ಗಾಜಾ ಮೇಲೆ ಇಸ್ರೇಲ್ ದಾಳಿ: ಪತ್ರಕರ್ತ ಸೇರಿ 17 ಸಾವು

Date:

ಗಾಜಾ ಪಟ್ಟಿಯ ಎರಡು ಪ್ರಮುಖ ಆಸ್ಪತ್ರೆಗಳ ಹೊರಗಡೆಯಿದ್ದ ಟೆಂಟ್‍ಗಳ ಮೇಲೆ ಭಾನುವಾರ ತಡರಾತ್ರಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಸ್ಥಳೀಯ ವರದಿಗಾರನ ಸಹಿತ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು 6 ವರದಿಗಾರರ ಸಹಿತ 9 ಮಂದಿ ಗಾಯಗೊಂಡಿದ್ದಾರೆ.

- Advertisement -

ಗಾಜಾದಲ್ಲಿ ಪ್ರತ್ಯೇಕ ದಾಳಿಯಲ್ಲಿ 15 ಮಂದಿ ಮೃತಪಟ್ಟಿರುವುದಾಗಿ ವೈದ್ಯಕೀಯ ಮೂಲಗಳು ತಿಳಿಸಿವೆ.
ಖಾನ್ ಯೂನಿಸ್ ನಗರದ ನಾಸೆರ್ ಆಸ್ಪತ್ರೆಯ ಹೊರಗಿರುವ ಮಾಧ್ಯಮಗಳ ಶಿಬಿರದ ಮೇಲೆ ದಾಳಿ ನಡೆದ ಬಳಿಕ ಬೆಂಕಿ ಹತ್ತಿಕೊಂಡಿದ್ದು ಪ್ಯಾಲಿಸ್ಟೇನ್ ಟುಡೆ ಟಿವಿ ವಾಹಿನಿಯ ವರದಿಗಾರ ಯೂಸುಫ್ ಅಲ್-ಫಕಾವಿ ಹಾಗೂ ಮತ್ತೊಬ್ಬ ವ್ಯಕ್ತಿ ಮೃತಪಟ್ಟಿದ್ದು 6 ವರದಿಗಾರರು ಗಾಯಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಸುದ್ದಿ ಓದಿದ್ದೀರಾ? ಷೇರುಪೇಟೆಯಲ್ಲಿ ಟ್ರಂಪ್ ತಲ್ಲಣ: ಕುಸಿದ 3 ಸಾವಿರಕ್ಕೂ ಅಧಿಕ ಅಂಕ, ಹೂಡಿಕೆದಾರರಿಗೆ 19 ಲಕ್ಷ ಕೋಟಿ ನಷ್ಟ

ಮಧ್ಯ ಗಾಝಾದ ಡೀರ್ ಅಲ್-ಬಲಾಹ್ ನಗರದಲ್ಲಿ ಅಲ್-ಅಖ್ಸಾ ಆಸ್ಪತ್ರೆಯ ಹೊರಗಡೆಯಿದ್ದ ಟೆಂಟ್‍ನ ಮೇಲೆ ನಡೆದ ಮತ್ತೊಂದು ದಾಳಿಯಲ್ಲಿ ಮೂವರು ಗಾಯಗೊಂಡಿದ್ದಾರೆ. ಇದೇ ಪ್ರದೇಶದಲ್ಲಿ ಮನೆಯೊಂದರ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದು ಇತರ ಮೂವರು ಗಾಯಗೊಂಡಿದ್ದಾರೆ.

ಪ್ರತ್ಯೇಕ ದಾಳಿಯಲ್ಲಿ 6 ಮಹಿಳೆಯರು ಮತ್ತು ನಾಲ್ಕು ಮಕ್ಕಳ ಸಹಿತ 13 ಮಂದಿ ಮೃತಪಟ್ಟಿದ್ದಾರೆ ಎಂದು ವರದಿ ಹೇಳಿದೆ. ಗಾಜಾದಲ್ಲಿ 18 ತಿಂಗಳ ಯುದ್ಧದ ಸಂದರ್ಭ ಸಾವಿರಾರು ಮಂದಿ ಆಸ್ಪತ್ರೆಯ ಕಂಪೌಂಡ್‍ಗಳ ಹೊರಗೆ ಸ್ಥಾಪಿಸಿರುವ ಟೆಂಟ್‍ಗಳಲ್ಲಿ ಆಶ್ರಯ ಪಡೆದಿದ್ದು ಇಸ್ರೇಲ್ ಅವರನ್ನು ಗುರಿಯಾಗಿಸುವ ಸಾಧ್ಯತೆ ಕಡಿಮೆ ಎಂದು ಭಾವಿಸಿದ್ದರು.ಹಮಾಸ್ ಸಶಸ್ತ್ರ ಹೋರಾಟಗಾರರು ವಸತಿ ಪ್ರದೇಶಗಳಲ್ಲಿ ತಮ್ಮ ನೆಲೆಗಳನ್ನು ಸ್ಥಾಪಿಸಿಕೊಂಡಿರುವುದು ನಾಗರಿಕರ ಸಾವು-ನೋವಿಗೆ ಕಾರಣವಾಗಿದೆ’ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...