ರಷ್ಯಾ-ಉಕ್ರೇನ್ ಯುದ್ಧಕ್ಕೆ 3 ವರ್ಷ: ಉಕ್ರೇನ್ ಮೇಲೆ ರಷ್ಯಾ 267 ಡ್ರೋನ್‌ಗಳಿಂದ ದಾಳಿ

Date:

ಉಕ್ರೇನ್‌ ಮೇಲೆ ರಷ್ಯಾ ದಾಳಿ ಆರಂಭಿಸಿ ಫೆಬ್ರವರಿ 24ಕ್ಕೆ ಮೂರು ವರ್ಷಗಳಾಗಲಿವೆ. ಮೂರು ವರ್ಷಗಳ ಭೀಕರ ಯುದ್ಧದ ನಡುವೆ ಭಾನುವಾರ ಉಕ್ರೇನ್‌ ಮೇಲೆ ರಷ್ಯಾ 267 ಡ್ರೋನ್‌ಗಳಿಂದ ದಾಳಿ ನಡೆದಿದೆ. ಆದಾಗ್ಯೂ, ರಷ್ಯಾದ ಡ್ರೋನ್‌ಗಳನ್ನು ಖಾರ್ಕಿವ್, ಪೋಲ್ಟವಾ, ಸುಮಿ, ಕೈವ್, ಚೆರ್ನಿಹಿವ್, ಮೈಕೊಲೈವ್ ಹಾಗೂ ಒಡೆಸಾ ಸೇರಿದಂತೆ ಕನಿಷ್ಠ 13 ಪ್ರದೇಶಗಳಲ್ಲಿ ತಡೆಯಲಾಗಿದೆ ಎಂದು ಉಕ್ರೇನ್ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

“ರಷ್ಯಾದಿಂದ ಹಾರಿದ ಡ್ರೋನ್‌ಗಳಲ್ಲಿ ಸುಮಾರು 148 ಡ್ರೋನ್‌ಗಳನ್ನು ತಡೆಹಿಡಲಾಗಿದೆ. ಅಲ್ಲದೆ, ಯಾವುದೇ ಹಾನಿಯಾಗದಂತೆ ಜಾಮ್‌ ಮಾಡಿದ ಬಳಿಕ 119 ಡ್ರೋನ್‌ಗಳು ಕಣ್ಮರೆಯಾಗಿವೆ. ರಷ್ಯಾ ಮೂರು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಸಹ ಉಡಾಯಿಸಿದೆ. ಪರಿಣಾಮ, ಉಕ್ರೇನ್‌ನ ಐದು ಪ್ರದೇಶಗಳಲ್ಲಿ ಹಾನಿಗಳಾಗಿವೆ” ಎಂದು ಉಕ್ರೇನ್‌ ವಾಯುಪಡೆಯ ಕಮಾಂಡ್ ವಕ್ತಾರ ಯೂರಿ ಇಗ್ನಾಟ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಹಲವು ತಿಂಗಳುಗಳಿಂದ ಉಕ್ರೇನ್‌ ಮೇಲೆ ರಷ್ಯಾ ಸಾಮೂಹಿಕ ಡ್ರೋನ್ ದಾಳಿಗಳನ್ನು ನಡೆಸುತ್ತಿದೆ. ಉಕ್ರೇನ್‌ನ ವಾಯು ರಕ್ಷಣೆಯನ್ನು ನಾಶಗೊಳಿಸಲು ಯತ್ನಿಸುತ್ತಿದೆ. ಆದರೆ, ಅದರ ಪ್ರಯತ್ನಗಳು ವಿಫಲವಾಗಿವೆ” ಎಂದು ಅವರು ಹೇಳಿದ್ದಾರೆ.

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, “ರಷ್ಯಾ ಶನಿವಾರ-ಭಾನುವಾರ ರಾತ್ರಿ ಸುಮಾರು 200ಕ್ಕೂ ಹೆಚ್ಚು ಡ್ರೋನ್‌ಗಳನ್ನು ಹಾರಿಸಿದೆ. ಇದು ಕಳೆದ 3 ವರ್ಷಗಳಲ್ಲಿ ಅತಿದೊಡ್ಡ ದಾಳಿಯಾಗಿದೆ. ಇದು ರಷ್ಯಾದ ವೈಮಾನಿಕ ಭಯೋತ್ಪಾದನೆಯಾಗಿದೆ” ಎಂದು ಹೇಳಿದ್ದಾರೆ. ನ್ಯಾಯಯುತ ಮತ್ತು ಶಾಶ್ವತ ಶಾಂತಿಗಾಗಿ ಉಕ್ರೇನ್‌ನ ಮಿತ್ರರಾಷ್ಟ್ರಗಳು ಒಗ್ಗಟ್ಟಿನಿಂದ ಇರಬೇಕೆಂದು ಕರೆ ಕೊಟ್ಟಿದ್ದಾರೆ.

“ಕಳೆದ ಒಂದು ವಾರದೊಳಗೆ ರಷ್ಯಾ ಒಟ್ಟು ಸುಮಾರು 1,150 ದಾಳಿ ಡ್ರೋನ್‌ಗಳು, 1,400ಕ್ಕೂ ಹೆಚ್ಚು ವೈಮಾನಿಕ ಬಾಂಬ್‌ಗಳು ಹಾಗೂ ವಿವಿಧ ರೀತಿಯ 35 ಕ್ಷಿಪಣಿಗಳನ್ನು ಉಕ್ರೇನ್ ವಿರುದ್ಧ ಉಡಾಯಿಸಿದೆ” ಎಂದು ಝೆಲೆನ್ಸ್ಕಿ ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...

ಯುದ್ಧದ ಕರಾಳ ನೆರಳು: ರಷ್ಯಾ ಕನಸು ನಚ್ಚುನೂರಾಗಿ ಉಕ್ರೇನ್‌ನಲ್ಲಿ ಬಂಧಿಯಾದ ಭಾರತೀಯ ಯುವಕ!

ಉತ್ತಮ ಜೀವನ ರೂಪಿಸಿಕೊಳ್ಳಬೇಕು, ದೇಶ ವಿದೇಶ ಸುತ್ತಿ ಆರ್ಥಿಕವಾಗಿ ಕುಟುಂಬವನ್ನು ಬೆಂಬಲಿಸಬೇಕು...