ಅಫ್ಘಾನಿಸ್ತಾನ | 6.3 ತೀವ್ರತೆಯ ಪ್ರಬಲ ಭೂಕಂಪ; ಕನಿಷ್ಠ ಏಳು ಮಂದಿ ಸಾವು

Date:

ಸೋಮವಾರ ಮುಂಜಾನೆ ಉತ್ತರ ಅಫ್ಘಾನಿಸ್ತಾನದ ಮಜಾರ್-ಎ ಷರೀಫ್ ನಗರದಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದಾರೆ. ಹಾಗೆಯೇ ಸುಮಾರು 150 ಜನರು ಗಾಯಗೊಂಡಿದ್ದಾರೆ ಎಂದು ಪ್ರಾಂತೀಯ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

- Advertisement -

ಸುಮಾರು 523,000 ಜನಸಂಖ್ಯೆಯನ್ನು ಹೊಂದಿರುವ ಮಜಾರ್-ಎ ಷರೀಫ್ ಬಳಿ 28 ಕಿಮೀ (17.4 ಮೈಲುಗಳು) ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಅಫ್ಘಾನಿಸ್ತಾನದಲ್ಲಿ ಮತ್ತೆ ಭೂಕಂಪ, ಸಾವಿನ ಸಂಖ್ಯೆ 2,205ಕ್ಕೆ ಏರಿಕೆ

“ಇಂದು ಬೆಳಿಗ್ಗೆ ಭೂಕಂಪವಾಗಿದ್ದು 7 ಮಂದಿ ಮೃತಪಟ್ಟಿದ್ದಾರೆ. 150 ಮಂದಿ ಗಾಯಗೊಂಡಿದ್ದು ಅವರನ್ನು ಆರೋಗ್ಯ ಕೇಂದ್ರಗಳಿಗೆ ವರ್ಗಾಯಿಸಲಾಗಿದೆ” ಎಂದು ಮಜಾರ್-ಎ ಷರೀಫ್ ಬಳಿಯ ಪರ್ವತ ಉತ್ತರ ಪ್ರಾಂತ್ಯದ ಸಮಂಗನ್‌ನಲ್ಲಿರುವ ಆರೋಗ್ಯ ಇಲಾಖೆಯ ವಕ್ತಾರ ಸಮೀಮ್ ಜೋಯಂಡಾ ತಿಳಿಸಿರುವುದಾಗಿ ರಾಯಿಟರ್ಸ್‌ ವರದಿ ಮಾಡಿದೆ.

ಭೂಕಂಪಗಳ ಪ್ರಭಾವದ ಬಗ್ಗೆ ಮಾಹಿತಿಯನ್ನು ನೀಡುವ USGS(ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ) ಪೇಜರ್‌ನಲ್ಲಿ ಆರೆಂಜ್ ಅಲರ್ಟ್ ಅನ್ನು ಘೋಷಿಸಿದೆ. ಹಾಗೆಯೇ ಸಾವು ನೋವು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಸೂಚಿಸಿದೆ.

“ಭೂಕಂಪವು ಮಜರ್-ಇ-ಶರೀಫ್‌ನ ಪವಿತ್ರ ದೇವಾಲಯದ ಭಾಗವನ್ನು ನಾಶಪಡಿಸಿದೆ” ಎಂದು ಬಾಲ್ಖ್ ಪ್ರಾಂತ್ಯದ ವಕ್ತಾರ ಹಾಜಿ ಜೈದ್ ಹೇಳಿದ್ದಾರೆ. ಅಫ್ಘಾನಿಸ್ತಾನದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆಯು ಸಾವುನೋವುಗಳು ಮತ್ತು ಹಾನಿಯ ವರದಿಗಳನ್ನು ಶೀಘ್ರವೇ ಹಂಚಿಕೊಳ್ಳಲಾಗುವುದು ಎಂದು ಹೇಳಿದೆ.

ಭೂಕಂಪ ಪೀಡಿತ ಅಫ್ಘಾನಿಸ್ತಾನದಲ್ಲಿ ಆಗಸ್ಟ್‌ನಲ್ಲಿ 6.0 ತೀವ್ರತೆಯ ಭೂಕಂಪವಾಗಿದ್ದು 2,200 ಮಂದಿ ಸಾವನ್ನಪ್ಪಿದ್ದಾರೆ. ಸಾವಿರಾರು ಮಂದಿ ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ಆಡಳಿತ ತಿಳಿಸಿದೆ. 2015ರಲ್ಲಿ ಈಶಾನ್ಯ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪದಲ್ಲಿ ಅಫ್ಘಾನಿಸ್ತಾನ ಮತ್ತು ಹತ್ತಿರದ ಉತ್ತರ ಪಾಕಿಸ್ತಾನದ ನೂರಾರು ಮಂದಿ ಸಾವನ್ನಪ್ಪಿದ್ದರು. 2023ರಲ್ಲಿ ಸಂಭವಿಸಿದ ಭೂಕಂಪ ಕನಿಷ್ಠ ಸಾವಿರ ಮಂದಿಯನ್ನು ಬಲಿ ತೆಗೆದುಕೊಂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಶ್ವಸಂಸ್ಥೆಯಲ್ಲಿ ನೆತನ್ಯಾಹು ಭಾಷಣಕ್ಕೆ ಜಾಗತಿಕ ಬಹಿಷ್ಕಾರ: ಖುರ್ಚಿಗೆ ಅಂಟಿಕೊಂಡ ಭಾರತದ ಧೋರಣೆಗೆ ಖಂಡನೆ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (UNGA) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾಷಣ...

CNN, MS NOW, Politicoಗೆ ಶ್ವೇತಭವನ ಪ್ರವೇಶ ನಿರ್ಬಂಧ; ಟ್ರಂಪ್ ಆದೇಶಕ್ಕೆ ಫೆಡರಲ್ ಕೋರ್ಟ್ ತಡೆ

CNN, MS NOW ಮತ್ತು Politico ಸುದ್ದಿ‌ ಸಂಸ್ಥೆಗಳ ಪತ್ರಕರ್ತರಿಗೆ ಶ್ವೇತಭವನ...

ಸೂಚನೆಯಿಲ್ಲದೆ ಆಸ್ಟ್ರೇಲಿಯಾದ ಸರ್ಕಾರಿ ವೆಬ್‌ಸೈಟ್ ಹ್ಯಾಕ್ ಮಾಡಿದ ‘OpenAI’

ಆಸ್ಟ್ರೇಲಿಯಾದ ಸರ್ಕಾರಿ ಆರೋಗ್ಯ ಇಲಾಖೆಯ ವೆಬ್‌ಸೈಟ್‌ ಒಂದನ್ನು ಕೃತಕ ಬುದ್ಧಿಮತ್ತೆ (AI)...

10 ಸಾವಿರ ಸಂಸ್ಥೆಗಳ ಇ-ಮೇಲ್ ಹ್ಯಾಕ್: ಸೈಬರ್ ವಂಚಕರ ‘ಎಐ ಚಾಟ್‌ಬಾಟ್’ ಸ್ಥಗಿತಗೊಳಿಸಿದ ಮೈಕ್ರೋಸಾಫ್ಟ್

ವಿಶ್ವಾದ್ಯಂತ 10,000ಕ್ಕೂ ಹೆಚ್ಚು ಸಂಸ್ಥೆಗಳಿಗೆ ಸೇರಿದ 12,000ಕ್ಕೂ ಅಧಿಕ ಇ-ಮೇಲ್ ಖಾತೆಗಳನ್ನು...