ಜೋಹಾನ್ಸ್‌ಬರ್ಗ್‌ನ 5 ಅಂತಸ್ತಿನ ಕಟ್ಟಡಕ್ಕೆ ಬೆಂಕಿ: ಸಾವಿನ ಸಂಖ್ಯೆ 73ಕ್ಕೆ ಏರಿಕೆ

Date:

ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನ 5 ಅಂತಸ್ತಿನ ಕಟ್ಟಡವೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಸಾವಿನ ಸಂಖ್ಯೆ 73ಕ್ಕೆ ಏರಿಕೆಯಾಗಿದೆ.

ಮಧ್ಯ ಜೋಹಾನ್ಸ್‌ಬರ್ಗ್‌ನ ಬಹುಮಹಡಿ ವಸತಿ ಕಟ್ಟಡದಲ್ಲಿ ಗುರುವಾರ(ಆಗಸ್ಟ್‌ 31) ಬೆಳಗ್ಗೆ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಇತ್ತೀಚಿನ ವರದಿಗಳಂತೆ 73 ಜನರು ಸಾವನ್ನಪ್ಪಿದ್ದಾರೆ ಎಂದು ದಕ್ಷಿಣ ಆಫ್ರಿಕಾದ ತುರ್ತು ಸೇವೆಗಳ ನಿರ್ವಹಣಾ ಇಲಾಖೆ ತಿಳಿಸಿವೆ.

52ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರುವ ಸಾಧ್ಯತೆ ಇದೆಯೆಂದು ತುರ್ತು ನಿರ್ವಾಹಣಾ ಅಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬೆಂಕಿಯನ್ನು ಬಹುಮಟ್ಟಿಗೆ ನಂದಿಸಲಾಗಿದೆ. ಶೋಧ ಹಾಗೂ ರಕ್ಷಣಾ ಕಾರ್ಯಾಚರಣೆ ಮುಂದುವರಿಯುತ್ತಿದೆ. ಅಗ್ನಿಶಾಮಕ ದಳ ಹಾಗೂ ತುರ್ತು ವಾಹನಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದು, ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸೆ.18ರಿಂದ ಸಂಸತ್ತಿನ ವಿಶೇಷ ಅಧಿವೇಶನ ಕರೆದ ಕೇಂದ್ರ

ಸಾವಿನ ಸಂಖ್ಯೆ ಹೆಚ್ಚಾಗುವ ಸಂಭವವಿದ್ದು, ಕಟ್ಟಡದೊಳಗೆ ಇನ್ನಷ್ಟು ಮೃತದೇಹಗಳು ಸಿಲುಕಿರುವ ಸಾಧ್ಯತೆ ಇದೆ. ಇದು ಜೋಹಾನ್ಸ್‌ಬರ್ಗ್‌ ಕಳೆದ 20 ವರ್ಷದ ಅವಧಿಯಲ್ಲಿ ನಡೆದ ಅತಿದೊಡ್ಡ ದುರಂತವಾಗಿದೆ. ಬೆಂಕಿಗೆ ಕಾರಣ ಮತ್ತು ಹಾನಿಯ ಪ್ರಮಾಣ ಇನ್ನೂ ತಿಳಿದುಬಂದಿಲ್ಲ.

ದುರಂತದಲ್ಲಿ 141 ಕುಟುಂಬಗಳು ಸಂತ್ರಸ್ತವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಬೆಂಕಿ ಹೊತ್ತಿಕೊಂಡ ಸಮಯದಲ್ಲಿ ಕಟ್ಟಡದಲ್ಲಿ ಎಷ್ಟು ಜನರು ಇದ್ದರು ಎಂದು ತಕ್ಷಣವೇ ಹೇಳಲು ಸಾಧ್ಯವಿಲ್ಲ. ಅವರಲ್ಲಿ ಹಲವರು ವಿದೇಶಿ ಪ್ರಜೆಗಳು ಎಂದು ನಂಬಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಳಿಯಿಂದ ರಕ್ಷಿಸಿಕೊಳ್ಳುವ ಸಲುವಾಗಿ ನಿವಾಸಿಗಳು ಮಧ್ಯರಾತ್ರಿ ಬೆಂಕಿ ಕಾಯಿಸಿಕೊಳ್ಳುವಾಗ ದುರಂತ ಸಂಭವಿಸಿರುವ ಸಾಧ್ಯತೆಯಿದೆ ಎಂದು ಸ್ಥಳೀಯರೊಬ್ಬರು ತಿಳಿಸಿದ್ದಾರೆ. ಆದಾಗ್ಯೂ, ಬೆಂಕಿ ಅನಾಹುತಕ್ಕೆ ಕಾರಣವೇನು ಎಂಬುದನ್ನು ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇರಾನ್ ವಶದಲ್ಲಿ ಇಸ್ರೇಲ್ ಹಡಗು: 17 ಸಿಬ್ಬಂದಿಗಳ ಭೇಟಿ ಮಾಡಲು ಭಾರತೀಯ ಅಧಿಕಾರಿಗಳಿಗೆ ಅನುಮತಿ

ಇರಾನ್‌ನ ಕಮಾಂಡೋಗಳು 17 ಭಾರತೀಯ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಇಸ್ರೇಲ್ ಮೂಲದ ಸರಕು...

ಪಾಕಿಸ್ತಾನ | ಸರಬ್ಜಿತ್ ಸಿಂಗ್ ಕೊಲೆಯ ಆರೋಪಿ ಅಮೀರ್ ಸರ್ಫರಾಜ್ ಗುಂಡಿಕ್ಕಿ ಹತ್ಯೆ

ಭಾರತದ ಸರಬ್ಜಿತ್ ಸಿಂಗ್‌ ಹತ್ಯೆಯ ಆರೋಪಿ ಪಾಕಿಸ್ತಾನದ ಭೂಗತ ಪಾತಕಿ ಅಮೀರ್‌...

ಇಸ್ರೇಲ್ ಮೇಲೆ ಇರಾನ್ ಡ್ರೋನ್ ಹಾರಾಟ: ಮುಚ್ಚಿದ್ದ ಜೋರ್ಡಾನ್, ಲೆಬನಾನ್, ಇರಾಕ್ ವಾಯು ಮಾರ್ಗ ಮತ್ತೆ ಆರಂಭ

ಇಸ್ರೇಲ್ ಮೇಲೆ ಇರಾನ್‌ ಡ್ರೋನ್‌ಗಳನ್ನು ಹಾರಿಸುತ್ತಿದ್ದಂತೆ ಜೋರ್ಡಾನ್, ಇರಾಕ್ ಮತ್ತು ಲೆಬನಾನ್...

ಇರಾನ್-ಇಸ್ರೇಲ್ ಉದ್ವಿಗ್ನತೆ | ಮಿತ್ರ ದೇಶಗಳು ಶತ್ರುಗಳಾಗಿದ್ದು ಹೇಗೆ?; ಸಂಕ್ಷಿಪ್ತ ಇತಿಹಾಸ

ಸಿರಿಯಾದಲ್ಲಿ ಇಸ್ರೇಲ್ ನಡೆಸಿದ ವಿಧ್ವಂಸಕ ಕೃತ್ಯವು ಅಂತಾರಾಷ್ಟ್ರೀಯ ಶಾಂತಿ ಕಾನೂನಿನ ಉಲ್ಲಂಘನೆಯಾಗಿದೆ....