ಅಮೆರಿಕ: ಡೆಂಟನ್‌ನಲ್ಲಿ ಭಾರತೀಯ ವಿದ್ಯಾರ್ಥಿಯ ಗುಂಡಿಕ್ಕಿ ಹತ್ಯೆ

Date:

ಅಮೆರಿಕದ ಟೆಕ್ಸಾಸ್‌ನ ಡಲ್ಲಾಸ್‌ನ ಡೆಂಟನ್‌ನಲ್ಲಿ ಭಾರತೀಯ ವಿದ್ಯಾರ್ಥಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಪೆಟ್ರೋಲ್ ಬಂಕ್‌ನಲ್ಲಿ ಅರೆಕಾಲಿಕ ಕೆಲಸ ಮಾಡುತ್ತಿದ್ದ ಹೈದರಾಬಾದ್ ಮೂಲದ 27 ವರ್ಷದ ವಿದ್ಯಾರ್ಥಿ ಚಂದ್ರಶೇಖರ್ ಪೋಲ್  ಎಂಬುವವರನ್ನು ರಾತ್ರಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಮಾಹಿತಿ ತಿಳಿಯಲಾಗಿದೆ.

- Advertisement -

ಈ ದುರಂತ ಘಟನೆಯಿಂದ ಚಂದ್ರಶೇಖರ್ ಅವರ ಕುಟುಂಬ ಆಘಾತಕ್ಕೊಳಗಾಗಿದ್ದು, ಚಂದ್ರಶೇಖರ್ ಮೃತದೇಹವನ್ನು ಭಾರತಕ್ಕೆ ತರಲು ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಾಯಕ್ಕಾಗಿ ಮನವಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಗ್ಯಾರಂಟಿ ವಿಚಾರದಲ್ಲಿ ಕರ್ನಾಟಕದಿಂದ ಬಿಹಾರಕ್ಕೆ ಬಿಜೆಪಿಯ ಬದಲಾದ ನಿಲುವು

ಚಂದ್ರಶೇಖರ್ ಮೇಲಿನ ಗುಂಡಿನ ದಾಳಿ ಘಟನೆಯು ಅಮೆರಿಕದಲ್ಲಿ ಅರೆಕಾಲಿಕ ಕೆಲಸ ಮಾಡುವ ಭಾರತೀಯ ವಿದ್ಯಾರ್ಥಿಗಳ ಸುರಕ್ಷತೆಯ ಕುರಿತು ಗಂಭೀರ ಚರ್ಚೆಯನ್ನು ಮತ್ತೆ ಹುಟ್ಟುಹಾಕಿದೆ. ಜೊತೆಗೆ ಅಮೆರಿಕದಲ್ಲಿ ಈ ರೀತಿ ಹತ್ಯೆಗಳು ಹೆಚ್ಚಾಗುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ.

ಚಂದ್ರಶೇಖರ್ ಪೋಲ್, ಹೈದರಾಬಾದ್‌ನ ಎಲ್.ಬಿ. ನಗರದ ನಿವಾಸಿಯಾಗಿದ್ದರು. ಅವರು ದಂತ ಶಸ್ತ್ರಚಿಕಿತ್ಸೆಯಲ್ಲಿ ಪದವಿ (ಬಿಡಿಎಸ್) ಪೂರ್ಣಗೊಳಿಸಿ, 2023ರಲ್ಲಿ ಉನ್ನತ ಶಿಕ್ಷಣಕ್ಕಾಗಿ ಉತ್ತರ ಟೆಕ್ಸಾಸ್ ವಿಶ್ವವಿದ್ಯಾಲಯಕ್ಕೆ ತೆರಳಿದ್ದರು. ಆರು ತಿಂಗಳ ಹಿಂದೆ ಡೇಟಾ ಅನಲಿಟಿಕ್ಸ್‌ನಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದ ಅವರು, ಪೂರ್ಣ ಸಮಯದ ಉದ್ಯೋಗ ಹುಡುಕುತ್ತಿರುವಾಗ ಡೆಂಟನ್‌ನ ಗ್ಯಾಸ್ ಫಿಲ್ಲಿಂಗ್ ಸ್ಟೇಷನ್‌ನಲ್ಲಿ ಅರೆಕಾಲಿಕವಾಗಿ ಕೆಲಸ ಮಾಡುತ್ತಿದ್ದರು ಎಂದು ಮಾಹಿತಿ ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ...

ಸಮಯೋಚಿತ ಕ್ರಮದಿಂದ ದೊಡ್ಡ ಮಟ್ಟದ ಅಶಾಂತಿ ತಪ್ಪಿತು: ಸುಪ್ರೀಂಗೆ ದೆಹಲಿ ಪೊಲೀಸ್ ಆಯುಕ್ತರ ಹೇಳಿಕೆ

ರಾಷ್ಟ್ರ ರಾಜಧಾನಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ಕೈಗೊಂಡ ಸಮಯೋಚಿತ,...

2018ರ ಪ್ರಕರಣ: ಸಿಜೆಪಿ ಪ್ರತಿಭಟನೆ ಹೊತ್ತಿನಲೇ ಧೃವ್ ರಾಠಿಗೆ ಹೊಸ ಸಮನ್ಸ್ ಜಾರಿ ಮಾಡಿದ ದೆಹಲಿ ಕೋರ್ಟ್

ಡಿಜಿಟಲ್ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ 2018ರ...