ಅಮೆರಿಕಾರದ ಓಹಿಯೋ ರಾಜ್ಯದಲ್ಲಿ ಭಾರತೀಯ ವಿದ್ಯಾರ್ಥಿ ಮೃತರಾಗಿದ್ದು, ಸಾವಿನ ಕಾರಣವನ್ನು ಪತ್ತೆಹಚ್ಚಲು ತನಿಖೆ ನಡೆಯುತ್ತಿದೆ ಎಂದು ನ್ಯೂಯಾರ್ಕ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಶುಕ್ರವಾರ ತಿಳಿಸಿದೆ.
ಉಮಾ ಸತ್ಯ ಸಾಯಿ ಗದ್ದೆ ಎಂಬ ವಿದ್ಯಾರ್ಥಿ ಮೃತರಾಗಿದ್ದು, ಅವರು ಕ್ಲೀವ್‌ಲ್ಯಾಂಡ್‌ನಲ್ಲಿ ತನ್ನ ಶಿಕ್ಷಣವನ್ನು ಪಡೆಯುತ್ತಿದ್ದರು. ಭಾರತೀಯ ವಿದ್ಯಾರ್ಥಿ ಸಾವಿಗೆ ಭಾರತೀಯ ರಾಯಭಾರಿ ಕಚೇರಿ ತೀವ್ರ ದುಃಖವನ್ನು ವ್ಯಕ್ತಪಡಿಸಿದ್ದು ಕುಟುಂಬಕ್ಕೆ ಸಂತಾಪವನ್ನು ವ್ಯಕ್ತಪಡಿಸಿದೆ.
ಇದನ್ನು ಓದಿದ್ದೀರಾ? ತೈವಾನ್ | ಭೂಕಂಪಕ್ಕೆ 9 ಬಲಿ, ಇಬ್ಬರು ಭಾರತೀಯರು ನಾಪತ್ತೆ
ಉಮಾ ಸತ್ಯರ ಪಾರ್ಥಿವ ಶರೀರವನ್ನು ಭಾರತಕ್ಕೆ ಸಾಗಿಸಲು ಅನುಕೂಲವಾಗುವಂತೆ ಸಾಧ್ಯವಿರುವ ಎಲ್ಲ ಸಹಾಯವನ್ನು ಕುಟುಂಬಕ್ಕೆ ಒದಗಿಸಲಾಗುತ್ತಿದೆ ಎಂದು ಭಾರತೀಯ ರಾಯಭಾರಿ ಕಚೇರಿ ಭರವಸೆ ನೀಡಿದೆ.
Deeply saddened by the unfortunate demise of Mr. Uma Satya Sai Gadde, an Indian student in Cleveland, Ohio.
Police investigation is underway. @IndiainNewYork continues to remain in touch with the family in India.
All possible assistance is being extended including to transport…
— India in New York (@IndiainNewYork) April 5, 2024
ಈ ಬಗ್ಗೆ ನ್ಯೂಯಾರ್ಕ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಎಕ್ಸ್ ಪೋಸ್ಟ್ ಮಾಡಿದ್ದು, “ಓಹಿಯೋದ ಕ್ಲೀವ್‌ಲ್ಯಾಂಡ್‌ನಲ್ಲಿರುವ ಭಾರತೀಯ ವಿದ್ಯಾರ್ಥಿ ಉಮಾ ಸತ್ಯ ಸಾಯಿ ಗದ್ದೆ ಅವರ ದುರದೃಷ್ಟಕರ ನಿಧನದಿಂದ ತೀವ್ರ ದುಃಖವಾಗಿದೆ. ಪಪಲೀಸ್ ತನಿಖೆ ನಡೆಯುತ್ತಿದೆ. ಅವರ ಪಾರ್ಥೀವ ಶರೀರವನ್ನು ಆದಷ್ಟು ಬೇಗ ಭಾರತಕ್ಕೆ ತಲುಪಿಸಲಾಗುವುದು” ಎಂದು ಹೇಳಿದೆ.
