ಬಾಂಗ್ಲಾದೇಶ | ಹಿಂಸಾಚಾರಕ್ಕೆ ತಿರುಗಿದ ಮೀಸಲಾತಿ ವಿರೋಧಿ ಪ್ರತಿಭಟನೆ; 32 ಸಾವು

Date:

ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಮುಂದುವರಿದಿದ್ದು, ಗುರುವಾರ ಢಾಕಾ ಸೇರಿ ದೇಶದ ವಿವಿಧೆಡೆ ಸಂಭವಿಸಿದ ಹಿಂಸಾಚಾರದಲ್ಲಿ 32 ಮಂದಿ ಮೃತಪಟ್ಟು, ನೂರಾರು ಜನರು ಗಾಯಗೊಂಡಿದ್ದಾರೆ.

- Advertisement -

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಾಲು ರಾಜಧಾನಿ ಸೇರಿದಂತೆ ದೇಶದಾದ್ಯಂತ ಗಡಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಹಿಂಸಾಚಾರ ತೀವ್ರಗೊಂಡ ಬೆನ್ನಲ್ಲೇ ಪ್ರತಿಭಟನಾನಿರತ ವಿದ್ಯಾರ್ಥಿಗಳ ಜತೆಗೆ ಮಾತುಕತೆಗೆ ಸಿದ್ಧ ಎಂದು ಬಾಂಗ್ಲಾದೇಶದ ಸರ್ಕಾರ ತಿಳಿಸಿದೆ.

ಪ್ರತಿಭಟನೆಗಳನ್ನು ನಿಯಂತ್ರಿಸಲು ಬಾಂಗ್ಲಾದೇಶದ ಹಲವೆಡೆ ಮೊಬೈಲ್‌ ಇಂಟರ್‌ನೆಟ್‌ ಸೇವೆಗಳನ್ನು ಕಡಿತಗೊಳಿಸಲಾಗಿದೆ. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಢಾಕಾದಲ್ಲಿ ಕೋಲು, ದೊಣ್ಣೆ ಮತ್ತು ಕಲ್ಲುಗಳೊಂದಿಗೆ ರಸ್ತೆಗಿಳಿದು ಹೆದ್ದಾರಿಗಳನ್ನು ತಡೆದರು. ಸರ್ಕಾರಿ ಕಟ್ಟಡಗಳನ್ನು ಹಾನಿಗೊಳಿಸಿ, ಸಶಸ್ತ್ರ ಪೊಲೀಸರ ಜತೆ ಘರ್ಷಣೆಗಿಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರಕಾರಕ್ಕೆ ಇಕ್ಕಟ್ಟು ತಂದ ಖಾಸಗಿ ಮೀಸಲು ಸಮಸ್ಯೆ

ಪ್ರತಿಭಟನಕಾರರು ಬಾಂಗ್ಲಾದೇಶದ ಸರ್ಕಾರಿ ವಾಹಿನಿ ಬಿಟಿವಿಯ ಪ್ರಧಾನ ಕಚೇರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಕಚೇರಿಯೊಳಗೆ ಹಲವರು ಸಿಕ್ಕಿಬಿದ್ದು, ತೊಂದರೆ ಅನುಭವಿಸಿದರು. ಏಕಾಏಕಿ ನೂರಾರು ಪ್ರತಿಭಟನಕಾರರು ಕಚೇರಿಯ ಆವರಣದೊಳಗೆ ನುಗ್ಗಿ ಕನಿಷ್ಠ 60ಕ್ಕೂ ಹೆಚ್ಚು ವಾಹನಗಳು ಮತ್ತು ಕಚೇರಿಯ ಕಟ್ಟಡಕ್ಕೆ ಬೆಂಕಿ ಹಚ್ಚಿದರು.

ಢಾಕಾ ವಿಶ್ವವಿದ್ಯಾಲಯದ ಆವರಣ ಸೇರಿದಂತೆ ವಿವಿಧೆಡೆ ಪ್ರತಿಭಟನಾನಿರತರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು. ರಬ್ಬರ್‌ ಬುಲೆಟ್‌ಗಳು, ಅಶ್ರುವಾಯುಗಳನ್ನೂ ಸಿಡಿಸಿದರು. ಇದರ ಪರಿಣಾಮ ಹಲವರು ಗಾಯಗೊಂಡರು.

ಪ್ರತಿಭಟನೆ ಪರಿಣಾಮ ಪ್ರಮುಖ ನಗರಗಳಲ್ಲಿನ ಶಾಪಿಂಗ್‌ ಮಾಲ್‌ಗಳು ಮತ್ತು ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿತ್ತು. ಢಾಕಾದಲ್ಲಿನ ಅಮೆರಿಕ ರಾಯಭಾರಿ ಕಚೇರಿ ಸೇರಿದಂತೆ ವಿವಿಧ ದೇಶಗಳ ರಾಯಭಾರಿ ಕಚೇರಿಗಳು ಮುಚ್ಚಿದ್ದವು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂಟಾರ್ಕ್ಟಿಕದಲ್ಲಿ ಪೆಂಗ್ವಿನ್ ಎಣಿಸುವ ಅಪರೂಪದ ಉದ್ಯೋಗ: ಲಕ್ಷಗಳ ಸಂಭಾವನೆ, ಹೇಗಿರುತ್ತದೆ ಹಿಮದ ನಾಡಿನ ಬದುಕು?

ಜನಜಂಗುಳಿ, ಟ್ರಾಫಿಕ್ ಕಿರಿಕಿರಿ ಹಾಗೂ ದೈನಂದಿನ ಯಾಂತ್ರಿಕ ಬದುಕಿನಿಂದ ದೂರ ಸರಿದು,...

ಯಮೆನ್ ರಾಷ್ಟ್ರಪತಿ ಭವನದ ಮೇಲೆ ಹೂತಿಗಳ ಕ್ಷಿಪಣಿ ದಾಳಿ: ಐವರ ಸಾವು

ಯಮೆನ್‌ನ ದಕ್ಷಿಣ ಭಾಗದ ಪ್ರಮುಖ ನಗರವಾದ ಅದನ್‌ನಲ್ಲಿರುವ ಅಲ್-ಮಾಶಿಕ್ ರಾಷ್ಟ್ರಪತಿ ಭವನದ...

ಭಾರತದ ಮೇಲೆ ಶೇ.100 ಸುಂಕ: 10 ದಿನಗಳಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಅಂತಿಮ ತೀರ್ಮಾನ!

ಭಾರತದಿಂದ ಅಮೆರಿಕಕ್ಕೆ ರಫ್ತಾಗುವ ಸರಕುಗಳ ಮೇಲೆ ಶೇ. 100ರಷ್ಟು ಭಾರಿ ಆಮದು...

ರಾತ್ರಿ ವೇಳೆಯಲ್ಲೂ ರವಿ; ಸೂರ್ಯನ ಬೆಳಕು ಮಾರಾಟ ಮಾಡಲು ಅಮೆರಿಕ-ಭಾರತ ಸಹಭಾಗಿತ್ವ: ಏನಿದು ಯೋಜನೆ?

ವಿಜ್ಞಾನ ಕಲ್ಪನೆಗಳಿಗಿಂತಲೂ ಮಿಗಿಲಾದ ಅಪರೂಪದ ಯೋಜನೆಯೊಂದು ಈಗ ಜಾಗತಿಕ ಇಂಧನ ಕ್ಷೇತ್ರದಲ್ಲಿ...