ಭಾರತದ ಮೇಲೆ ಅಮೆರಿಕ ದ್ವೇಷ: ಟ್ರಂಪ್‌ಗೆ ನೊಬೆಲ್ ನೀಡುವಂತೆ ಮೋದಿ ಶಿಫಾರಸು ಮಾಡಿದ್ರೆ ಎಲ್ಲವೂ ಸರಿಹೋಗತ್ತ?

Date:

Advertisements
ಪಾಕಿಸ್ತಾನವು 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಅವರನ್ನು ಶಿಫಾರಸು ಮಾಡುವುದಾಗಿ ಘೋಷಿಸಿದೆ. ಅಂತೆಯೇ, ಟ್ರಂಪ್‌ಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡುವಂತೆ ಮೋದಿ ಅವರು ಶಿಫಾರಸು ಮಾಡಿದರೆ, ಟ್ರಂಪ್ ತೃಪ್ತರಾಗಬಹುದೇ?

ಭಾರತದ ಮೇಲೆ ಟ್ರಂಪ್ ಕೋಪಗೊಂಡಿದ್ದಾರೆ. ಅನಗತ್ಯ ದ್ವೇಷ ಸಾಧಿಸುತ್ತಿದ್ದಾರೆ. ಅಮೆರಿಕದ ನಿಲುವು ಮತ್ತು ಟ್ರಂಪ್ ಸುಂಕ ಹೇರಿಕೆ ಕಂಡ ಅಮೆರಿಕದ ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್ ಬೋಲ್ಟನ್, ‘ಭಾರತದ ಪ್ರಧಾನಿ ಮೋದಿ ಅವರು ಟ್ರಂಪ್‌ಗೆ ನೊಬೆಲ್ ಪ್ರಶಸ್ತಿ ನೀಡುವಂತೆ ಶಿಫಾರಸು ಮಾಡಿದರೆ ಎಲ್ಲವೂ ಸರಿಹೋಗುತ್ತದೆ. ಸುಂಕದ ಹೊರೆಯೂ ಇಳಿಯುತ್ತದೆ’ ಎಂದಿರುವುದು ವ್ಯಂಗ್ಯವಾದರೂ, ಕುತೂಹಲ ಕೆರಳಿಸಿದೆ.

”ಭಾರತದ ಮೇಲೆ ಹೇರಲಾಗಿರುವ ಭಾರೀ ಪ್ರಮಾಣದ (50%) ಸುಂಕವು ‘ದ್ವಿಪಕ್ಷೀಯ ಸಂಬಂಧ’ದಲ್ಲಿ ತಪ್ಪು ನಿರ್ಧಾರ. ರಷ್ಯಾದಿಂದ ತೈಲ ಖರೀದಿ ಮಾಡುವ ಕಾರಣಕ್ಕಾಗಿ ಭಾರತಕ್ಕೆ 25% ದಂಡ ವಿಧಿಸಲಾಗಿದೆ. ಇದು ಉಭಯ ರಾಷ್ಟ್ರಗಳ ನಡುವಿನ ಸಂಬಂಧಗಳಿಗೆ ಹಾನಿಕಾರಕ” ಎಂದಿದ್ದಾರೆ.

“ರಷ್ಯಾದಿಂದ ಚೀನಾ ಕೂಡ ತೈಲ ಖರೀದಿಸುತ್ತಿದೆ. ಆದರೆ, ಚೀನಾ ಮೇಲೆ ಯಾವುದೇ ಹೆಚ್ಚು ಸುಂಕ ಅಥವಾ ದಂಡವನ್ನು ವಿಧಿಸಲಾಗಿಲ್ಲ. ಉಕ್ರೇನ್‌ನಲ್ಲಿ ಕದನ ವಿರಾಮ ಜಾರಿಗೊಳಿಸಲು ಟ್ರಂಪ್ ಮಾಡುತ್ತಿರುವ ಪ್ರಯತ್ನದಿಂದ ಬಳಲುತ್ತಿರುವ ಏಕೈಕ ರಾಷ್ಟ್ರ ಭಾರತ” ಎಂದು ಬೋಲ್ಟನ್ ಹೇಳಿದ್ದಾರೆ.

Advertisements

“ಸುಂಕ ಹೇರಿಕೆಯಿಂದ ಉಂಟಾದ ಪರಿಣಾಮವನ್ನು ನಿಭಾಯಿಸಲು ಮತ್ತು ಸರಿಪಡಿಸಲು ಹೆಚ್ಚು ಸಮಯ ಬೇಕಾಗುತ್ತದೆ. ಕಳೆದ 30 ದಿನಗಳಲ್ಲಿ ಶ್ವೇತಭವನವು ಭಾರತವನ್ನು ನಡೆಸಿಕೊಂಡ ರೀತಿ ಸರಿಯಲ್ಲ” ಎಂದಿದ್ದಾರೆ.

ಈ ಲೇಖನ ಓದಿದ್ದೀರಾ?: ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

“ಪಾಕಿಸ್ತಾನವು 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಅವರನ್ನು ಶಿಫಾರಸು ಮಾಡುವುದಾಗಿ ಘೋಷಿಸಿದೆ. ಅಂತೆಯೇ, ಟ್ರಂಪ್‌ಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡುವಂತೆ ಮೋದಿ ಅವರು ಶಿಫಾರಸು ಮಾಡಿದರೆ, ಟ್ರಂಪ್ ತೃಪ್ತರಾಗುತ್ತಾರೆ. ಅವರ ದ್ವೇಷವು ಇಳಿಯುತ್ತದೆ. ಸುಂಕ ಹೇರಿಕೆಯೂ ತಗ್ಗುತ್ತದೆ” ಎಂದು ಬೋಲ್ಟನ್ ಹೇಳಿದ್ದಾರೆ.

ಭಾರತದ ಮೇಲೆ ಹೆಚ್ಚು ಸುಂಕ ವಿಧಿಸಿರುವ ತಮ್ಮ ಧೋರಣೆಯನ್ನು ಟ್ರಂಪ್ ಸಮರ್ಥಿಸಿಕೊಂಡಿದ್ದಾರೆ. “ಉಕ್ರೇನ್ ಮೇಲಿನ ಯುದ್ಧದಲ್ಲಿ ರಷ್ಯಾಗೆ ಭಾರತ ಸಹಾಯ ಮಾಡುತ್ತಿದೆ. ಭಾರತವು ರಷ್ಯಾದಿಂದ ಬೃಹತ್ ಪ್ರಮಾಣದಲ್ಲಿ ತೈಲವನ್ನು ಖರೀದಿಸುತ್ತಿದೆ ಮತ್ತು ಹೆಚ್ಚಿನ ಲಾಭಕ್ಕೆ ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದೆ” ಎಂದು ಟ್ರಂಪ್ ಆರೋಪಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

Download Eedina App Android / iOS

X