ಅಫ್ಘಾನಿಸ್ತಾನ | ಭೀಕರ ಅಪಘಾತ: ಹೊತ್ತಿ ಉರಿದ ಬಸ್, 17 ಮಕ್ಕಳು ಸೇರಿ 71 ಮಂದಿ ದಾರುಣ ಸಾವು

Date:

ಅಫ್ಘಾನಿಸ್ತಾನದ ಪಶ್ಚಿಮ ಹೆರಾತ್ ಪ್ರಾಂತ್ಯದಲ್ಲಿ ನಡೆದ ಭೀಕರ ಬಸ್ ಅಪಘಾತದಲ್ಲಿ ಬಸ್ ಹೊತ್ತಿ ಉರಿದಿದ್ದು, 17 ಮಕ್ಕಳು ಸೇರಿದಂತೆ ಕನಿಷ್ಠ 71 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

- Advertisement -

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಾಂತೀಯ ಸರ್ಕಾರದ ವಕ್ತಾರ ಅಹ್ಮದುಲ್ಲಾ ಮುತ್ತಕಿ ಸಾವಿನ ಸಂಖ್ಯೆಯನ್ನು ದೃಢಪಡಿಸಿದ್ದಾರೆ ಎಂದು ವರದಿಯಾಗಿದೆ. ಹಾಗೆಯೇ ಇದು ಇತ್ತೀಚಿನ ದಿನಗಳಲ್ಲಿ ಸಂಭವಿಸಿದ ಅತ್ಯಂತ ಭೀಕರ ಸಂಚಾರ ಅಪಘಾತಗಳಲ್ಲಿ ಒಂದಾಗಿದೆ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಛತ್ತೀಸ್‌ಗಢ | ಭೀಕರ ಅಪಘಾತ: ಹೊತ್ತಿ ಉರಿದ ಕಾರು, ನಾಲ್ವರ ಸಾವು

“ಹೆರಾತ್‌ನಲ್ಲಿ ಒಂದು ಬಸ್, ಟ್ರಕ್ ಮತ್ತು ಮೋಟಾರ್‌ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ 71 ಮಂದಿ ಮೃತಪಟ್ಟಿದ್ದಾರೆ” ಎಂದು ತಿಳಿಸಿದ್ದಾರೆ.

ಸದ್ಯ ಡಿಕ್ಕಿಯ ನಂತರ ಬಸ್‌ ಹೊತ್ತಿ ಉರಿಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಬಸ್‌ನಲ್ಲಿ ಇರಾನ್‌ನಿಂದ ಗಡೀಪಾರು ಮಾಡಲಾದ ಅಪ್ಘಾನಿಸ್ತಾನಿಗಳು ಇದ್ದರು ಎಂದು ಹೇಳಲಾಗಿದೆ.

“ಗಡಿ ದಾಟಿದ ನಂತರ ಬಸ್ ಕಾಬೂಲ್ ಕಡೆಗೆ ಸಾಗುತ್ತಿತ್ತು. ಎಲ್ಲಾ ಪ್ರಯಾಣಿಕರು ಇಸ್ಲಾಂ ಕ್ವಾಲಾದಲ್ಲಿ ವಾಹನವನ್ನು ಹತ್ತಿದ ವಲಸಿಗರು ಆಗಿದ್ದಾರೆ” ಎಂದು ಪ್ರಾಂತೀಯ ಅಧಿಕಾರಿ ಮೊಹಮ್ಮದ್ ಯೂಸುಫ್ ಸಯೀದಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕ ಹಿಂದಿಕ್ಕಿ ಭಾರತದ ನಂ.1 LNG ಪೂರೈಕೆದಾರನಾದ ಓಮನ್‌!

ಪಶ್ಚಿಮ ಏಷ್ಯಾದ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಅನಿಲ ಪೂರೈಕೆಯಲ್ಲಿ...

ರಷ್ಯಾದಿಂದ ತೈಲ ಖರೀದಿಸಿದ ಅಮೆರಿಕ -ಜಾಗತಿಕ ಸೋಜಿಗ

ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ ರಷ್ಯಾದ ಮೇಲೆ ಕಠಿಣ ಆರ್ಥಿಕ ನಿರ್ಬಂಧಗಳನ್ನು ಹೇರಿ,...

ಲಡಾಖ್ ಭಾರತದ ಅವಿಭಾಜ್ಯ ಅಂಗ, ಚೀನಾ ನಿರಾಕರಿಸಿದರೂ‌ ಇದೇ ಸತ್ಯ; ಡ್ರ್ಯಾಗನ್‌ಗೆ ಭಾರತ ತಿರುಗೇಟು!

ಲಡಾಖ್ ಕೇಂದ್ರಾಡಳಿತ ಪ್ರದೇಶದ 28 ಪ್ರಮುಖ ಹಾಗೂ ಕಾರ್ಯತಂತ್ರದ (Strategic) ಸ್ಥಳಗಳಿಗೆ...