ದಕ್ಷಿಣ ಚೀನಾದಲ್ಲಿ 5.2 ತೀವ್ರತೆಯ ಭೂಕಂಪ: ಇಬ್ಬರು ಸಾವು, 7000ಕ್ಕೂ ಹೆಚ್ಚು ಜನರ ತುರ್ತು ಸ್ಥಳಾಂತರ

Date:

ದಕ್ಷಿಣ ಚೀನಾದ ಗುವಾಂಗ್ಕ್ಸಿ ಪ್ರದೇಶದಲ್ಲಿ ಇಂದು (ಮೇ.18) ಮುಂಜಾನೆ ಸಂಭವಿಸಿದ 5.2 ತೀವ್ರತೆಯ ಪ್ರಬಲ ಭೂಕಂಪಕ್ಕೆ ಇಬ್ಬರು ಬಲಿಯಾಗಿದ್ದು, ನೂರಾರು ಕಟ್ಟಡಗಳು ನೆಲಸಮಗೊಂಡಿವೆ. ಮುನ್ನೆಚ್ಚರಿಕಾ ಕ್ರಮವಾಗಿ ಸಾವಿರಾರು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಲ್ಲಿನ ಸರ್ಕಾರಿ ಮಾಧ್ಯಮಗಳು ವರದಿ ಮಾಡಿವೆ.

- Advertisement -

ಭೂಕಂಪದ ತೀವ್ರತೆಗೆ ಪ್ರಮುಖ ನಗರವಾದ ಲ್ಯುಝೌನಲ್ಲಿ (Liuzhou) ಕನಿಷ್ಠ 13 ಕಟ್ಟಡಗಳು ಸಂಪೂರ್ಣವಾಗಿ ಕುಸಿದು ಬಿದ್ದಿದ್ದು, ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ನಗರದ 7,000ಕ್ಕೂ ಹೆಚ್ಚು ನಿವಾಸಿಗಳನ್ನು ತುರ್ತಾಗಿ ಸುರಕ್ಷಿತ ಪ್ರದೇಶಗಳಿಗೆ ರವಾನಿಸಲಾಗಿದೆ. ಭೂಕಂಪದಿಂದಾಗಿ ಸಂಭವಿಸಿದ ಸರಣಿ ಭೂಕುಸಿತಗಳು (Landslides) ಈ ಪ್ರದೇಶದ ಪ್ರಮುಖ ರಸ್ತೆ ಸಂಪರ್ಕಗಳನ್ನು ಕಡಿತಗೊಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಮೈಸೂರಿನ ಬೀದಿಗಳಲ್ಲಿ ಕ್ರಿಕೆಟ್ ಆಡಿ ಬೆಳೆದ ಮನ್ವಂತ್‌ಕುಮಾರ್, ಈಗ...

ಮೈಸೂರಿನ ಗಲ್ಲಿಗಳಿಂದ ಕಾಲೇಜ್ ಕ್ರಿಕೆಟ್ ಮೈದಾನಕ್ಕೆ ಜಿಗಿದ ಯುವಕನೊಬ್ಬ ಕರ್ನಾಟಕದ ರಣಜಿ ತಂಡದಲ್ಲಿ ಸ್ಥಾನ ಪಡೆದು, ಐಪಿಎಲ್ ತಂಡದ ಗಮನ ಸೆಳೆದು, ದೇಶೀಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿ, ಕರ್ನಾಟಕ ಕ್ರಿಕೆಟ್‌ನ ಭರವಸೆಯ ಆಟಗಾರನಾಗಿ...

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ನಾಪತ್ತೆಯಾಗಿದ್ದ ನಾಗರಿಕರಿಗಾಗಿ ಅಧಿಕಾರಿಗಳು ಹಮ್ಮಿಕೊಂಡಿದ್ದ ರಕ್ಷಣಾ ಕಾರ್ಯಾಚರಣೆ ಇಂದು ಮಧ್ಯಾಹ್ನದ ವೇಳೆಗೆ ಮುಕ್ತಾಯಗೊಂಡಿದೆ. ಕಟ್ಟಡದ ಅವಶೇಷಗಳಡಿ ಸಿಲುಕಿದ್ದ 91 ವರ್ಷದ ವೃದ್ಧರೊಬ್ಬರನ್ನು ರಕ್ಷಣಾ ಸಿಬ್ಬಂದಿ ಜೀವಂತವಾಗಿ ಹಾಗೂ ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಇವರ ರಕ್ಷಣೆಯೊಂದಿಗೆ ಕಾರ್ಯಾಚರಣೆ ಕೊನೆಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಜೆಸಿಬಿ ಮತ್ತು ಬೃಹತ್ ಯಂತ್ರಗಳ ಮೂಲಕ ಅವಶೇಷಗಳನ್ನು ತೆರವುಗೊಳಿಸುವ ಕಾರ್ಯ ಭರದಿಂದ ಸಾಗಿದೆ. ಭೂಕಂಪದ ಹಿನ್ನೆಲೆಯಲ್ಲಿ ಲ್ಯುಝೌ ಸುತ್ತಮುತ್ತಲಿನ ರೈಲು ಸೇವೆಗಳನ್ನು ರದ್ದುಗೊಳಿಸಲಾಗಿದೆ. ಕೆಲ ರೈಲುಗಳನ್ನು ವಿಳಂಬಗೊಳಿಸಲಾಗಿದೆ.

