ಬಾಂಗ್ಲಾದಲ್ಲಿ ಭಾರತ ದ್ವೇಷ: ‘ಧರ್ಮ ನಿಂದನೆ’ ಆರೋಪದಲ್ಲಿ ಯುವಕನ ಹತ್ಯೆ

Date:

ಬಾಂಗ್ಲಾದೇಶದಲ್ಲಿ ಯುವ ನಾಯಕನೊಬ್ಬನ ಹತ್ಯೆಯಾದ ಬಳಿಕ ಹಿಂಸಾಚಾರ ಭುಗಿಲೆದ್ದಿದೆ. ಮಾತ್ರವಲ್ಲದೆ, ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ಆಶ್ರಯ ನೀಡಿರುವ ಭಾರತದ ವಿರೋಧಿ ದ್ವೇಷವೂ ಹೆಚ್ಚಾಗಿದೆ. ಹಿಂಸಾಚಾರ ನಡೆಯುತ್ತಿರುವ ನಡುವೆಯೇ, ಧರ್ಮನಿಂದನೆ ಮಾಡಿದ್ದಾರೆಂಬ ಆರೋಪದ ಮೇಲೆ ದೀಪು ಚಂದ್ರದಾಸ್ ಎಂಬ ಯುವಕನನ್ನು ಪ್ರತಿಭಟನಾಕಾರರು ಕ್ರೂರವಾಗಿ ಹತ್ಯೆಗೈದಿದ್ದಾರೆ.

- Advertisement -

ಬಾಂಗ್ಲಾದ ಮೈಮೆನ್ಸಿಂಗ್ ಜಿಲ್ಲೆಯ ಭಾಲುಕಾದಲ್ಲಿ ದೀಪು ಚಂದ್ರ ದಾಸ್ ಅವರನ್ನು ಹತ್ಯೆಗೈಯ್ಯಲಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ದೀಪು ಚಂದ್ರದಾಸ್ ಅವರು ಭಾಲುಕಾಪುರದ ಗಾರ್ಮೆಂಟ್‌ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಬಾಡಿಗೆ ಮನೆಯಲ್ಲಿ ವಾಸಿಸವಾಗಿದ್ದರು. ಅವರು ಪ್ರವಾದಿ ಮುಹಮ್ಮದ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ, ಕೊಲೆ ಮಾಡಲಾಗಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಸಹ ಕಾರ್ಮಿಕರು ದೀಪು ವಿರುದ್ಧ ನಿಂದನೆ ಆರೋಪ ಮಾಡಿದ್ದರು. ಈ ಆರೋಪಗಳಿವೆ ಯಾವುದೇ ಪುರಾವೆಗಳು ಇರಲಿಲ್ಲ. ಆರೋಪದ ಕುರಿತು ತನಿಖೆಯನ್ನೂ ನಡೆಸಲಾಗಿಲ್ಲ. ಆದರೆ, ಗುಂಪೊಂದು ಅವರನ್ನು ಸುತ್ತುವರೆದು ದೊಣ್ಣೆಗಳಿಂದ ಅಮಾನುಷವಾಗಿ ಥಳಿಸಿ ಕೊಂದಿದೆ. ಮಾತ್ರವಲ್ಲದೆ, ಅವರ ಮೃತದೇಹವನ್ನು ಮರಕ್ಕೆ ಕಟ್ಟಿ, ಬೆಂಕಿ ಹಚ್ಚಿದೆ ಎಂದು ಆರೋಪಿಸಲಾಗಿದೆ.

ಈ ಲೇಖನ ಓದಿದ್ದೀರಾ?: ಸಂಸತ್ತಿನಲ್ಲಿ ಸುಳ್ಳು ಹೇಳಿದ ಶಾ! ಸ್ಥಾನದ ಘನತೆ ಕಳೆದ ಗೃಹಸಚಿವ

ಘಟನೆಯನ್ನು ಪಶ್ಚಿಮ ಬಂಗಾಳದ ಬಿಜೆಪಿ ಖಂಡಿಸಿದೆ. “ಬಾಂಗ್ಲಾದೇಶದಲ್ಲಿ ಧರ್ಮನಿಂದೆಯ ಆರೋಪದ ಮೇಲೆ ಹಿಂದು ಯುವಕ ದೀಪು ಚಂದ್ರ ದಾಸ್‌ನನ್ನು ಇಸ್ಲಾಮಿಸ್ಟ್‌ಗಳು ಕ್ರೂರವಾಗಿ ಹೊಡೆದು ಕೊಂದಿದ್ದಾರೆ. ಇಸ್ಲಾಮಿಕ್ ಉಗ್ರವಾದವನ್ನು ನಿಯಂತ್ರಿಸಲಾಗದ ಪರಿಣಾಮ ಇಂತಹ ಭಯಾನಕ ಘಟನೆಗಳು ನಡೆಯುತ್ತಿವೆ” ಎಂದು ಹೇಳಿದ್ದಾರೆ.

2025ರ ಡಿಸೆಂಬರ್ 12ರಂದು ಬಾಂಗ್ಲಾದೇಶದ ಯುವ ನಾಯಕ ಮತ್ತು ‘ಇಂಕಿಲಾಬ್ ಮಂಚ’ ಸಂಘಟನೆಯ ಸಂಚಾಲಕರಾಗಿದ್ದ ಶರೀಫ್ ಓಸ್ಮಾನ್ ಹಾದಿ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಆರಂಭದಲ್ಲಿ ಢಾಕಾದಲ್ಲಿ ಚಿಕಿತ್ಸೆ ಪಡೆಯುತ್ತದ್ದ ಶರೀಫ್ ಆರೋಗ್ಯ ಸ್ಥಿತಿ ಹದಗೆಟ್ಟ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಸಿಂಗಾಪುರಕ್ಕೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಹಾದಿ ಗುರುವಾರ(ಡಿ.18) ಸಾವನ್ನಪ್ಪಿದ್ದಾರೆ. ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಬಾಂಗ್ಲಾದೇಶದಾದ್ಯಂತ ತೀವ್ರ ಹಿಂಸಾಚಾರ, ಪ್ರತಿಭಟನೆಗಳು ಭುಗಿಲೆದ್ದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಳುಗುತ್ತಿರುವ ಬ್ಯಾಂಕಾಕ್: 50 ಜಿಲ್ಲೆಗಳಲ್ಲಿ ‘ವಿಪತ್ತು’ ಘೋಷಣೆ, ಸ್ತಬ್ಧಗೊಂಡ ಜನಜೀವನ

ಸತತ ಮಳೆಯಿಂದಾಗಿ ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್ ಅಕ್ಷರಶಃ ಜಲಾವೃತಗೊಂಡಿದ್ದು, ನಗರದ ಎಲ್ಲಾ...

ವಿಶ್ವಸಂಸ್ಥೆಯಲ್ಲಿ ನೆತನ್ಯಾಹು ಭಾಷಣಕ್ಕೆ ಜಾಗತಿಕ ಬಹಿಷ್ಕಾರ: ಖುರ್ಚಿಗೆ ಅಂಟಿಕೊಂಡ ಭಾರತದ ಧೋರಣೆಗೆ ಖಂಡನೆ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (UNGA) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾಷಣ...

CNN, MS NOW, Politicoಗೆ ಶ್ವೇತಭವನ ಪ್ರವೇಶ ನಿರ್ಬಂಧ; ಟ್ರಂಪ್ ಆದೇಶಕ್ಕೆ ಫೆಡರಲ್ ಕೋರ್ಟ್ ತಡೆ

CNN, MS NOW ಮತ್ತು Politico ಸುದ್ದಿ‌ ಸಂಸ್ಥೆಗಳ ಪತ್ರಕರ್ತರಿಗೆ ಶ್ವೇತಭವನ...

ಸೂಚನೆಯಿಲ್ಲದೆ ಆಸ್ಟ್ರೇಲಿಯಾದ ಸರ್ಕಾರಿ ವೆಬ್‌ಸೈಟ್ ಹ್ಯಾಕ್ ಮಾಡಿದ ‘OpenAI’

ಆಸ್ಟ್ರೇಲಿಯಾದ ಸರ್ಕಾರಿ ಆರೋಗ್ಯ ಇಲಾಖೆಯ ವೆಬ್‌ಸೈಟ್‌ ಒಂದನ್ನು ಕೃತಕ ಬುದ್ಧಿಮತ್ತೆ (AI)...