ಯುನೈಟೆಡ್ ಸ್ಟೇಟ್ಸ್‌ನಲ್ಲಿ ಈ ವರ್ಷ ಹತ್ತನೇ ಘಟನೆ
ಯುನೈಟೆಡ್ ಸ್ಟೇಟ್ಸ್‌ನಲ್ಲಿ ಭಾರತೀಯ ವಿದ್ಯಾರ್ಥಿ ಸಾವನ್ನಪ್ಪಿದ ಹತ್ತನೇ ಘಟನೆ ಇದಾಗಿದೆ ಎಂದು ವರದಿಯಾಗಿದೆ. ಮಾರ್ಚ್‌ನಲ್ಲಿ, ಮತ್ತೊಬ್ಬ ಭಾರತೀಯ ವಿದ್ಯಾರ್ಥಿ, ಮೊಹಮ್ಮದ್ ಅಬ್ದುಲ್ ಅರಾಫತ್ ನಿಗೂಢವಾಗಿ ಕ್ಲೀವ್‌ಲ್ಯಾಂಡ್ ಪ್ರದೇಶದಿಂದ ನಾಪತ್ತೆಯಾಗಿದ್ದರು. ಅದಾದ ಬಳಿಕ ವಿದ್ಯಾರ್ಥಿಯನ್ನು ಅಪಹರಿಸಿದವರು ಕುಟುಂಬದ ಮುಂದೆ ಹಣದ ಬೇಡಿಕೆ ಇಟ್ಟಿದ್ದರು.
ಇದನ್ನು ಓದಿದ್ದೀರಾ? ಅಮೆರಿಕದಲ್ಲಿ ಮೂವರು ಭಾರತೀಯ ಸಂಜಾತ ವಿದ್ಯಾರ್ಥಿಗಳ ನಿಗೂಢ ಸಾವು
ಈ ವರ್ಷದ ಆರಂಭದಲ್ಲಿ, ಹೈದರಾಬಾದ್‌ನ ವಿದ್ಯಾರ್ಥಿ ಸೈಯದ್ ಮಜಾಹಿರ್ ಅಲಿ ಮೇಲೆ ಚಿಕಾಗೋದಲ್ಲಿ ಅಮಾನುಷವಾಗಿ ಹಲ್ಲೆ ನಡೆಸಲಾಗಿದ್ದು ವಿದ್ಯಾರ್ಥಿ ತೀವ್ರವಾಗಿ ಗಾಯಗೊಂಡಿದ್ದರು. ಚಿಕಾಗೋದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ತಕ್ಷಣವೇ ಮಧ್ಯಪ್ರವೇಶಿಸಿ ಅಲಿ ಮತ್ತು ಅವರ ಕುಟುಂಬಕ್ಕೆ ಬೆಂಬಲ ನೀಡಿದೆ.
ಇಂಡಿಯಾನಾದ ಪರ್ಡ್ಯೂ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ನೀಲ್ ಆಚಾರ್ಯ ಸಾವು ಮತ್ತು ಜಾರ್ಜಿಯಾದಲ್ಲಿ ವಿವೇಕ್ ಸೈನಿಯ ಕ್ರೂರ ಹತ್ಯೆಯು ಈ ವರ್ಷದಲ್ಲೇ ನಡೆದಿರುವ ಘಟನೆಗಳಾಗಿದೆ. 2024 ರ ಆರಂಭದಿಂದ ಈವರೆಗಿನ ಮೂರು ತಿಂಗಳ ಅವಧಿಯಲ್ಲಿ ಭಾರತೀಯ ಅಥವಾ ಭಾರತೀಯ ಮೂಲದ ವಿದ್ಯಾರ್ಥಿ ಸಾವನ್ನಪ್ಪಿದ ಹತ್ತನೇ ಘಟನೆ ಇದಾಗಿದೆ.