ಇದನ್ನೂ ಓದಿ: ಬಿಹಾರ ಪಾಠದಿಂದ ಎಚ್ಚೆತ್ತ ಕಾಂಗ್ರೆಸ್; ತಿಂಗಳುಗಳ ಮುಂಚೆಯೇ ಉತ್ತರ ಪ್ರದೇಶ ಚುನಾವಣೆಗೆ ಸಿದ್ಧತೆ!

ಸಾಮಾನ್ಯವಾಗಿ ಚೀನಾದ ಪಶ್ಚಿಮದ ಪರ್ವತ ಪ್ರದೇಶಗಳು ಅಥವಾ ತೈವಾನ್‌ನತ್ತ ಇರುವ ಪೂರ್ವ ಭಾಗದಲ್ಲಿ ತೀವ್ರ ಸ್ವರೂಪದ ಭೂಕಂಪಗಳು ಸಂಭವಿಸುತ್ತವೆ. ಆದರೆ ದಕ್ಷಿಣ ಚೀನಾದಲ್ಲಿ ಇಷ್ಟು ದೊಡ್ಡ ಮಟ್ಟದ ಭೂಕಂಪ ಅಪರೂಪಕ್ಕೆ ಸಂಭವಿಸಿದೆ. ಚೀನಾದ ಇತಿಹಾಸದಲ್ಲೇ 2008ರಲ್ಲಿ ನೈಋತ್ಯ ಸಿಚುವಾನ್ ಪ್ರಾಂತ್ಯದಲ್ಲಿ ಸಂಭವಿಸಿದ್ದ 7.9 ತೀವ್ರತೆಯ ಭೀಕರ ಭೂಕಂಪಕ್ಕೆ ಬರೋಬ್ಬರಿ 87,000ಕ್ಕೂ ಹೆಚ್ಚು ಜನ ಬಲಿಯಾಗಿದ್ದರು. ಹಲವರು ನಾಪತ್ತೆಯಾಗಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿಬೆಟ್‌ನಲ್ಲಿ ಭೀಕರ ಭೂಕಂಪ: 16 ಸಾವು, ನೂರಾರು ಮನೆಗಳು ನೆಲಸಮ

ಟಿಬೆಟ್‌ನ ಉತ್ತರದ ಪರ್ವತ ಪ್ರದೇಶದಲ್ಲಿ ಗುರುವಾರ ತಡರಾತ್ರಿ ಭೀಕರ ಭೂಕಂಪ ಸಂಭವಿಸಿದೆ.‌...

ಟಿಬೆಟ್‌ನಲ್ಲಿ 7.0 ತೀವ್ರತೆಯ ಪ್ರಬಲ ಭೂಕಂಪ: ಜಲಪ್ರಳಯದ ಬೆನ್ನಲ್ಲೇ ಚೀನಾಗೆ ಮತ್ತೊಂದು ಆಘಾತ

ಚೀನಾದ ಟಿಬೆಟ್ ಭಾಗದಲ್ಲಿ ಗುರುವಾರ ರಾತ್ರಿ 7.0 ತೀವ್ರತೆಯ ಭಾರಿ ಭೂಕಂಪ...

ಗಾಜಾ ಯುದ್ಧದ ನೆರಳಲ್ಲಿ ನಿರ್ಣಾಯಕ ಸಮರ; ಹೇಗಿರಲಿದೆ ಗೊತ್ತೇ ಇಸ್ರೇಲ್ ಚುನಾವಣೆ?

ಇಸ್ರೇಲ್‌ನಲ್ಲಿ ಇದೇ ಅಕ್ಟೋಬರ್ 27ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ದೇಶದ 26ನೇ...