ಅಫ್ಘಾನಿಸ್ತಾನದಲ್ಲಿ 6.0 ತೀವ್ರತೆಯ ಭೂಕಂಪ: 250 ಸಾವು, ಕನಿಷ್ಠ 500 ಮಂದಿಗೆ ಗಾಯ

Date:

ಪಾಕಿಸ್ತಾನ ಗಡಿಯ ಬಳಿ ಪೂರ್ವ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದಾಗಿ ಹಲವು ಹಳ್ಳಿಗಳು ನಾಶವಾಗಿದ್ದು, ಕನಿಷ್ಠ 250 ಮಂದಿ ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 500 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

- Advertisement -

ಭಾನುವಾರ ತಡರಾತ್ರಿ ಸಂಭವಿಸಿದ ಭೂಕಂಪದಿಂದಾಗಿ ನೆರೆಯ ನಂಗಹಾರ್ ಪ್ರಾಂತ್ಯದ ಜಲಾಲಾಬಾದ್ ನಗರದ ಬಳಿಯ ಕುನಾರ್ ಪ್ರಾಂತ್ಯದ ಹಲವು ಪಟ್ಟಣಗಳಲ್ಲಿ ಹಾನಿ ಉಂಟು ಮಾಡಿದೆ. ರಾತ್ರಿ 11:47 ಕ್ಕೆ ಸಂಭವಿಸಿದ 6.0 ತೀವ್ರತೆಯ ಭೂಕಂಪದಿಂದಾಗಿ ನೂರ್ ಗುಲ್, ಸೋಕಿ, ವಾಟ್ಪುರ್, ಮನೋಗಿ ಮತ್ತು ಚಪದರೆ ಜಿಲ್ಲೆಗಳಲ್ಲಿ ಅಧಿಕ ಹಾನಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ಅಫ್ಘಾನಿಸ್ತಾನ | ಪ್ರಬಲ ಭೂಕಂಪದಲ್ಲಿ 2 ಸಾವಿರಕ್ಕೂ ಹೆಚ್ಚು ಸಾವು

ಈ ಬಗ್ಗೆ ಮಾಹಿತಿ ನೀಡಿರುವ ಸಾರ್ವಜನಿಕ ಆರೋಗ್ಯ ಸಚಿವಾಲಯದ ವಕ್ತಾರ ಶರಫತ್ ಜಮಾನ್, “ಇನ್ನೂ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ ಮತ್ತು ಹಲವಾರು ಗ್ರಾಮಗಳು ಸಂಪೂರ್ಣವಾಗಿ ನಾಶವಾಗಿವೆ. ಮೃತರು ಮತ್ತು ಗಾಯಾಳುಗಳ ಅಂಕಿಅಂಶಗಳು ಬದಲಾಗುತ್ತಿವೆ. ಕುನಾರ್, ನಂಗರ್ಹಾರ್ ಮತ್ತು ರಾಜಧಾನಿ ಕಾಬೂಲ್‌ನಿಂದ ವೈದ್ಯಕೀಯ ತಂಡಗಳು ಈ ಪ್ರದೇಶಕ್ಕೆ ಬಂದಿವೆ” ಎಂದು ತಿಳಿಸಿದ್ದಾರೆ.

ಅನೇಕ ಪ್ರದೇಶಗಳು ಸಾವುನೋವುಗಳ ಅಂಕಿಅಂಶಗಳನ್ನು ವರದಿ ಮಾಡಲು ಸಾಧ್ಯವಾಗಿಲ್ಲ ಮತ್ತು ಸಾವು ಮತ್ತು ಗಾಯಗಳ ವರದಿಯಾಗುತ್ತಿದ್ದಂತೆ ಅಂಕಿಅಂಶಗಳು ಬದಲಾಗುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

2023ರ ಅಕ್ಟೋಬರ್ 7ರಂದು ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ತಾಲಿಬಾನ್ ಸರ್ಕಾರವು ಕನಿಷ್ಠ 4,000 ಜನರು ಸಾವನ್ನಪ್ಪಿದ್ದಾರೆ ಎಂದು ಅಂದಾಜಿಸಿದೆ. ವಿಶ್ವಸಂಸ್ಥೆಯು ಸುಮಾರು 1,500 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...

ಯುದ್ಧದ ಕರಾಳ ನೆರಳು: ರಷ್ಯಾ ಕನಸು ನಚ್ಚುನೂರಾಗಿ ಉಕ್ರೇನ್‌ನಲ್ಲಿ ಬಂಧಿಯಾದ ಭಾರತೀಯ ಯುವಕ!

ಉತ್ತಮ ಜೀವನ ರೂಪಿಸಿಕೊಳ್ಳಬೇಕು, ದೇಶ ವಿದೇಶ ಸುತ್ತಿ ಆರ್ಥಿಕವಾಗಿ ಕುಟುಂಬವನ್ನು ಬೆಂಬಲಿಸಬೇಕು...