ಅಮೆರಿಕ | ಟೆಕ್ಸಾಸ್ ಮಾಲ್‌ನಲ್ಲಿ ಗುಂಡಿನ ದಾಳಿ; 9 ಮಂದಿ ಸಾವು, ಹಲವರಿಗೆ ಗಾಯ

Date:

  • ಅಮೆರಿಕ ಡಲ್ಲಾಸ್ ಉತ್ತರಕ್ಕೆ ಅಲನ್ ಪ್ರೀಮಿಯಂ ಮಾಲ್‌ನಲ್ಲಿ ಗುಂಡಿನ ದಾಳಿ
  • ಸ್ವತಃ ಗುಂಡು ಹಾರಿಸಿಕೊಂಡು ಬಂದೂಕುಧಾರಿ ಸಾವು ವರದಿ

ಅಮೆರಿಕ ದೇಶದಲ್ಲಿ ಮತ್ತೆ ಗುಂಡಿನ ಮೊರೆತ ಕೇಳಿದೆ. ಟೆಕ್ಸಾಸ್ ನಗರದ ಹೊರವಲಯದ ಮಾಲ್‌ವೊಂದರಲ್ಲಿ ಬಂದೂಕುಧಾರಿಯೊಬ್ಬ ಒಳನುಗ್ಗಿ ಮನಸೋಯಿಚ್ಛೆ ಗುಂಡಿನ ದಾಳಿ ನಡೆಸಿದ ಪರಿಣಾಮ ಎಂಟು ಮಂದಿ ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ.

- Advertisement -

ಶನಿವಾರ (ಮೇ 6) ಸುಮಾರು ಮಧ್ಯಾಹ್ನ 3.30ಕ್ಕೆ (ಸ್ಥಳೀಯ ಕಾಲಮಾನ) ನಡೆದಿದೆ. ಬಂದೂಕುಧಾರಿ ಅಪರಿಚಿತ ವ್ಯಕ್ತಿ ಗುಂಡು ಹಾರಿಸಿದ ನಂತರ ತನಗೆ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾನೆ. ಘಟನೆಯಲ್ಲಿ ಮಕ್ಕಳೂ ಸೇರಿ 7 ಮಂದಿ
ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ದಾಳಿಯಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ವ್ಯಕ್ತಿ ಪರಾರಿಯಾಗಿದ್ದು, ಶೋಧ ನಡೆಯುತ್ತಿದೆ ಎಂದು ಅಲೆನ್ ಪೊಲೀಸ್ ಅಧಿಕಾರಿ ಬ್ರಿಯಾನ್ ಹಾರ್ವೆ ಹೇಳಿದರು.

ಡಲ್ಲಾಸ್‌ನ ಉತ್ತರಕ್ಕೆ 25 ಮೈಲು (40 ಕಿ.ಮೀ) ದೂರದ ಅಲೆನ್ಸ್‌ನಲ್ಲಿ ವಿಶಾಲವಾದ ವಾಣಿಜ್ಯ ಸಂಕೀರ್ಣ ಅಲನ್ ಪ್ರೀಮಿಯಂ ಮಾಲ್‌ನಲ್ಲಿ ಗುಂಡಿನ ದಾಳಿ ನಡೆದಿದೆ. ವಾರಾಂತ್ಯದ ದಿನಗಳಲ್ಲಿ ಅಲೆನ್ ವ್ಯಾಪಾರಗಳಿಂದ ತುಂಬಿರುತ್ತದೆ.

ಗಾಯಗೊಂಡವರ ಸ್ಥಿತಿ ಬಗ್ಗೆ ಇನ್ನೂ ಮಾಹಿತಿ ದೊರೆತಿಲ್ಲ. ದಾಳಿಕೋರ ಗುಂಡು ಹಾರಿಸಿದ ನಂತರ ಸ್ವತಃ ಗುಂಡು ಹಾರಿಸಿಕೊಂಡಿದ್ದಾನೆಯೇ ಅಥವಾ ಪೊಲೀಸರು ಗುಂಡು ಹಾರಿಸಿದ್ದಾರೆಯೇ ಎಂಬುದು ಸ್ಪಷ್ಟವಾಗಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ.

ಈ ಸುದ್ದಿ ಓದಿದ್ದೀರಾ? ಬಿಲಾವಲ್ ಭುಟ್ಟೊ ಭಯೋತ್ಪಾದಕ ಉದ್ಯಮದ ವಕ್ತಾರ: ಜೈಶಂಕರ್ ಟೀಕೆ

ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು ಅಮೆರಿಕ ಟೆಕ್ಸಾಸ್‌ನ ಮಾಲ್‌ನಲ್ಲಿಯ ಗುಂಡಿನ ದಾಳಿಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆ ಕರೆದೊಯ್ಯುತ್ತಿರುವ ದೃಶ್ಯ ಹರಿದಾಡಿದೆ.

ಬಂದೂಕುಧಾರಿ ಮಾಲ್‌ನ ವಾಹನ ತಂಗುದಾಣ ಪ್ರದೇಶಕ್ಕೆ ಬಂದು ಗುಂಡಿನ ದಾಳಿ ಪ್ರಾರಂಭಿಸಿದ್ದಾನೆ. ದಾಳಿಕೋರ ಮೃತಪಟ್ಟಿರುವುದು ದೃಶ್ಯದಲ್ಲಿ ಕಂಡು ಬಂದಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸಿದ್ದಾರೆ.

“ಇದೊಂದು ಅನಿರ್ವಚನೀಯ ದುರಂತ” ಎಂದು ಟೆಕ್ಸಾಸ್‌ ರಾಜ್ಯಪಾಲ ಗ್ರೆಗ್‌ ಅಬ್ಬಾಟ್‌ ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಅಧ್ಯಕ್ಷ ಜೋ ಬೈಡನ್‌ ಅವರಿಗೆ ಗುಂಡಿನ ದಾಳಿ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಶ್ವೇತಭವನದ ಅಧಿಕಾರಿಗಳು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರತಿಭಟನಾಕಾರರ ಬಂಧನ ಪ್ರಜಾಪ್ರಭುತ್ವದ ಹಕ್ಕುಗಳ ದಮನ: ದೆಹಲಿ ಪೊಲೀಸ್ ಕ್ರಮಕ್ಕೆ ವಿಶ್ವಸಂಸ್ಥೆ ಆಕ್ಷೇಪ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ...

ಪ್ರಧಾನಮಂತ್ರಿ ಅಂಬಾನಿ ಕ್ಷಮಿಸಿ: ಭಾರತದಲ್ಲಿ ಸ್ಟಾರ್‌ಲಿಂಕ್ ವಿಳಂಬಕ್ಕೆ ಮುಕೇಶ್ ಅಂಬಾನಿ ವಿರುದ್ಧ ಎಲಾನ್ ಮಸ್ಕ್ ವ್ಯಂಗ್ಯ

ಭಾರತದಲ್ಲಿ ತಮ್ಮ ಉಪಗ್ರಹ ಆಧಾರಿತ ಇಂಟರ್ನೆಟ್ ಸೇವೆ ‘ಸ್ಟಾರ್‌ಲಿಂಕ್’ ಮಾರುಕಟ್ಟೆಗೆ ಪ್ರವೇಶಿಸುವುದನ್ನು...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ನವಿ ಪಿಳ್ಳೈಗೆ ಒಲಿದ ಶಾಂತಿ ಪುರಸ್ಕಾರ

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು...