ಅಫ್ಘಾನಿಸ್ತಾನದಲ್ಲಿ ಮತ್ತೆ ಪ್ರಬಲ ಭೂಕಂಪ, ಸಾವಿನ ಸಂಖ್ಯೆ 2,205ಕ್ಕೆ ಏರಿಕೆ

Date:

ಸರಣಿ ಭೂಕಂಪಗಳಿಂದ ನಲುಗಿಹೋಗಿರುವ ಪೂರ್ವ ಅಫ್ಘಾನಿಸ್ತಾನದಲ್ಲಿ ಸಾವಿನ ಸಂಖ್ಯೆ 2,205ಕ್ಕೆ ಏರಿಕೆಯಾಗಿದೆ. ಕಳೆದ ನಾಲ್ಕು ದಿನಗಳಲ್ಲಿ ಸಂಭವಿಸಿದ ಪ್ರಬಲ ಭೂಕಂಪಗಳ ನಂತರ, ಶುಕ್ರವಾರ ಮತ್ತೆ ಎರಡು ಶಕ್ತಿಶಾಲಿ ಮರುಕಂಪನಗಳು ಸಂಭವಿಸಿದೆ.

- Advertisement -

ಈಗಾಗಲೇ ಸರ್ವಸ್ವವನ್ನೂ ಕಳೆದುಕೊಂಡಿರುವ ಜನರಲ್ಲಿ ಮತ್ತಷ್ಟು ಭೀತಿ ಸೃಷ್ಟಿಯಾಗಿದೆ. ರವಿವಾರದಿಂದ ಈ ಪ್ರಾಂತ್ಯದಲ್ಲಿ ಹಲವಾರು ಭೂಕಂಪ ನಂತರದ ಕಂಪನಗಳು ಸಂಭವಿಸಿದ್ದು, ಗುರುವಾರ ಮತ್ತು ಶುಕ್ರವಾರದ ನಡುವಿನ 12 ಗಂಟೆಗಳ ಅವಧಿಯಲ್ಲಿ ಎರಡು ಪ್ರಬಲ ಭೂಕಂಪ ನಂತರದ ಕಂಪನಗಳು ಸಂಭವಿಸಿವೆ ಎಂದು ಜರ್ಮನ್ ಭೌಗೋಳಿಕ ವಿಜ್ಞಾನ ಸಂಶೋಧನಾ ಕೇಂದ್ರ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಕಳೆದ 24 ಗಂಟೆಗಳ ಅವಧಿಯಲ್ಲಿ ಮೃತರ ಸಂಖ್ಯೆ 700ರಷ್ಟು ಹೆಚ್ಚಾಗಿದೆ. ರಕ್ಷಣಾ ತಂಡಗಳು ಅವಶೇಷಗಳಡಿ ಮೃತದೇಹಗಳಿಗಾಗಿನ ಶೋಧ ಮುಂದುವರಿಸಿರುವುದರಿಂದ, ಈ ಸಂಖ್ಯೆ ಮತ್ತಷ್ಟು ಅಧಿಕವಾಗುವ ಸಾಧ್ಯತೆ ಇದೆ.

ಆಗಸ್ಟ್ 31ರಂದು ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ಕುನಾರ್ ಮತ್ತು ನಂಗರ್‌ಹಾರ್ ಪ್ರಾಂತ್ಯಗಳಲ್ಲಿ 6.0 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿತ್ತು. ಇದು ಅಫ್ಘಾನಿಸ್ತಾನದ ಇತ್ತೀಚಿನ ಇತಿಹಾಸದಲ್ಲಿಯೇ ಅತ್ಯಂತ ವಿನಾಶಕಾರಿ ಭೂಕಂಪಗಳಲ್ಲಿ ಒಂದಾಗಿದೆ.

