‘8 ಫೈಟರ್‌ ಜೆಟ್‌ಗಳನ್ನು ಹೊಡೆದುರುಳಿಸಲಾಗಿತ್ತು’: ಭಾರತ-ಪಾಕ್ ಕದನ ವಿರಾಮ ಕುರಿತು ಮತ್ತೆ ಟ್ರಂಪ್ ಹೇಳಿಕೆ

Date:

ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮಕ್ಕಾಗಿ ತಾವೇ ಮಧ್ಯಸ್ಥಿಕೆ ವಹಿಸಿದ್ದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಮತ್ತೆ ಹೇಳಿಕೊಂಡಿದ್ದಾರೆ. ಉಭಯ ರಾಷ್ಟ್ರಗಳ ಸಂಘರ್ಷದ ಸಮಯದಲ್ಲಿ 8 ಫೈಟರ್‌ ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆ ಎಂದಿರುವ ಟ್ರಂಪ್, ತಮ್ಮ ಹಿಂದಿನ ಹೇಳಿಕೆಯ 7 ಜೆಟ್‌ ಎಂಬುದನ್ನು 8 ಎಂದು ಪರಿಷ್ಕರಿಸಿದ್ದಾರೆ. ಪರಮಾಣು ಶಸ್ತ್ರಸಜ್ಜಿತ ರಾಷ್ಟ್ರಗಳು ಮೇ ತಿಂಗಳಿನಲ್ಲಿ ಸಂಘರ್ಷಕ್ಕಿಳಿದಾಗ, ಅವುಗಳ ಜೊತೆಗಿನ ವ್ಯಾಪಾರ ಒಪ್ಪಂದಗಳನ್ನು ರದ್ದುಗೊಳಿಸುವುದಾಗಿ ಬೆದರಿಕೆ ಹಾಕಿದ ನಂತರವೇ, ಕದನ ವಿರಾಮಕ್ಕೆ ಒಪ್ಪಿಸಿಕೊಂಡರು ಎಂದು ಟ್ರಂಪ್‌ ಪುನರುಚ್ಚರಿಸಿದ್ದಾರೆ.

- Advertisement -

ಮಿಯಾಮಿಯಲ್ಲಿ ನಡೆದ ‘ಅಮೆರಿಕ ಬ್ಯುಸಿನೆಸ್ ಫೋರಂ’ನಲ್ಲಿ ಟ್ರಂಪ್ ಮಾತನಾಡಿದರು. “ನಾನು ಭಾರತ ಮತ್ತು ಪಾಕಿಸ್ತಾನದೊಂದಿಗಿನ ವ್ಯಾಪಾರ ಒಪ್ಪಂದಗಳನ್ನು ನಡೆಸುತ್ತಿದ್ದೆ. ಅದೇ ಸಮಯದಲ್ಲಿ, ಅವರು ಯುದ್ಧಕ್ಕೆ ಹೋಗುತ್ತಿದ್ದಾರೆಂದು ನಾನು ಕೇಳಿದೆ. ಸಂಘರ್ಷದಲ್ಲಿ ಏಳು ವಿಮಾನಗಳನ್ನು ಹೊಡೆದುರುಳಿಸಲಾಗಿದೆ ಮತ್ತು ಎಂಟನೆಯದು ತೀವ್ರವಾಗಿ ಹಾನಿಯಾಗಿದೆ ಎಂಬುದು ನನಗೆ ತಿಳಿಯಿತು. ಎಂಟು ವಿಮಾನಗಳನ್ನು ಅಕ್ಷರಶಃ ಹೊಡೆದುರುಳಿಸಲಾಗಿದೆ. ಅವೆರಡೂ ಪರಮಾಣು ರಾಷ್ಟ್ರಗಳು. ‘ನೀವು ಶಾಂತಿಗೆ ಒಪ್ಪದ ಹೊರತು ನಾನು ನಿಮ್ಮೊಂದಿಗೆ ಯಾವುದೇ ವ್ಯಾಪಾರ ಒಪ್ಪಂದಗಳನ್ನು ಮಾಡಿಕೊಳ್ಳುವುದಿಲ್ಲ’ವೆಂದು ನಾನು ಅವರಿಗೆ ಹೇಳಿದೆ” ಎಂದು ಟ್ರಂಪ್ ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಲೇಖನ ಓದಿದ್ದೀರಾ?: ಬಿಹಾರ ಚುನಾವಣೆ | ಸಾಧನೆಗಳೇ ಇಲ್ಲ; ವಿಪಕ್ಷ ನಾಯಕರ ವೈಯಕ್ತಿಕ ಟೀಕೆಗೆ ಜೋತು ಬಿದ್ದ ಬಿಜೆಪಿ

