ಜಪಾನ್‌ | ಒಂದೇ ದಿನ 155 ಬಾರಿ ಕಂಪಿಸಿದ ಭೂಮಿ: 30 ಮಂದಿ ಮೃತ್ಯು; ಅಪಾರ ಆಸ್ತಿ-ಪಾಸ್ತಿ ಹಾನಿ

Date:

ತಂತ್ರಜ್ಞಾನದಲ್ಲಿ ಮುಂದುವರಿದಿರುವ ದೇಶವಾಗಿ ಗುರುತಿಸಿಕೊಂಡಿರುವ ಜಪಾನ್‌ನಲ್ಲಿ ಹೊಸ ವರ್ಷದ ಮೊದಲ ದಿನವೇ ಸಂಭವಿಸಿದ ಭಾರೀ ಭೂಕಂಪದಲ್ಲಿ ಈವರೆಗೆ ಒಟ್ಟು 30 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

- Advertisement -

ಒಂದೇ ದಿನ 155 ಬಾರಿ ಭೂಮಿ ಕಂಪಿಸಿದ್ದು, ಅಪಾರ ಸಾವು-ನೋವಿಗೆ ಕಾರಣವಾಗಿದೆ. ಈ ನಡುವೆ ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಅವಶೇಷಗಳ ಅಡಿಯಲ್ಲಿರುವವರನ್ನು ಪತ್ತೆ ಹಚ್ಚಲು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಜಪಾನ್‌ನ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

Japan earthquake 1

ರಿಕ್ಟರ್ ಮಾಪಕದಲ್ಲಿ 7.4ರಿಂದ 7.6 ರವರೆಗೂ ಭೂಕಂಪನ ಸಂಭವಿಸಿದ್ದು, ಜಪಾನ್ ನ ಈಶಾನ್ಯ ಭಾಗದ ನನಾವೋನಲ್ಲಿ ಭೂ ಕಂಪನದ ಕೇಂದ್ರ ಬಿಂದು ವರದಿಯಾಗಿದೆ. ಈ ಕಂಪನದಲ್ಲಿ ಕನಿಷ್ಠ 30 ಮಂದಿ ಸಾವನ್ನಪ್ಪಿದ್ದು, ಮನೆಗಳಿಗೆ ಹಾನಿಯಾದ ಪರಿಣಾಮ 32 ಸಾವಿರಕ್ಕೂ ಅಧಿಕ ಮಂದಿ ಭೂಕಂಪನದಿಂದ ಸಂತ್ರಸ್ಥರಾಗಿದ್ದಾರೆ ಎಂದು ತಿಳಿದುಬಂದಿದೆ.

ಹೊನ್ಶುವಿನ ಮುಖ್ಯ ದ್ವೀಪದಲ್ಲಿರುವ ಇಶಿಕಾವಾ ಪ್ರಾಂತ್ಯದಲ್ಲಿ 7.5 ತೀವ್ರತೆಯ ಭೂಕಂಪವು ಒಂದು ಮೀಟರ್ ಎತ್ತರದ ಸುನಾಮಿ ಅಲೆಗಳನ್ನು ಸೃಷ್ಟಿಸಿತ್ತು. ಭೂಕಂಪದ ತೀವ್ರತೆಗೆ ಕಟ್ಟಡಗಳು ನೆಲಕ್ಕುರುಳಿವೆ, ಪ್ರಮುಖ ಬಂದರೊಂದರಲ್ಲಿ ಬೆಂಕಿ ಅವಘಡ ಕೂಡ ಸಂಭವಿಸಿದ್ದು, ರಸ್ತೆಗಳು ಬಿರುಕು ಬಿಟ್ಟಿರುವುದರಿಂದ ವಾಹನ ಸಂಚಾರಕ್ಕೆ ತೊಡಕುಂಟಾಗಿದೆ.

