ಅಫ್ಘಾನಿಸ್ತಾನ | ಪ್ರಬಲ ಭೂಕಂಪದಲ್ಲಿ 2 ಸಾವಿರಕ್ಕೂ ಹೆಚ್ಚು ಸಾವು

Date:

ಪಶ್ಚಿಮ ಅಫ್ಘಾನಿಸ್ತಾನ ಪ್ರದೇಶದಲ್ಲಿಸಂಭವಿಸಿದ ಭೂಕಂಪದಲ್ಲಿ 2 ಸಾವಿರಕ್ಕೂ ಹೆಚ್ಚು ಮಂದಿ ಸಾವನಪ್ಪಿದ್ದು, ರಿಕ್ಟರ್‌ ಮಾಪಕದಲ್ಲಿ ಭೂಕಂಪನದ ತೀವ್ರತೆಯ ಪ್ರಮಾಣ 6.3 ದಾಖಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

- Advertisement -

6.3 ತೀವ್ರತೆಯ ಭೂಕಂಪದ ಕೇಂದ್ರಬಿಂದುವು ಅಫ್ಘಾನ್‌ನ ಅತಿದೊಡ್ಡ ನಗರವಾದ ಹೆರಾತ್‌ನ ವಾಯುವ್ಯದಲ್ಲಿರುವ 40 ಕಿಲೋಮೀಟರ್ ದೂರದಲ್ಲಿದೆ ಎಂದು ವಿಶ್ವಸಂಸ್ಥೆಯ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಅಮೆರಿಕ ಭೂಗರ್ಭ ಶಾಸ್ತ್ರ ಇಲಾಖೆಯ ಪ್ರಕಾರ ಅಫ್ಘಾನಿಸ್ತಾನದಲ್ಲಿ ಐದು ಬಾರಿ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 6.3, 5.9 ಮತ್ತು 5.5 ತೀವ್ರತೆಯಲ್ಲಿ ಭೂಮಿ ಕಂಪಿಸಿದೆ ಎಂದು ತಿಳಿಸಿದೆ.

ದೇಶದ ವಿಪತ್ತು ಪ್ರಾಧಿಕಾರದ ವಕ್ತಾರ ಮೊಹಮ್ಮದ್ ಅಬ್ದುಲ್ಲಾ ಜಾನ್, ಹೆರಾತ್ ಪ್ರಾಂತ್ಯದ ಝೆಂಡಾ ಜಾನ್ ಜಿಲ್ಲೆಯ ನಾಲ್ಕು ಗ್ರಾಮಗಳು ಭೂಕಂಪಕ್ಕೆ ತುತ್ತಾಗಿವೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಇಸ್ರೇಲ್ – ಹಮಾಸ್ ಯುದ್ಧ| 500ಕ್ಕೂ ಹೆಚ್ಚು ಸಾವು; ನಗರ ತೊರೆಯುತ್ತಿರುವ ಸ್ಥಳೀಯರು

ವಿಶ್ವಸಂಸ್ಥೆಯ ಮಾಹಿತಿ ಪ್ರಕಾರ, ಅಫ್ಘಾನಿಸ್ತಾನ ಭೂಕಂಪನದಲ್ಲಿ 465 ಮನೆಗಳು ನಾಶವಾಗಿದ್ದು ಕುಸಿದಿರುವ ಹಲವಾರು ಕಟ್ಟಡಗಳಲ್ಲಿ ಹಲವು ಮಂದಿ ಸಿಲುಕಿಕೊಂಡಿದ್ದಾರೆ. ಕಟ್ಟಡಗಳಲ್ಲಿ ಸಿಲುಕಿಕೊಂಡಿರುವ ಜನರನ್ನು ರಕ್ಷಿಸಲು ಸ್ಥಳೀಯ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಆಸ್ಪತ್ರೆಗಳಿಗೆ ಗಾಯಾಳುಗಳನ್ನು ಸ್ಥಳಾಂತರಿಸಲು ಝೆಂಡಾ ಜಾನ್‌ ಪ್ರದೇಶಕ್ಕೆ 12 ಆಂಬ್ಯುಲೆನ್ಸ್ ಕಾರುಗಳನ್ನು ಕಳುಹಿಸಲಾಗಿದೆ ಎಂದು  ವಿಶ್ವ ಆರೋಗ್ಯ ಸಂಸ್ಥೆಯ ಅಫ್ಘಾನಿಸ್ತಾನ ವಿಭಾಗ ಹೇಳಿದೆ.

