ಅವರಿಗೆ ಭ್ರಷ್ಟಾಚಾರ ಪ್ರಕರಣದಲ್ಲಿ 2018ರಲ್ಲಿ 17 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಪ್ರಧಾನಿಯಾಗಿದ್ದ ಶೇಖ್ ಹಸೀನಾ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿ ಪಲಾಯನ ಮಾಡಿದ ಬೆನ್ನಲ್ಲೇ, ಬಾಂಗ್ಲಾದೇಶದ ಸೇನೆ ದೇಶದ ಅಧಿಕಾರ ತನ್ನ ಹಿಡಿತದಲ್ಲಿಟ್ಟುಕೊಂಡಿತ್ತು. ಈ ನಡುವೆ ಮಾಜಿ ಪ್ರಧಾನಿ ಹಾಗೂ ಪ್ರತಿಪಕ್ಷ ನಾಯಕಿ ಖಾಲಿದಾ ಝಿಯಾ ಅವರನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಆದೇಶಿಸಿದ್ದರಿಂದ ಜೈಲಿನಿಂದ ಬಿಡುಗಡೆ ಹೊಂದಿದ್ದರು.

ಕಳೆದ ವರ್ಷ ಶೇಖ್ ಹಸೀನಾ ಸರ್ಕಾರದ ಪತನಕ್ಕೆ ಕಾರಣವಾದ ಸಾಮೂಹಿಕ ಪ್ರತಿಭಟನೆಗಳಲ್ಲಿ ಪ್ರಮುಖವಾಗಿ ಕಾಣಿಸಿಕೊಂಡಿದ್ದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಎಂಬಾತನ ಹತ್ಯೆಯ ನಂತರ ಬಾಂಗ್ಲಾದಲ್ಲಿ ಅಶಾಂತಿ ಮತ್ತು ರಾಜಕೀಯ ಅಸ್ಥಿರತೆ ತೀವ್ರಗೊಂಡಿದೆ. ಇದರ ಮಧ್ಯೆಯೇ 17 ವರ್ಷಗಳ ಕಾಲ ಸ್ವಯಂ ಗಡಿಪಾರಿನ ನಂತರ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷ (ಬಿಎನ್‌ಪಿ)ದ ಹಂಗಾಮಿ ಅಧ್ಯಕ್ಷ, ಖಾಲಿದಾ ಝಿಯಾ ಅವರ ಮಗ ತಾರಿಕ್ ರೆಹಮಾನ್ ಇತ್ತೀಚೆಗಷ್ಟೇ ಸ್ವದೇಶಕ್ಕೆ ಮರಳಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನವ-ಉದಾರವಾದದ ಬಿಕ್ಕಟ್ಟು ಮತ್ತು ಫ್ಯಾಸಿಸ್ಟ್-ವಿರೋಧಿ ಅರ್ಥಶಾಸ್ತ್ರ: ಡಾ. ಇಸಬೆಲ್ಲಾ ವೆಬರ್ ಒಳನೋಟಗಳು

ಪ್ರಸ್ತುತ ಜಗತ್ತನ್ನು ಕಾಡುತ್ತಿರುವ ಬೆಲೆ ಏರಿಕೆ, ಆರ್ಥಿಕ ಅಸಮಾನತೆ ಮತ್ತು ಅದರಿಂದಾಗಿ...

‘ಎಪ್ಸ್ಟೀನ್‌’ನದ್ದು ಆತ್ಮಹತ್ಯೆಯಲ್ಲ, ಕೊಲೆ! ತಜ್ಞರ ಹೊಸ ಅಧ್ಯಯನದಿಂದ ಸ್ಫೋಟ; ವಿಕೃತ ಕಾಮುಕನ ಸಾವಿನ ರಹಸ್ಯವೇನು?

ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ಪ್ರಕರಣ ಸೇರಿದಂತೆ ವಿಧಿವಿಜ್ಞಾನ ಕ್ಷೇತ್ರದಲ್ಲಿ ಕೆಲಸ...

ಹೆಬ್ಬಂಡೆಯೊಳಗೊಂದು ಡೈನೋಸಾರ್ ಕೌತುಕ: 7.5 ಕೋಟಿ ವರ್ಷ ಹಳೆಯ ಪಳೆಯುಳಿಕೆ ಪತ್ತೆ!

ಆ ಡೈನೋಸಾರ್ ಬದುಕಿದ್ದು 750 ಲಕ್ಷ ವರ್ಷಗಳ ಹಿಂದೆ. ಮಾನವ ಪ್ರಭೇದದ...

ಷೇರುದಾರರ ಇಂದಿನ ಜಾಗತಿಕ ಮಂತ್ರ- ‘ಅಮೆರಿಕವನ್ನು ನಂಬಿ ಹಣ ಹೂಡಿ’

ಅಮೆರಿಕನ್ನರು ಮಾತ್ರವಲ್ಲ, ವಿದೇಶಗಳ ಸಾಮಾನ್ಯ ಜನರೂ ಮುಗಿಬಿದ್ದು ಅಮೆರಿಕದ ಷೇರುಗಳನ್ನು ಕೊಳ್ಳುತ್ತಿದ್ದಾರೆ....