jaapan

“ಜಪಾನ್‌ನಲ್ಲಿ ಸಂಭವಿಸಿದ ವಿನಾಶಕಾರಿ ಭೂಕಂಪದಿಂದಾಗಿ ಹಲವಾರು ಸಾವುನೋವುಗಳು, ಕಟ್ಟಡ ಕುಸಿತಗಳು ಮತ್ತು ಬೆಂಕಿ ಸೇರಿದಂತೆ ಬಹಳ ವ್ಯಾಪಕ ಹಾನಿಯಾಗಿದೆ” ಎಂದು ವಿಪತ್ತು ನಿರ್ವಹಣಾ ಸಭೆಯ ಬಳಿಕ ಪ್ರಧಾನ ಮಂತ್ರಿ ಫ್ಯೂಮಿಯೊ ಕಿಶಿಡಾ ತಿಳಿಸಿದ್ದಾರೆ.

ಜಪಾನ್

ವಾಜಿಮಾ ಬಂದರಿನಲ್ಲಿ ಏಳು ಮಂದಿ ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ ಎಂದು ಕ್ಯೋಡೋ ಸುದ್ದಿ ಸಂಸ್ಥೆ ವರದಿ ಮಾಡಿದೆ. ಏರಿಯಲ್ ನ್ಯೂಸ್ ಫೂಟೇಜ್ ಬಂದರಿನಲ್ಲಿ ಭೂಕಂಪದಿಂದ ಬೆಂಕಿ ಅವಘಡ ಸಂಭವಿಸಿತು. ಏಳು ಅಂತಸ್ತಿನ ಕಟ್ಟಡವು ಕುಸಿದಿದೆ. ಈ ಪ್ರದೇಶದಲ್ಲಿ ಸುಮಾರು 45,000 ಕುಟುಂಬಗಳು ವಿದ್ಯುತ್‌ ಸಮಸ್ಯೆಯಿಂದ ಕತ್ತಲಲ್ಲಿ ಜೀವನ ನಡೆಸುವಂತಾಗಿದೆ ಎಂದು ತಿಳಿಸಿದೆ. ಭೂಕಂಪದ ತೀವ್ರತೆ 7.5ರಷ್ಟಿತ್ತು ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ (ಯುಎಸ್‌ಜಿಎಸ್) ತಿಳಿಸಿದೆ.

ಜಾಪನ್

ಹೊಸ ವರ್ಷದ ಶುಭಾಶಯ ಕಾರ್ಯಕ್ರಮ ರದ್ದುಗೊಳಿಸಿದ ಚಕ್ರವರ್ತಿ
ಹೊಸ ವರ್ಷದ ಹಿನ್ನೆಲೆಯಲ್ಲಿ ಜಪಾನಿನ ಚಕ್ರವರ್ತಿ ನರುಹಿಟೊ ಮತ್ತು ಅವರ ಕುಟುಂಬ ಸದಸ್ಯರು ಭಾಗವಹಿಸಲು ಯೋಜಿಸಲಾಗಿದ್ದ ಸಾರ್ವಜನಿಕ ಹೊಸ ವರ್ಷದ ಶುಭಾಶಯ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಸಾರ್ವಜನಿಕರು ಭೂಕಂಪದಿಂದ ಸಂತ್ರಸ್ತರಾದವರೊಂದಿಗೆ ಸಹಕರಿಸುವಂತೆ ಚಕ್ರವರ್ತಿಯ ಕುಟುಂಬ ತಿಳಿಸಿರುವುದಾಗಿ ಎಂದು ಜಪಾನಿನ ಇಂಪೀರಿಯಲ್ ಹೌಸ್‌ ಹೋಲ್ಡ್ ಏಜೆನ್ಸಿಯು ಮಾಹಿತಿ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕದಲ್ಲಿ ಡೀಸೆಲ್ ರಫ್ತು ನಿಷೇಧದ ಚರ್ಚೆ; ಭಾರತದ ಮೇಲಾಗುವ ಪರಿಣಾಮವೇನು?

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ...

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...