“ಎರಡು ರಾಷ್ಟ್ರಗಳು ‘ಇಲ್ಲ. ವ್ಯಾಪಾರ ಒಪ್ಪಂದಕ್ಕೂ ಸಂಘರ್ಷಕ್ಕೂ ಯಾವುದೇ ಸಂಬಂಧವಿಲ್ಲ…’ ಎಂದು ಹೇಳಿದರು. ನಾನು ಹೇಳಿದೆ, ‘ಎಲ್ಲ ರೀತಿಯ ಸಂಬಂಧವೂ ಇದೆ. ನೀವು ಪರಮಾಣು ಶಕ್ತಿಗಳು. ನೀವು ಪರಸ್ಪರ ಯುದ್ಧದಲ್ಲಿದ್ದರೆ ನಾವು ನಿಮ್ಮೊಂದಿಗೆ ಯಾವುದೇ ಒಪ್ಪಂದಗಳನ್ನು ಮಾಡಿಕೊಳ್ಳುವುದಿಲ್ಲ’ ಎಂದು ಸ್ಪಷ್ಟವಾಗಿ ಹೇಳಿದೆ. ಮರುದಿನ ಎರಡು ದೇಶಗಳು ಶಾಂತಿ ಒಪ್ಪಂದ ಮಾಡಿಕೊಂಡಿವೆ ಎಂದು ನನಗೆ ಕರೆ ಬಂದಿತು. ನಾನು ‘ಧನ್ಯವಾದಗಳು. ವ್ಯಾಪಾರ ಮಾಡೋಣ’ ಎಂದು ಹೇಳಿದೆ. ಅದು ಉತ್ತಮವಲ್ಲವೇ?” ಎಂದು ಟ್ರಂಪ್ ಹೇಳಿದ್ದಾರೆ.

ಮೇ 10ರಂದು ಕದನ ವಿರಾಮ ಘೋಷಣೆಯಾದ ಬಳಿಕ, ಈವರೆಗೆ ಟ್ರಂಪ್‌ ಅವರು ಸುಮಾರು 60 ಬಾರಿ ತಮ್ಮಿಂದಲೇ ಕದನ ವಿರಾಮ ಘೋಷಣೆಯಾಯಿತು ಎಂದು ಹೇಳಿಕೊಂಡಿದ್ದಾರೆ. ಅಂದು ಕೂಡ ಕದನ ವಿರಾಮದ ಕುರಿತು ಟ್ರಂಪ್ ಅವರೇ ಮೊದಲು ಪೋಸ್ಟ್‌ ಹಂಚಿಕೊಂಡಿದ್ದರು. ಟ್ರಂಪ್‌ ಅವರು ಹೇಳಿಕೆಯನ್ನು ಭಾರತವು ನಿರಾಕರಿಸಿದೆ. ಆದರೆ, ಪ್ರಧಾನಿ ಮೋದಿ ಅವರು ಟ್ರಂಪ್ ಹೇಳಿಕೆಗಳಿಗೆ ಈವರೆಗೆ ಪ್ರತಿಕ್ರಿಯಿಸಿಲ್ಲ.

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕರು 26 ನಾಗರಿಕರನ್ನು ಕ್ರೂರವಾಗಿ ಹತ್ಯೆಗೈದಿದ್ದರು. ಪ್ರತೀಕಾರವಾಗಿ ಮೇ 7 ರಂದು ಆಪರೇಷನ್ ಸಿಂಧೂರ್‌ ಹೆಸರಿನಲ್ಲಿ ಭಾರತವು, ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ಮಾಡಿತು. ನಾಲ್ಕು ದಿನಗಳ ಸಂಘರ್ಷದ ಬಳಿಕ, ಮೇ 10ರಂದು ಕದನ ವಿರಾಮ ಘೋಷಿಸಲಾಯಿತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...