“ಭೂಕಂಪದಿಂದ ಸಾವುನೋವುಗಳು ವರದಿಯಾಗುತ್ತಲೇ ಇರುವುದರಿಂದ, ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಮತ್ತು ಹೆಚ್ಚುವರಿ ಅಗತ್ಯಗಳನ್ನು ನಿರ್ಣಯಿಸಲು ತಂಡಗಳು ಆಸ್ಪತ್ರೆಗಳಲ್ಲಿ ಬೀಡುಬಿಟ್ಟಿವೆ” ಎಂದು ವಿಶ್ವಸಂಸ್ಥೆಯ ಏಜನ್ಸಿ ಟ್ವಿಟರ್‌ನಲ್ಲಿ ತಿಳಿಸಿದೆ.

ಅಫ್ಘಾನಿಸ್ತಾನದಲ್ಲಿ ಮಾನವೀಯ ವ್ಯವಹಾರಗಳ ಸಮನ್ವಯಕ್ಕಾಗಿ ವಿಶ್ವಸಂಸ್ಥೆಯ ಕಚೇರಿ ಪ್ರಕಾರ, 2 ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, 5 ಸಾವಿರಕ್ಕೂ ಹೆಚ್ಚು ಜನರಿಗೆ ಭೂಕಂಪನದಿಂದ ತೊಂದರೆಯಾಗಿದೆ ಎಂದು ಅಂದಾಜಿಸಲಾಗಿದೆ.

ಮಹಲ್ ವಡಾಕಾವು ಹೆಚ್ಚು ಹಾನಿಗೊಳಗಾದ ಗ್ರಾಮವೆಂದು ತಿಳಿಯಲಾಗಿದೆ. ಹೆಚ್ಚುವರಿಯಾಗಿ, ಅಂದಾಜು 300 ಕುಟುಂಬಗಳನ್ನು ಹೆರಾತ್ ನಗರಕ್ಕೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಶ್ವಸಂಸ್ಥೆಯಲ್ಲಿ ನೆತನ್ಯಾಹು ಭಾಷಣಕ್ಕೆ ಜಾಗತಿಕ ಬಹಿಷ್ಕಾರ: ಖುರ್ಚಿಗೆ ಅಂಟಿಕೊಂಡ ಭಾರತದ ಧೋರಣೆಗೆ ಖಂಡನೆ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (UNGA) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾಷಣ...

CNN, MS NOW, Politicoಗೆ ಶ್ವೇತಭವನ ಪ್ರವೇಶ ನಿರ್ಬಂಧ; ಟ್ರಂಪ್ ಆದೇಶಕ್ಕೆ ಫೆಡರಲ್ ಕೋರ್ಟ್ ತಡೆ

CNN, MS NOW ಮತ್ತು Politico ಸುದ್ದಿ‌ ಸಂಸ್ಥೆಗಳ ಪತ್ರಕರ್ತರಿಗೆ ಶ್ವೇತಭವನ...

ಸೂಚನೆಯಿಲ್ಲದೆ ಆಸ್ಟ್ರೇಲಿಯಾದ ಸರ್ಕಾರಿ ವೆಬ್‌ಸೈಟ್ ಹ್ಯಾಕ್ ಮಾಡಿದ ‘OpenAI’

ಆಸ್ಟ್ರೇಲಿಯಾದ ಸರ್ಕಾರಿ ಆರೋಗ್ಯ ಇಲಾಖೆಯ ವೆಬ್‌ಸೈಟ್‌ ಒಂದನ್ನು ಕೃತಕ ಬುದ್ಧಿಮತ್ತೆ (AI)...

10 ಸಾವಿರ ಸಂಸ್ಥೆಗಳ ಇ-ಮೇಲ್ ಹ್ಯಾಕ್: ಸೈಬರ್ ವಂಚಕರ ‘ಎಐ ಚಾಟ್‌ಬಾಟ್’ ಸ್ಥಗಿತಗೊಳಿಸಿದ ಮೈಕ್ರೋಸಾಫ್ಟ್

ವಿಶ್ವಾದ್ಯಂತ 10,000ಕ್ಕೂ ಹೆಚ್ಚು ಸಂಸ್ಥೆಗಳಿಗೆ ಸೇರಿದ 12,000ಕ್ಕೂ ಅಧಿಕ ಇ-ಮೇಲ್ ಖಾತೆಗಳನ್ನು...