ಅಫ್ಘಾನಿಸ್ತಾನ | ಪ್ರಬಲ ಭೂಕಂಪ, 800ಕ್ಕೂ ಹೆಚ್ಚು ಜನರ ಸಾವು, 2500ಕ್ಕೂ ಹೆಚ್ಚು ಜನರಿಗೆ ಗಾಯ

Date:

Advertisements

ಸೋಮವಾರ ಬೆಳಗಿನ ಜಾವ ಪೂರ್ವ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 800ಕ್ಕೂ ಜನರು ಸಾವನ್ನಪ್ಪಿದ್ದಾರೆ. ಮತ್ತು 2500 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.

ಭಾನುವಾರ ರಾತ್ರಿ ಸ್ಥಳೀಯ ಸಮಯ ರಾತ್ರಿ 11.47 ಕ್ಕೆ ಪೂರ್ವ ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ಹೆಚ್ಚಿನ ಸಾವುನೋವುಗಳು ಕುನಾರ್ ಪ್ರಾಂತ್ಯದಿಂದಲೇ ಬಂದಿವೆ.

ನೆರೆಯ ನಂಗಾಹರ್ ಪ್ರಾಂತ್ಯದ ಜಲಾಲಾಬಾದ್ ನಗರದ ಸಮೀಪವಿರುವ ಕುನಾರ್‌ನ ಹಲವಾರು ಪಟ್ಟಣಗಳಲ್ಲಿ ಈ ಭೂಕಂಪವು ಅಪ್ಪಳಿಸಿದೆ. ಕಾಬೂಲ್‌ನಿಂದ ನೆರೆಯ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ವರೆಗೆ ಕಟ್ಟಡಗಳು ನಡುಗಿದ ವರದಿಯಾಗಿದೆ.

ಭೂಕಂಪದಿಂದಾಗಿ ಮನೆಯ ಛಾವಣಿ ಕುಸಿದು ಜನ ಸಾವನ್ನಪ್ಪಿದ್ದಾರೆ ಎಂದು ಪ್ರಾಂತೀಯ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಾಥಮಿಕ ಅಂದಾಜಿನ ಪ್ರಕಾರ ಹಲವಾರು ಮಕ್ಕಳು ಗಾಯಗೊಂಡಿದ್ದಾರೆ. ಪೂರ್ವ ಅಫ್ಘಾನಿಸ್ತಾನದಾದ್ಯಂತ ಕೆಲವು ಸೆಕೆಂಡುಗಳ ಕಾಲ ಕಟ್ಟಡಗಳು ಕಂಪಿಸಿದವು, ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಸುಮಾರು 370 ಕಿ.ಮೀ ದೂರದಲ್ಲಿ ಕಂಪನದ ಅನುಭವವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಮಾಹಿತಿ ಪ್ರಕಾರ, ಭೂಕಂಪ 00:47:41 ISTಕ್ಕೆ ಸಂಭವಿಸಿದೆ. ಇದರ ಕೇಂದ್ರಬಿಂದುವು 34.50°N ಅಕ್ಷಾಂಶ ಮತ್ತು 70.81°E ರೇಖಾಂಶದಲ್ಲಿ, 160 ಕಿ.ಮೀ ಆಳದಲ್ಲಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ಹಂಚಿಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಝಾದ ನೆರವಿಗೆ ಹೊರಟಿದ್ದ ‘ಸುಮುದ್ ಫ್ಲೋಟಿಲ್ಲಾ’ಗೆ ಇಸ್ರೇಲ್ ತಡೆ; ಹಲವು ಹೋರಾಟಗಾರರ ಬಂಧನ

ಕಳೆದ ಮೂರು ವರ್ಷಗಳಿಂದ ಇಸ್ರೇಲ್‌ನ ಕ್ರೌರ್ಯಕ್ಕೆ ತುತ್ತಾಗಿರುವ ಗಾಝಾಗೆ ಮಾನವೀಯ ನೆರವು...

ಗಾಂಧೀಜಿ, ಶಾಸ್ತ್ರಿಯವರ ತ್ಯಾಗ, ಬಲಿದಾನ ಎಂದಿಗೂ ಆದರ್ಶಪ್ರಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಅಕ್ಟೋಬರ್ 2ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಅವರ ನೇತೃತ್ವದಲ್ಲಿ ನಡೆದ...

ಬಜೆಟ್‌ ಇಲ್ಲದೆ ಅಮೆರಿಕ ಅತಂತ್ರ; ಸರ್ಕಾರಿ ಚಟುವಟಿಕೆಗಳು ‘ಶಟ್‌ಡೌನ್‌’

ಟ್ರಂಪ್ ಸರ್ಕಾರ ಮಂಡಿಸಿದ ತಾತ್ಕಾಲಿಕ ಬಜೆಟ್‌ಗೆ ಅಮೆರಿಕ ಸೆನೆಟ್‌ನಲ್ಲಿ ಅನುಮೋದನೆ ದೊರೆತಿಲ್ಲ....

5 ಹುಲಿ, 20 ನವಿಲು, 19 ಕೋತಿಗಳ ಸಾವು ವನ್ಯಜೀವಿ ಸಂರಕ್ಷಣೆಯ ಜವಾಬ್ದಾರಿ ಹೆಚ್ಚಿಸಿದೆ: ಈಶ್ವರ ಖಂಡ್ರೆ

ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿ, ಮಧುಗಿರಿಯ ಮಿಡಿಗೇಶಿಯಲ್ಲಿ 20 ನವಿಲು,...

Download Eedina App Android / iOS

X