ಅಫ್ಘಾನ್‌ ಭೂಕಂಪ | ಸಾವಿರಾರು ಮಂದಿ ಸಾವು; ಮೃತರಲ್ಲಿ 90% ಮಹಿಳೆಯರು/ಮಕ್ಕಳು

Date:

ತಾಲಿಬಾನ್ ಆಳ್ವಿಕೆಯಲ್ಲಿರುವ ಅಫ್ಘಾನಿಸ್ತಾನದಲ್ಲಿ ಶನಿವಾರ ಭಾರೀ ತೀವ್ರತೆಯ ಸರಣಿ ಭೂಕಂಪನ ಸಂಭವಿಸಿದೆ. ಸುಮಾರು 2,000ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ ಎಂದು ತಾಲಿಬಾನ್ ಆಡಳಿತ ಹೇಳಿದೆ. ಮೃತದಲ್ಲಿ ಶೇ.90ರಷ್ಟು ಮಂದಿ ಮಕ್ಕಳು ಮತ್ತು ಮಹಿಳೆಯರಾಗಿದ್ದಾರೆ ಎಂದು ವಿಶ್ವಸಂಸ್ಥೆ ಹೇಳಿದೆ.

ಅಫ್ಘಾನ್‌ನ ಹೆರಾತ್​ ಪ್ರಾಂತ್ಯದಲ್ಲಿ 6.3 ತೀವ್ರತೆಯಲ್ಲಿ ಭೂಕಂಪನ ಸಂಭವಿಸಿತ್ತು. ಭೂಕಂಪನದ ಕುರಿತು ವಿಶ್ವಸಂಸ್ಥೆ ವರದಿ ಬಿಡುಗಡೆ ಮಾಡಿದ್ದು, 1,294 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ, 1,688 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿಸಿದೆ.

“ಶುಕ್ರವಾರ ಬೆಳಗ್ಗೆ ಭೂಕಂಪ ಸಂಭವಿಸಿದೆ. ಆ ವೇಳೆ, ಮಹಿಳೆಯರು ಮತ್ತು ಮಕ್ಕಳು ಮನೆಯಲ್ಲಿದ್ದರು. ಪುರುಷರು ಉದ್ಯೋಗಕ್ಕಾಗಿ ಇರಾನ್‌ಗೆ ವಲಸೆ ಹೋಗಿದ್ದರು. ಹೀಗಾಗಿ, ಹೆಚ್ಚು ಮಹಿಳೆಯರು ಮತ್ತು ಮಕ್ಕಳು ಅವಶೇಷಗಳ ಅಡಿ ಸಿಲುಕಿಕೊಂಡಿದ್ದಾರೆ. ಒಂದು ವೇಳೆ, ರಾತ್ರಿ ಭೂಕಂಪ ಸಂಭವಿಸಿದ್ದರೆ ಸಾವಿನ ಸಂಖ್ಯೆಗೆ ಲೆಕ್ಕವೇ ಇರುತ್ತಿರಲಿಲ್ಲ” ಎಂದು ವಿಶ್ವಸಂಸ್ಥೆಯ ಅಫ್ಘಾನಿಸ್ತಾನದ ಪ್ರತಿನಿಧಿ ಜೈಮ್ ನಡಾಲ್ ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಭೂಕಂಪದಿಂದ ಇಡೀ ಹಳ್ಳಿಯೇ ನಾಶಗೊಂಡಿದೆ. ನೂರಾರು ಮನೆಗಳು, ಶಾಲೆಗಳು, ಆರೋಗ್ಯ ಕೇಂದ್ರಗಳು ನೆಲಸಮಗೊಂಡಿವೆ. ವಿಶ್ವಸಂಸ್ಥೆಯು ಆಂಬುಲೆನ್ಸ್‌ಗಳನ್ನು ಒದಗಿಸಿದೆ. ಅಗತ್ಯ ಸೌಲಭ್ಯಗಳನ್ನು ಒದಗಿಸುತ್ತಿದೆ. ವಿಶ್ವ ಆಹಾರ ಕಾರ್ಯಕ್ರಮದಡಿ 81 ಟನ್‌ ಆಹಾರವನ್ನು ಕಳುಹಿಸುತ್ತಿದೆ ಎಂದು ವಿಶ್ವಸಂಸ್ಥೆ ವಕ್ತಾರರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದುಬೈ ಪ್ರವಾಹ| ಭಾರೀ ಮಳೆ, ಬಿರುಗಾಳಿಯಿಂದ ಸಂಚಾರ ಅಸ್ತವ್ಯಸ್ತ; 28 ಭಾರತದ ವಿಮಾನಗಳು ರದ್ದು

ಮಧ್ಯಪ್ರಾಚ್ಯದ ಆರ್ಥಿಕ ಕೇಂದ್ರವಾದ ದುಬೈನಲ್ಲಿ ಭಾರೀ ಮಳೆ ಮತ್ತು ಚಂಡಮಾರುತ ಕಾಣಿಸಿಕೊಂಡಿದ್ದು...

ಮರುಭೂಮಿ ದೇಶ ದುಬೈನಲ್ಲಿ ಭಾರೀ ಮಳೆಯಿಂದ ಪ್ರವಾಹ; ಒಮಾನ್​ನಲ್ಲಿ 18 ಮಂದಿ ಸಾವು

ಯುನೈಟೆಡ್ ಅರಬ್ ಎಮಿರೆಟ್ಸ್ (ಯುಎಇ)ನಲ್ಲಿ ಮಂಗಳವಾರ ಸುರಿದ ಧಾರಾಕಾರ ಮಳೆಗೆ ದುಬೈ...

ಇರಾನ್ ವಶದಲ್ಲಿ ಇಸ್ರೇಲ್ ಹಡಗು: 17 ಸಿಬ್ಬಂದಿಗಳ ಭೇಟಿ ಮಾಡಲು ಭಾರತೀಯ ಅಧಿಕಾರಿಗಳಿಗೆ ಅನುಮತಿ

ಇರಾನ್‌ನ ಕಮಾಂಡೋಗಳು 17 ಭಾರತೀಯ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಇಸ್ರೇಲ್ ಮೂಲದ ಸರಕು...

ಪಾಕಿಸ್ತಾನ | ಸರಬ್ಜಿತ್ ಸಿಂಗ್ ಕೊಲೆಯ ಆರೋಪಿ ಅಮೀರ್ ಸರ್ಫರಾಜ್ ಗುಂಡಿಕ್ಕಿ ಹತ್ಯೆ

ಭಾರತದ ಸರಬ್ಜಿತ್ ಸಿಂಗ್‌ ಹತ್ಯೆಯ ಆರೋಪಿ ಪಾಕಿಸ್ತಾನದ ಭೂಗತ ಪಾತಕಿ ಅಮೀರ್‌...