ಇರಾನ್ ಮೇಲೆ ಇಸ್ರೇಲ್-ಅಮೆರಿಕ ದಾಳಿ: 28 ​​ವಿಮಾನಗಳ ಹಾರಾಟ ರದ್ದುಗೊಳಿಸಿದ ಏರ್‌ ಇಂಡಿಯಾ

Date:

ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ದಾಳಿ ನಡೆಸುತ್ತಿದ್ದು, ಈ ಬೆಳವಣಿಗೆ ನಡುವೆ ಯುರೋಪ್, ಅಮೆರಿಕ, ಕೆನಡಾಕ್ಕೆ ಹಾರಲಿದ್ದ 28 ವಿಮಾನಗಳನ್ನು ಏರ್ ಇಂಡಿಯಾ ರದ್ದುಗೊಳಿಸಿದೆ.

- Advertisement -

ಹಲವು ವಾಯುಮಾರ್ಗ ಮುಚ್ಚಲಾಗಿದೆ. ವಿಮಾನಯಾನ ಸಂಸ್ಥೆಗಳು ಪರ್ಯಾಯ ಮಾರ್ಗಗಳನ್ನು ಕಂಡುಹಿಡಿಯುವುದು ಕಷ್ಟಕರ. ಮಧ್ಯಪ್ರಾಚ್ಯದಲ್ಲಿನ ಪರಿಸ್ಥಿತಿ ಬದಲಾಗುತ್ತಿರುವುದರಿಂದ ಮಾರ್ಚ್‌ 1ರಂದು ವಿಮಾನಗಳನ್ನು ರದ್ದುಗೊಳಿಸಲಾಗುತ್ತಿದೆ ಎಂದು ಏರ್‌ ಇಂಡಿಯಾ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಇಸ್ರೇಲ್-ಅಮೆರಿಕ ದಾಳಿ: ಇರಾನ್ ಪರಮೋಚ್ಛ ನಾಯಕ ಖಮೇನಿ ಹತ್ಯೆ

“ಮಧ್ಯಪ್ರಾಚ್ಯದಲ್ಲಿನ ಪರಿಸ್ಥಿತಿ ಬದಲಾಗುತ್ತಿರವ ಕಾರಣ ನಮ್ಮ ಅತಿಥಿಗಳು ಮತ್ತು ಸಿಬ್ಬಂದಿಯ ಸುರಕ್ಷತೆಯ ಹಿತದೃಷ್ಟಿಯಿಂದ, ಮಾರ್ಚ್ 1ರಂದು ನಿಗದಿಯಾಗಿದ್ದ ಈ ಕೆಳಗಿನ ವಿಮಾನಗಳನ್ನು ಏರ್ ಇಂಡಿಯಾ ರದ್ದುಗೊಳಿಸಿದೆ” ಎಂದು ಏರ್‌ಲೈನ್ ಎಕ್ಸ್‌ ಪೋಸ್ಟ್‌ನಲ್ಲಿ ಮಾಹಿತಿ ನೀಡಿದೆ.

ವಿಮಾನಯಾನ ಸಂಸ್ಥೆಯು ದೆಹಲಿ ಮತ್ತು ಮುಂಬೈನಿಂದ ಲಂಡನ್ ಹೀಥ್ರೂಗೆ, ಅಮೃತಸರದಿಂದ ಲಂಡನ್ ಗ್ಯಾಟ್ವಿಕ್‌ಗೆ ಮತ್ತು ದೆಹಲಿ, ಮುಂಬೈನಿಂದ ನ್ಯೂಯಾರ್ಕ್‌ಗೆ ವಿಮಾನಗಳನ್ನು ರದ್ದುಗೊಳಿಸಿದೆ. ಮುಂಬೈ-ನ್ಯೂವಾರ್ಕ್, ದೆಹಲಿ-ಚಿಕಾಗೋ, ದೆಹಲಿ-ಟೊರೊಂಟೊ, ದೆಹಲಿ-ಫ್ರಾಂಕ್‌ಫರ್ಟ್, ಮುಂಬೈ-ಫ್ರಾಂಕ್‌ಫರ್ಟ್ ಮತ್ತು ದೆಹಲಿ-ಪ್ಯಾರಿಸ್ ಸೇವೆಗಳನ್ನು ರದ್ದುಗೊಳಿಸಲಾಗಿದೆ. ಈ ಸ್ಥಳಗಳಿಂದ ಭಾರತಕ್ಕೆ ಬರುವ ವಿಮಾನಗಳನ್ನೂ ರದ್ದುಗೊಳಿಸಲಾಗಿದೆ.

ಫೆಬ್ರವರಿ 28ರಂದು ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ಬೃಹತ್ ಸೇನಾ ದಾಳಿ ನಡೆಸಿವೆ. ಈ ಕಾರ್ಯಾಚರಣೆಗೆ ಅಮೆರಿಕ ‘ಆಪರೇಷನ್ ಎಪಿಕ್ ಫ್ಯೂರಿ’ ಮತ್ತು ಇಸ್ರೇಲ್ ‘ರೋರಿಂಗ್ ಲಯನ್’ ಎಂದು ಹೆಸರಿಟ್ಟಿವೆ. ಈ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತರಾಗಿದ್ದಾರೆ. ಜತೆಗೆ ಅವರ ಕುಟುಂಬಸ್ಥರು ಮೃತಪಟ್ಟಿದ್ದಾರೆ ಎಂದು ಇರಾನ್ ಸರ್ಕಾರಿ ಮಾಧ್ಯಮಗಳು ಖಚಿತಪಡಿಸಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಎಂಆರ್‌ಎಲ್ ಲಂಚ ಪ್ರಕರಣ: ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್‌ಗೆ ಇ.ಡಿ ಸಮನ್ಸ್

ಬಹುಚರ್ಚಿತ ಕೊಚ್ಚಿನ್ ಮಿನರಲ್ಸ್ ಅಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್‌ಎಲ್) ಅಕ್ರಮ ಹಣ...

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...