ಪಾಕಿಸ್ತಾನ | ಸೈನಿಕರಿದ್ದ ರೈಲಿಗೆ ಸ್ಫೋಟಕಗಳಿದ್ದ ಕಾರು ಡಿಕ್ಕಿ: 24 ಮಂದಿ ಸಾವು

Date:

ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಮಿಲಿಟರಿ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ರೈಲಿಗೆ ಸ್ಪೋಟಕಗಳಿದ್ದ ಕಾರು ಡಿಕ್ಕಿ ಹೊಡೆದಿದ್ದು, ಕನಿಷ್ಠ 24 ಮಂದಿ ಸಾವನ್ನಪ್ಪಿದ್ದಾರೆ. 12 ಅಧಿಕ ಮಂದಿ ಗಾಯಗೊಂಡಿದ್ದಾರೆ. ರೈಲು ಕ್ವೆಟ್ಟಾದ ಚಮನ್ ಪಟ್ಟಕ್‌ನಲ್ಲಿ ಸಿಗ್ನಲ್ ಅನ್ನು ಹಾದುಹೋಗುತ್ತಿದ್ದಾಗ ಸ್ಫೋಟಕಗಳನ್ನು ಹೊಂದಿದ್ದ ಕಾರು ಒಂದು ಬೋಗಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.

- Advertisement -

ಮೃತರಲ್ಲಿ ಪೇಶಾವರಕ್ಕೆ ಹೋಗುತ್ತಿದ್ದ ಅನೇಕ ಸೇನಾ ಸೈನಿಕರು ಮತ್ತು ಅವರ ಕುಟುಂಬ ಸದಸ್ಯರೂ ಇದ್ದಾರೆ. ಈ ಸೈನಿಕರು ಮಂಗಳವಾರ ಪ್ರಾರಂಭವಾಗಲಿರುವ ಈದ್ ಹಬ್ಬದ ರಜೆಯಲ್ಲಿದ್ದರು. ಸ್ಫೋಟದ ಬಲದಿಂದಾಗಿ ಎರಡು ರೈಲು ಬೋಗಿಗಳು ಉರುಳಿ ಬೆಂಕಿ ಹೊತ್ತಿಕೊಂಡಿದೆ ಎಂದು ವರದಿ ಉಲ್ಲೇಖಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನು ಓದಿದ್ದೀರಾ? ಪಾಕಿಸ್ತಾನ | ರೈಲು ನಿಲ್ದಾಣದಲ್ಲಿ ಬಾಂಬ್ ಸ್ಫೋಟ; ಯೋಧರು ಸೇರಿ ಕನಿಷ್ಠ 25 ಮಂದಿ ಸಾವು

ರೈಲ್ವೆ ಹಳಿಗಳಿಂದ ಸುಮಾರು 25 ರಿಂದ 30 ಮೀಟರ್ ದೂರದಲ್ಲಿ ನಿಲ್ಲಿಸಲಾಗಿದ್ದ ಅನೇಕ ಕಾರುಗಳು ಸಂಪೂರ್ಣವಾಗಿ ಸುಟ್ಟುಹೋಗಿವೆ. ಅವುಗಳ ಪಕ್ಕದಲ್ಲಿ, ಬಹುಮಹಡಿ ಕಟ್ಟಡವೂ ಸಂಪೂರ್ಣವಾಗಿ ಸುಟ್ಟುಹೋಗಿದೆ.

ಬಲೂಚ್ ಲಿಬರೇಶನ್ ಆರ್ಮಿ (ಬಿಎಲ್‌ಎ) ದಾಳಿಯ ಹೊಣೆಯನ್ನು ಹೊತ್ತುಕೊಂಡಿದ್ದು, ಇದು ಆತ್ಮಹತ್ಯಾ ಸ್ಫೋಟ ಎನ್ನಲಾಗಿದೆ. “ಇಂದು ಬೆಳಿಗ್ಗೆ, ಬಲೂಚ್ ಲಿಬರೇಶನ್ ಆರ್ಮಿಯ ಫಿದಾಯಿ (ಸ್ವಯಂ ತ್ಯಾಗ) ಘಟಕವಾದ ಮಜೀದ್ ಬ್ರಿಗೇಡ್, ಕ್ವೆಟ್ಟಾ ಕ್ಯಾಂಟ್‌ನಿಂದ ಆಕ್ರಮಿತ ಪಡೆಗಳ ಸಿಬ್ಬಂದಿಯನ್ನು ಸಾಗಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ಫಿದಾಯಿ ದಾಳಿ ನಡೆಸಿದೆ. ಬಲೂಚ್ ಲಿಬರೇಶನ್ ಆರ್ಮಿ ಈ ಕಾರ್ಯಾಚರಣೆಯ ಸಂಪೂರ್ಣ ಜವಾಬ್ದಾರಿಯನ್ನು ಹೊರುತ್ತದೆ” ಎಂದು ಬಿಎಲ್‌ಎ ಹೇಳಿಕೆಯಲ್ಲಿ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅತ್ತು ಕರೆದು ಬೆದರಿಸಿ ರಚ್ಚೆ ಹಿಡಿದರೂ ಟ್ರಂಪ್’ಗೆ ಒಲಿಯಲಿಲ್ಲ ನೊಬೆಲ್ ಪುರಸ್ಕಾರ

ನೊಬೆಲ್ ಶಾಂತಿ ಪುರಸ್ಕಾರ ತಮಗೇ ಸಿಗಬೇಕೆಂದು ಪದೇ ಪದೇ ಒತ್ತಾಯಿಸುತ್ತಿದ್ದ ಅಮೆರಿಕ...

ಔರಾದ್ | ಶೋಷಿತ ಸಮುದಾಯಗಳ ರಾಜಕೀಯ ಜಾಗೃತಿಗೆ ಶ್ರಮಿಸಿದ ಕಾನ್ಶಿರಾಂ

ದಲಿತರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರ ರಾಜಕೀಯ ಹಕ್ಕುಗಳಿಗಾಗಿ ಹೋರಾಟ ರೂಪಿಸಿ, ಬಹುಜನ...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ ಅಪರೂಪದ ಕಲಾವಿದ

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ...

ವಿಜಯಪುರ | ಅಕ್ಟೋಬರ್ 4ನೇ ವಾರದಲ್ಲಿ ನಶಾ ಮುಕ್ತ ಭಾರತ ಅಭಿಯಾನ: ಜಿಲ್ಲಾಧಿಕಾರಿ ಆನಂದ ಕೆ

ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಯುವಜನತೆಯನ್ನು...