‘ವಾಷಿಂಗ್ಟನ್ ಪೋಸ್ಟ್’ನಿಂದ ತರೂರ್ ಪುತ್ರ ಸೇರಿ 500 ಮಂದಿ ಕಿಕ್ ಔಟ್

Date:

ಅಮೆಜಾನ್ ಸಂಸ್ಥೆಯು ತನ್ನ ಉದ್ಯೋಗಿಗಳನ್ನು ಕಡಿತಗೊಳಿಸುವ ಪ್ರಕ್ರಿಯೆ ಆರಂಭಿಸಿದೆ. ಇದೀಗ, ಅಮೆಜಾನ್ ಸಂಸ್ಥಾಪಕ ಜೆಫ್‌ ಬೆಜೋಸ್ ಒಡೆತನದ ಸುದ್ದಿ ಸಂಸ್ಥೆ ‘ವಾಷಿಂಗ್ಟನ್‌ ಪೋಸ್ಟ್‌’ನಲ್ಲೂ ಉದ್ಯೋಗಿಗಳನ್ನು ಹೊರಗಟ್ಟುವ ಪ್ರಕ್ರಿಯೆ ನಡೆಯುತ್ತಿದೆ. ಬುಧವಾರ, ಸುಮಾರು 500 ಮಂದಿಯನ್ನು ಸಂಸ್ಥೆ ಹೊರಹಾಕಿದೆ. ಅವರಲ್ಲಿ, ಕಾಂಗ್ರೆಸ್‌ ಸಂಸದ ಶಶಿ ತರೂರ್ ಅವರ ಪುತ್ರ ಇಶಾನ್ ತರೂರ್ ಕೂಡ ಸೇರಿದ್ದಾರೆ.

- Advertisement -

ವಾಷಿಂಗ್ಟನ್‌ ಪೋಸ್ಟ್‌ನ ಸ್ಥಳೀಯ ವರದಿಗಾರರು, ಕ್ರೀಡಾ ವಿಭಾಗ, ವಿದೇಶಿ ಬ್ಯುರೋಗಳು ಹಾಗೂ ವ್ಯಾಪಾರ ವಿಭಾಗದ ಅನೇಕ ಪತ್ರಕರ್ತರನ್ನು ಉದ್ಯೋಗದಿಂದ ವಜಾಗೊಳಿಸಲಾಗಿದೆ. ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ವ್ಯವಹಾರಗಳ ಕುರಿತು ಅಂಕಣಗಳನ್ನು ಬರೆಯುತ್ತಿದ್ದ ಇಶಾನ್ ತರೂರ್ ಅವರನ್ನೂ ಹೊರಹಾಕಲಾಗಿದೆ. ಸಂಸ್ಥೆಯ ಈ ನಿರ್ಧಾರವು ‘ಜಾಗತಿಕ ಪತ್ರಿಕೋದ್ಯಮದ ಕರಾಳ ದಿನ’ವೆಂದು ವಜಾಗೊಂಡ ಸಿಬ್ಬಂದಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಪ್ರತಿಷ್ಠಿತ ಸುದ್ದಿ ಸಂಸ್ಥೆಯು ಏಕಾಏಕಿ ಸಿಬ್ಬಂದಿಗಳನ್ನು ವಜಾಗೊಳಿಸುವ ನಿರ್ಧಾರ ತೆಗೆದುಕೊಂಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಹಲವರು ಹೇಳಿದ್ದಾರೆ.

ಕೆಲಸದಿಂದ ವಜಾಗೊಂಡಿದ್ದ ಬಗ್ಗೆ ಬೇಸರ ವ್ಯಕ್ತಪಡಿಸಿ ಟ್ವೀಟ್‌ ಮಾಡಿರುವ ಇಶಾನ್‌ ತರೂರ್‌, “ನನ್ನ ಹೃದಯ ಒಡೆದುಹೋಗಿದೆ. ನಾನೂ ಸೇರಿದಂತೆ ಹಲವು ಅಂತಾರಾಷ್ಟ್ರೀಯ ಸಿಬ್ಬಂದಿಗಳನ್ನು ವಜಾಗೊಳಿಸಲಾಗಿದೆ. ನಾವೆಲ್ಲರೂ ಸುಮಾರು 12 ವರ್ಷಗಳ ಕಾಲ ಒಟ್ಟಿಗೆ ಕೆಲಸ ಮಾಡಿದ್ದೇವೆ. ಈಗ, ಭಾರವಾದ ಮನಸ್ಸಿನಿಂದ ಹೊರ ನಡೆದಿದ್ದೇವೆ” ಎಂದು ಹೇಳಿದ್ದಾರೆ.

“2017ರಿಂದ ಪ್ರತಿ ವಾರವೂ ಹಲವಾರು ಅಂಕಣಗಳನ್ನು ಬರೆದಿದ್ದೇನೆ. ನನ್ನ ಅಂಕಣಗಳನ್ನು ಓದುತ್ತಿದ್ದ ನನ್ನ 5 ಲಕ್ಷಕ್ಕೂ ಹೆಚ್ಚು ನಿಷ್ಠಾವಂತ ಓದುಗರಿಗೆ ನಾನು ಕೃತಜ್ಞನಾಗಿದ್ದೇನೆ. ಇಂದು ಪ್ರಜಾಪ್ರಭುತ್ವವು ಕತ್ತಲಿನಲ್ಲಿ ಸತ್ತಿದೆ. ಇದು ಕೆಟ್ಟ ದಿನ” ಎಂದು ಅವರು ಹೇಳಿದ್ದಾರೆ.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...