ಈಗಾಗಲೇ ತೀವ್ರ ಬರ, ಆರ್ಥಿಕ ದಿವಾಳಿತನ ಮತ್ತು ನಿರಾಶ್ರಿತರ ಸಮಸ್ಯೆಯಿಂದ ಬಳಲುತ್ತಿರುವ ಅಫ್ಘಾನಿಸ್ತಾನಕ್ಕೆ ಈ ಭೂಕಂಪವು ಗಾಯದ ಮೇಲೆ ಬರೆ ಎಳೆದಂತಾಗಿದೆ. ವಿಶ್ವಸಂಸ್ಥೆ ಸೇರಿದಂತೆ ಹಲವು ಅಂತಾರಾಷ್ಟ್ರೀಯ ಸಂಸ್ಥೆಗಳು ತುರ್ತು ಸಹಾಯಕ್ಕಾಗಿ ಮನವಿ ಮಾಡಿದ್ದು, ಸಂತ್ರಸ್ತರ ಬದುಕು ಅಕ್ಷರಶಃ “ಸಂಕಷ್ಟದೊಳಗಿನ ಸಂಕಷ್ಟ ಎಂಬಂತಾಗಿದೆ.

6,700ಕ್ಕೂ ಹೆಚ್ಚು ಮನೆಗಳು ಸಂಪೂರ್ಣವಾಗಿ ನಾಶವಾಗಿದ್ದು, ಸಾವಿರಾರು ಕುಟುಂಬಗಳು ಇದೀಗ ಸೂರಿಲ್ಲದೆ, ಆಹಾರ, ನೀರು ಮತ್ತು ವೈದ್ಯಕೀಯ ಸೌಲಭ್ಯಗಳಿಲ್ಲದೆ ಬೀದಿಗೆ ಬಿದ್ದಿವೆ. ರಕ್ಷಣಾ ತಂಡಗಳು ಅವಶೇಷಗಳಡಿ ಸಿಲುಕಿರುವವರಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದರೂ, ದುರ್ಗಮ ಪ್ರದೇಶಗಳು ಮತ್ತು ಭೂಕುಸಿತಗಳಿಂದಾಗಿ ಕಾರ್ಯಾಚರಣೆ ಕಷ್ಟಕರವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೂಚನೆಯಿಲ್ಲದೆ ಆಸ್ಟ್ರೇಲಿಯಾದ ಸರ್ಕಾರಿ ವೆಬ್‌ಸೈಟ್ ಹ್ಯಾಕ್ ಮಾಡಿದ ‘OpenAI’

ಆಸ್ಟ್ರೇಲಿಯಾದ ಸರ್ಕಾರಿ ಆರೋಗ್ಯ ಇಲಾಖೆಯ ವೆಬ್‌ಸೈಟ್‌ ಒಂದನ್ನು ಕೃತಕ ಬುದ್ಧಿಮತ್ತೆ (AI)...

10 ಸಾವಿರ ಸಂಸ್ಥೆಗಳ ಇ-ಮೇಲ್ ಹ್ಯಾಕ್: ಸೈಬರ್ ವಂಚಕರ ‘ಎಐ ಚಾಟ್‌ಬಾಟ್’ ಸ್ಥಗಿತಗೊಳಿಸಿದ ಮೈಕ್ರೋಸಾಫ್ಟ್

ವಿಶ್ವಾದ್ಯಂತ 10,000ಕ್ಕೂ ಹೆಚ್ಚು ಸಂಸ್ಥೆಗಳಿಗೆ ಸೇರಿದ 12,000ಕ್ಕೂ ಅಧಿಕ ಇ-ಮೇಲ್ ಖಾತೆಗಳನ್ನು...

11 ವರ್ಷಗಳ ಬಳಿಕ ಅಮೆರಿಕಕ್ಕೆ ಜಿನ್‌ಪಿಂಗ್; ಭೇಟಿಯ ನಿರೀಕ್ಷೆ ಏನು?

ಚೀನಾದ ಅಧ್ಯಕ್ಷ ಕ್ಷಿ ಜಿನ್‌ಪಿಂಗ್ 11 ವರ್ಷಗಳ ಬಳಿಕ ಅಮೆರಿಕಕ್ಕೆ ಅಧಿಕೃತ...