ಕುವೈತ್ ಕಟ್ಟಡದಲ್ಲಿ ಬೆಂಕಿ: ಭಾರತೀಯರು ಸೇರಿ 41 ಮಂದಿ ಸಾವು

Date:

ಕುವೈತ್‌ ಮಂಗಾಫ್ ಸಿಟಿಯಲ್ಲಿನ ವಸತಿ ಕಾರ್ಮಿಕರ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಭಾರತೀಯರು ಸೇರಿ 41ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಅವಘಡದಲ್ಲಿ 10ಕ್ಕೂ ಹೆಚ್ಚು ಭಾರತೀಯರು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ. ಮೃತರಲ್ಲಿ ಕೇರಳದವರು ಹೆಚ್ಚಿನವರು ಎಂದು ಹೇಳಲಾಗಿದೆ.

ಕಟ್ಟಡಕ್ಕೆ ಬೆಂಕಿಯು ಭಾರತೀಯ ಕಾಲಮಾನ ಬೆಳಿಗ್ಗೆ 9 ಗಂಟೆಗೆ ಸಂಭವಿಸಿದ್ದು, ಗಾಯಗೊಂಡ 43 ಮಂದಿಯನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಎಂದು ಕುವೈತ್‌ ಆರೋಗ್ಯ ಇಲಾಖೆ ತಿಳಿಸಿದೆ.

ಘಟನೆ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ವಿದೇಶಾಂಗ ಸಚಿವ ಎಸ್‌ ಜೈಶಂಕರ್‌, “ ಕುವೈತ್‌ ಸಿಟಿಯಲ್ಲಿ ಬೆಂಕಿಯುಂಟಾಗಿರುವ ಸುದ್ದಿಯಿಂದ ತುಂಬಾ ಆಘಾತವಾಗಿದೆ. ಇಲ್ಲಿಯವರೆಗೂ 40 ಮಂದಿ ಮೃತಪಟ್ಟಿದ್ದು, 50 ಮಂದಿಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ನಮ್ಮ ರಾಯಭಾರಿ ಘಟನಾ ಸ್ಥಳಕ್ಕೆ ತೆರಳಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಸಂಪುಟದಲ್ಲಿ ಬಲಾಢ್ಯರು ಮುಂದಕ್ಕೆ, ಹಿಂದುಳಿದವರು ಹಿಂದಕ್ಕೆ

“ದುರಂತಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇವೆ. ಗಾಯಗೊಂಡವರು ಬೇಗನೆ ಗುಣಮುಖರಾಗಲಿ. ನಮ್ಮ ರಾಯಭಾರ ಕಚೇರಿ ಎಲ್ಲ ರೀತಿಯ ನೆರವನ್ನು ನೀಡಲಿದೆ” ಎಂದು ಜೈಶಂಕರ್‌ ಹೇಳಿದ್ದಾರೆ.

ಬೆಂಕಿ ಘಟನೆಯಲ್ಲಿ ಕೆಲವು ಭಾರತೀಯ ಕಾರ್ಮಿಕರು ಸಿಲುಕಿರುವ ಕಾರಣ ಕುವೈತ್‌ನ ಭಾರತೀಯ ರಾಯಭಾರ ಕಚೇರಿ ಸಹಾಯವಾಣಿ ಸಂಖ್ಯೆಯನ್ನು ನೀಡಿದ್ದು, ಎಲ್ಲ ರೀತಿಯ ನೆರವನ್ನು ನೀಡುವುದಾಗಿ ತಿಳಿಸಿದೆ.

ಬೆಂಕಿ ಸಂಭವಿಸಿದ ಕಟ್ಟಡವನ್ನು ವಸತಿ ಕಾರ್ಮಿಕರಿಗೆ ಬಳಸಲಾಗುತ್ತಿತ್ತು. ಹಲವು ಕಾರ್ಮಿಕರು ಕಟ್ಟಡದಲ್ಲಿ ವಾಸಿಸುತ್ತಿದ್ದರು. ಇಲ್ಲಿಯವರೆಗೂ ಹತ್ತಾರು ಮಂದಿಯನ್ನು ರಕ್ಷಿಸಲಾಗಿದೆ. ದುರಂತವೆಂದರೆ ಹಲವು ಮಂದಿ ಹೆಚ್ಚು ಹೊಗೆ ಆವರಿಸಿದ ಪರಿಣಾಮ ಉಸಿರುಕಟ್ಟಿ ಸಾವನ್ನಪ್ಪಿದ್ದಾರೆ. ಘಟನೆ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಳೆದ ಮೂರ್ನಾಲ್ಕು ವರ್ಷಗಳಲ್ಲಿ 8 ಕೋಟಿ ಹೊಸ ಉದ್ಯೋಗ ಸೃಷ್ಟಿಸಿದ್ದೇವೆ: ಪ್ರಧಾನಿ ಮೋದಿ

ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ದೇಶದಲ್ಲಿ ಎಂಟು ಕೋಟಿ ಹೊಸ ಉದ್ಯೋಗಗಳು ಸೃಷ್ಟಿಯಾಗಿವೆ....

ನದಿಗೆ ಹಾರಿದ್ದ ಜಮ್ಮು ಯುವಕನ ಮೃತದೇಹ ಪಾಕಿಸ್ತಾನದಲ್ಲಿ ಪತ್ತೆ

ಜಮ್ಮು ಮತ್ತು ಕಾಶ್ಮೀರದ ಜಮ್ಮುವಿನಲ್ಲಿ ಕಳೆದ ತಿಂಗಳು ಚೆನಾಬ್ ನದಿಗೆ ಹಾರಿ...

ನಮ್ಮ ಮೆಟ್ರೋದಲ್ಲಿ ಟಿಕೆಟ್ ಖರೀದಿಸದೆ ಪ್ರಯಾಣಿಸಿದ್ದ ಯೂಟ್ಯೂಬರ್ ಈಗ ಯುರೋಪ್ ಸಂಸದ!

ಕಳೆದ ವರ್ಷ ನಮ್ಮ ಮೆಟ್ರೋದಲ್ಲಿ ಟಿಕೆಟ್ ತೆಗೆಯದೆ ಉಚಿತವಾಗಿ ಪ್ರಯಾಣಿಸಿ ಸುದ್ದಿಯಾಗಿದ್ದ...

ಬಿಹಾರಕ್ಕೆ ವಿಶೇಷ ಸ್ಥಾನಮಾನದ ಬೇಡಿಕೆ; ‘ಚಾನ್ಸೇ ಇಲ್ಲ’ ಎಂದ ಕೇಂದ್ರ ಸಚಿವ ಮಾಂಝಿ

ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂದು ಎನ್‌ಡಿಎ ಸರ್ಕಾರದ ಪಾಲುದಾರ ಜೆಡಿಯು ಕೇಂದ್ರ...