ಆ.27ರಿಂದ ಭಾರತದ ಮೇಲೆ ಶೇ.50ರಷ್ಟು ಸುಂಕ ಜಾರಿ: ಅಮೆರಿಕದಿಂದ ಆದೇಶ ಬಿಡುಗಡೆ

Date:

ಅಮೆರಿಕಕ್ಕೆ ರಫ್ತು ಮಾಡಲಾಗುವ ಭಾರತೀಯ ಸರಕುಗಳ ಮೇಲೆ ಶೇಕಡ 50ರಷ್ಟು ಸುಂಕ ವಿಧಿಸಲಾಗಿದ್ದು, ಆಗಸ್ಟ್ 27ರಿಂದ ಜಾರಿಗೆ ಬರಲಿದೆ ಎಂದು ಆದೇಶ ಹೊರಡಿಸಲಾಗಿದೆ. ಈ ನೂತನ ಸುಂಕವು ಮುಖ್ಯವಾಗಿ ಉಡುಪು, ಚರ್ಮ ಮತ್ತು ರತ್ನಗಳು ಮತ್ತು ಆಭರಣಗಳಂತಹ ವಸ್ತುಗಳ ಮೇಲೆ ತೀವ್ರ ಪರಿಣಾಮ ಬೀರಲಿದೆ.

- Advertisement -

ಹೆಚ್ಚುವರಿ ಆಮದು ಸುಂಕಗಳು ಅಮೆರಿಕಕ್ಕೆ ಮಾಡುವ 86 ಬಿಲಿಯನ್ ಡಾಲರ್ ಭಾರತೀಯ ರಫ್ತಿನ ಅರ್ಧಕ್ಕಿಂತ ಹೆಚ್ಚು ರಫ್ತಿನ ಮೇಲೆ ಪ್ರಭಾವ ಬೀರುತ್ತವೆ. ಆದರೆ ಔಷಧಗಳು, ಎಲೆಕ್ಟ್ರಾನಿಕ್ಸ್ ಸೇರಿದಂತೆ ಉಳಿದ ವಸ್ತುಗಳಿಗೆ ಸುಂಕದಿಂದ ವಿನಾಯಿತಿ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಟ್ರಂಪ್‌ ಸುಂಕ ಪರಿಣಾಮ: ಸೌರಾಷ್ಟ್ರದಲ್ಲಿ ಉದ್ಯೋಗ ಕಳೆದುಕೊಂಡ ಲಕ್ಷಕ್ಕೂ ಹೆಚ್ಚು ವಜ್ರ ಕಾರ್ಮಿಕರು

“ಆಗಸ್ಟ್ 27ರಿಂದ ಅಥವಾ ನಂತರ ಬಳಕೆಗಾಗಿ ನಮೂದಿಸಲಾದ ಅಥವಾ ಬಳಕೆಗಾಗಿ ಗೋದಾಮಿನಿಂದ ಹೊರತೆಗೆಯಲಾದ ಭಾರತದ ಉತ್ಪನ್ನಗಳಿಗೆ ನೂತನ ಸುಂಕ ಅನ್ವಯವಾಗುತ್ತದೆ” ಎಂದು ಯುಎಸ್ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಪ್ರಸ್ತುತ ಯುಎಸ್ ಮಾರುಕಟ್ಟೆಗೆ ಪ್ರವೇಶಿಸುವ ಭಾರತೀಯ ಸರಕುಗಳ ಮೇಲೆ ಶೇಕಡ 25ರಷ್ಟು ಹೆಚ್ಚುವರಿ ಸುಂಕ ಜಾರಿಯಲ್ಲಿದೆ. ರಷ್ಯಾದ ಕಚ್ಚಾ ತೈಲ ಮತ್ತು ಮಿಲಿಟರಿ ಉಪಕರಣಗಳನ್ನು ಖರೀದಿಸಿದ ಕಾರಣಕ್ಕೆ ಇನ್ನೂ ಶೇಕಡ 25ರಷ್ಟು ಸುಂಕ ದಂಡವನ್ನು ಅಮೆರಿಕ ವಿಧಿಸಿದೆ.

ಈಗಾಗಲೇ ಬಾಂಗ್ಲಾದೇಶ, ವಿಯೆಟ್ನಾಂ, ಶ್ರೀಲಂಕಾ, ಕಾಂಬೋಡಿಯಾ ಮತ್ತು ಇಂಡೋನೇಷ್ಯಾದಂತಹ ಪ್ರಮುಖ ದೇಶಗಳ ಸರಕುಗಳ ಮೇಲೆ ಕಡಿಮೆ ಸುಂಕ ಇರುವ ಕಾರಣದಿಂದಾಗಿ ಭಾರತೀಯ ಸರಕುಗಳು ಯುಎಸ್‌ನಲ್ಲಿ ಮಾರುಕಟ್ಟೆ ಕಳೆದುಕೊಳ್ಳುತ್ತದೆ ಎಂದು ರಫ್ತುದಾರರು ಆತಂಕ ವ್ಯಕ್ತಪಡಿಸಿದ್ದಾರೆ.

ಜುಲೈನಲ್ಲಿ ಅಮೆರಿಕಕ್ಕೆ ಭಾರತದ ಸರಕುಗಳ ರಫ್ತು ಶೇ. 19.94ರಷ್ಟು ಏರಿಕೆಯಾಗಿ 8.01 ಬಿಲಿಯನ್ ಡಾಲರ್‌ಗಳಿಗೆ ತಲುಪಿದ್ದರೆ, ಆಮದು ಶೇ. 13.78ರಷ್ಟು ಹೆಚ್ಚಾಗಿ ಈ ತಿಂಗಳಲ್ಲಿ ಸುಮಾರು 4.55 ಬಿಲಿಯನ್ ಡಾಲರ್‌ಗಳಿಗೆ ತಲುಪಿದೆ. ಹಣಕಾಸು ವರ್ಷ 2025ರಲ್ಲಿ, ಅಮೆರಿಕಕ್ಕೆ ಭಾರತದ ಸರಕುಗಳ ರಫ್ತು 87 ಬಿಲಿಯನ್ ಡಾಲರ್ ಆಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...