12 ವರ್ಷದ ಬಾಲಕಿಯನ್ನು ವಿವಾಹವಾದ 63 ವರ್ಷದ ಪಾದ್ರಿ; ವ್ಯಾಪಕ ಆಕ್ರೋಶ

Date:

ಘಾನಾ ರಾಷ್ಟ್ರದಲ್ಲಿರುವ ಅಕ್ರಾದ ನುಂಗುವಾ ಪ್ರದೇಶದಲ್ಲಿ 63 ವರ್ಷದ ಪಾದ್ರಿಯೊಬ್ಬರು 12 ವರ್ಷದ ಬಾಲಕಿಯನ್ನು ವಿವಾಹವಾಗಿದ್ದಾರೆ. ಈ ಮದುವೆ ಲೈಂಗಿಕ ಸಂಬಂಧದ ಕಾರಣಕ್ಕಲ್ಲ. ಆಧ್ಯತ್ಮಿಕ ಕರ್ತವ್ಯಗಳಲ್ಲಿ ಸಹಾಯ ಮಾಡುವುದಕ್ಕಾಗಿ ಎಂದು ಆ ವಿವಾಹವನ್ನು ಪಾದ್ರಿ ಮತ್ತು ಅವರ ವಕ್ತಾರರು ಸಮರ್ಥಿಸಿಕೊಂಡಿದ್ದಾರೆ.

- Advertisement -

ನುಂಗುವಾ ಪ್ರದೇಶದ ಆಧ್ಯಾತ್ಮಿಕ ನಾಯಕ ನುಮೊ ಬೊರ್ಕೆಟಿ ಲಾವೆಹ್ ತ್ಸುರು-33 ಎಂಬವರು ಶನಿವಾರ ನಡೆದ ಬೃಹತ್ ಸಮಾರಂಭದಲ್ಲಿ ಅಪರಿಚಿತ ಬಾಲಕಿಯನ್ನು ವಿವಾಹವಾದರು. ತ್ಸುರು ಅವರು ‘ಗ್ಬೊರ್ಬು ವುಲೋಮೊ’ ಅಥವಾ ಸಾಂಪ್ರದಾಯಿಕ ಪ್ರಧಾನ ಅರ್ಚಕರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಬಾಲಕಿಯನ್ನು ವಿವಾಹವಾದ ತ್ಸುರು ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಆಕ್ರೋಶ ಭುಗಿಲೆದ್ದ ನಂತರ, ಬಾಲಕಿ ಮತ್ತು ಆಕೆಯ ತಾಯಿಯನ್ನು ಪೊಲೀಸ್‌ ರಕ್ಷಣೆಯಲ್ಲಿ ಇರಿಸಲಾಗಿದೆ. ಘಾನಾದ ಅಟಾರ್ನಿ ಜನರಲ್ ತನಿಖೆ ಪ್ರಾರಂಭಿಸಿದ್ದಾರೆ ಎಂದು ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ (SCMP) ವರದಿ ಮಾಡಿದೆ.

“ಇದು ಕ್ರಿಮಿನಲ್ ಅಪರಾಧವಾಗಿದೆ. ಆರೋಪಗಳು ಸಾಬೀತಾದರೆ, ಇದರಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧವೂ ಕಾನೂನು ಕ್ರಮ ಜರುಗಿಸಲಾಗುತ್ತದೆ” ಎಂದು ಅಟಾರ್ನಿ ಜನರಲ್ ಕಚೇರಿ ಹೇಳಿದೆ.

ಘಾನಾದ ಕಾನೂನಿನ ಪ್ರಕಾರ, ಮದುವೆಗೆ ಕಾನೂನುಬದ್ಧ ಕನಿಷ್ಠ ವಯಸ್ಸು 18 ವರ್ಷ ಆಗಿದೆ. ಆದರೆ, ಪಾದ್ರಿ 12 ವರ್ಷದ ಬಾಲಕಿಯನ್ನು ವಿವಾಹವಾಗಿದ್ದಾರೆ.

ವಿವಾಹವನ್ನು ಸಮರ್ಥಿಸಿಕೊಂಡಿರುವ ಪಾದ್ರಿಯ ವಕ್ತಾರ ಮಂಕ್ರಾಲೊ ಶ್ವೊನೊಟಾಲೋರ್, “ಬಾಲಕಿ 18 ವರ್ಷ ವಯಸ್ಸನ್ನು ತಲುಪುವವರೆಗೆ ವೈವಾಹಿಕ ಕರ್ತವ್ಯಗಳನ್ನು ಪೂರೈಸುವುದಿಲ್ಲ. ಇದು ಮದುವೆ ಸಮಾರಂಭವಲ್ಲ. ಈ ವಿವಾಹಕ್ಕೆ ಲೈಂಗಿಕ ಸಂಬಂಧವಿಲ್ಲ. ಪಾದ್ರಿ ಈಗಾಗಲೇ ಮೂವರು ಹೆಂಡತಿಯರನ್ನು ಹೊಂದಿದ್ದಾರೆ. ಇದು ಪಾದ್ರಿಯ ಆಧ್ಯಾತ್ಮಿಕ ಕರ್ತವ್ಯಗಳಿಗೆ ಸಹಾಯ ಮಾಡುವುದಕ್ಕಾಗಿ ನಡೆದಿರುವ ವಿವಾಹ” ಎಂದು  ಸಾಂಪ್ರದಾಯಿಕ ಪಾತ್ರವಾಗಿದೆ” ಎಂದು ಹೇಳಿರುವುದಾಗಿ ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2026ರ ನೊಬೆಲ್ ಸಾಹಿತ್ಯ ಪ್ರಶಸ್ತಿ: ಕೆನಡಾದ ಖ್ಯಾತ ಕವಯಿತ್ರಿ ‘ಆನ್ ಕಾರ್ಸನ್’ ಮುಡಿಗೇರಿದ ಗರಿ

ಸಾಹಿತ್ಯ ಲೋಕದ ಅತ್ಯಂತ ಪ್ರತಿಷ್ಠಿತ ಗೌರವವಾದ 2026ನೇ ಸಾಲಿನ 'ನೊಬೆಲ್ ಸಾಹಿತ್ಯ...

ಅಮೆರಿಕದಲ್ಲಿ ಓದಿದರೂ ಭಾರತೀಯರಿಗೆ ಉದ್ಯೋಗ ಅಸಾಧ್ಯ; ಒಪಿಟಿ ಶುಲ್ಕ 60 ಲಕ್ಷ ರೂ. ಏರಿಸಲು ಟ್ರಂಪ್ ಸರ್ಕಾರ ಚಿಂತನೆ

ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳುವ ಭಾರತೀಯ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಭಾರೀ...

‘8 ಯುದ್ಧಗಳನ್ನು ನಿಲ್ಲಿಸಿದ್ದೇನೆ, ನನಗೇ ನೊಬೆಲ್ ಕೊಡಿ’: ಟ್ರಂಪ್ ಮತ್ತೆ ಪಟ್ಟು

ನಾರ್ವೇಜಿಯನ್ ನೊಬೆಲ್ ಸಮಿತಿಯು ಈ ಸಾಲಿನ ಪ್ರತಿಷ್ಠಿತ ‘ನೊಬೆಲ್ ಶಾಂತಿ ಪ್ರಶಸ್ತಿ’ಯನ್ನು...