ರಷ್ಯಾದ ಮೇಲೆ ಉಕ್ರೇನ್ ಡ್ರೋನ್ ದಾಳಿ: 24 ಸಾವು, 50ಕ್ಕೂ ಹೆಚ್ಚು ಮಂದಿಗೆ ಗಾಯ

Date:

ರಷ್ಯಾ ಆಕ್ರಮಿತ ಖೆರ್ಸನ್ ಪ್ರಾಂತ್ಯದಲ್ಲಿ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಉಕ್ರೇನ್ ನಡೆಸಿದ ಡ್ರೋನ್‌ ದಾಳಿಗೆ ಕನಿಷ್ಠ 24 ಜನರು ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ರಷ್ಯಾ ಗುರುವಾರ ತಿಳಿಸಿದೆ.

- Advertisement -

ರಷ್ಯಾ ನಿಯಂತ್ರಣದಲ್ಲಿರುವ ಕ್ರೈಮಿಯಾ ಪರ್ಯಾಯ ದ್ವೀಪದ ಸಮೀಪವಿರುವ ಕರಾವಳಿ ಗ್ರಾಮವಾದ ‘ಖೋರ್ಲಿ’ಯಲ್ಲಿ ಈ ಘಟನೆ ನಡೆದಿದೆ. ಈ ಬಗ್ಗೆ ಮಾಹಿತಿ ನೀಡಿರುವ ರಷ್ಯಾ ನೇಮಿತ ಖೆರ್ಸೆನ್ ಪ್ರಾಂತ್ಯದ ಗವರ್ನರ್ ವ್ಲಾದಿಮಿರ್‌ ಸಾಲ್ಡೊ, ” ಜನರು ಹೊಸ ವರ್ಷವನ್ನು ಸಂಭ್ರಮಿಸುತ್ತಿದ್ದ ಹೋಟೆಲ್ ಮತ್ತು ಕೆಫೆಯೊಂದರ ಮೇಲೆ ಉಕ್ರೇನ್‌ನ ಡ್ರೋನ್‌ ಅಪ್ಪಳಿಸಿದೆ,” ಎಂದು ಟೆಲಿಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ದಾಳಿಯ ಬೆನ್ನಲ್ಲೇ ರಷ್ಯಾ ಮತ್ತೊಂದು ಗಂಭೀರ ಆರೋಪ ಮಾಡಿದ್ದು, ಉದ್ವಿಗ್ನತೆಯನ್ನು ಹೆಚ್ಚಿಸಿದೆ. ವಾಯುವ್ಯ ರಷ್ಯಾದಲ್ಲಿರುವ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ನಿವಾಸದ ಬಳಿ ಉಕ್ರೇನ್‌ ಡ್ರೋಣ್‌ ಒಂದನ್ನು ಹೊಡೆದುರುಳಿಸಿರುವುದಾಗಿ ರಷ್ಯಾ ರಕ್ಷಣಾ ಸಚಿವಾಲಯ ಹೇಳಿಕೊಂಡಿದೆ. ಇದಕ್ಕೆ ಪುರಾವೆಯಾಗಿ ರಾತ್ರಿ ವೇಳೆ ಸೆರೆಹಿಡಿದ ಡ್ರೋಣ್‌ ಅವಶೇಷಗಳ ವಿಡಿಯೋವನ್ನು ಅದು ಬಿಡುಗಡೆ ಮಾಡಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಜೈಲಿಗೆ ಹೋಗಿ ಬಂದವರಿಗೆ ಸಂಭ್ರಮದ ಸ್ವಾಗತ; ಕರ್ನಾಟಕ ಹೀಗೇಕಾಯಿತು?

ಡಿಸೆಂಬರ್ 28–29ರ ರಾತ್ರಿ ನವ್ಗೊರೊಡ್ ಪ್ರದೇಶದಲ್ಲಿರುವ ಪುಟಿನ್ ನಿವಾಸವನ್ನು ಗುರಿಯಾಗಿಸಿಕೊಂಡು ಉಕ್ರೇನ್ ಬರೋಬ್ಬರಿ 91 ಡ್ರೋನ್‌ಗಳನ್ನು ಉಡಾವಣೆ ಮಾಡಿತ್ತು. ನಮ್ಮ ವಾಯು ರಕ್ಷಣಾ ವ್ಯವಸ್ಥೆ ಇವೆಲ್ಲವನ್ನು ತಡೆದಿದೆ ಎಂದು ರಷ್ಯಾ ಅಧಿಕಾರಿಗಳು ಪ್ರತಿಪಾದಿಸಿದ್ದಾರೆ.

ಹಿಮದ ನಡುವೆ ಬಿದ್ದಿರುವ ಮಾನವರಹಿತ ವೈಮಾನಿಕ ವಾಹನದ ದೃಶ್ಯಾವಳಿಗಳನ್ನು ಬುಧವಾರ ಬಿಡುಗಡೆ ಮಾಡಲಾಗಿದ್ದು, “ವಶಪಡಿಸಿಕೊಳ್ಳಲಾದ ಡ್ರೋನ್‌ ಆರು ಕೆಜಿ ಸ್ಪೋಟಕವನ್ನು ಹೊಂದಿತ್ತು. ಆದರೆ ಅಧ್ಯಕ್ಷರ ನಿವಾಸಕ್ಕೆ ಯಾವುದೇ ಹಾನಿಯಾಗಿಲ್ಲ” ಎಂದು ಸಚಿವಾಲಯ ಸ್ಪಷ್ಟಪಡಿಸಿದೆ. ಈ ಘಟನೆಯನ್ನು “ಯೋಜಿತ ಭಯೋತ್ಪಾದಕ ಕೃತ್ಯ” ಮತ್ತು ಪುಟಿನ್‌ ಮೇಲಿನ ವೈಯಕ್ತಿಕ ದಾಳಿ” ಎಂದು ಮಾಸ್ಕೋ ತಿಳಿಸಿದೆ.

ರಷ್ಯಾದ ಈ ಆರೋಪಗಳನ್ನು ಕೀವ್ (ಉಕ್ರೇನ್ ರಾಜಧಾನಿ) ಮೂಲಗಳು ಕಟುವಾಗಿ ನಿರಾಕರಿಸಿವೆ. ಪುಟಿನ್ ನಿವಾಸದ ಮೇಲಿನ ದಾಳಿಯ ಕಥೆ “ಸಂಪೂರ್ಣ ಕಟ್ಟುಕತೆ ಎಂದು ಉಕ್ರೇನ್ ಹೇಳಿದೆ. ಆದರೆ ಪುಟಿನ್‌ ನಿವಾಸದ ಮೇಲಿನ ದಾಳಿಯ ವರದಿಗಳನ್ನು ಸ್ವತಂತ್ರವಾಗಿ ಪರಿಶೀಲಿಸಲು ಸಾಧ್ಯವಾಗಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...