ವೆನಿಸ್ ಚಿತ್ರೋತ್ಸವ | ಅನುಪರ್ಣಾ ರಾಯ್‌ಗೆ ಅತ್ಯುತ್ತಮ ನಿರ್ದೇಶಕಿ ಪ್ರಶಸ್ತಿ

Date:

‘ಸಾಂಗ್ಸ್ ಆಫ್ ಫಾರ್ಗಾಟನ್ ಟ್ರೀಸ್’ ಹಿಂದಿ ಚಿತ್ರಕ್ಕಾಗಿ ಅನುಪರ್ಣಾ ರಾಯ್‌ ಅವರಿಗೆ ವೆನಿಸ್ ಚಿತ್ರೋತ್ಸವದಲ್ಲಿ ಅತ್ಯುತ್ತಮ ನಿರ್ದೇಶಕಿ ಪ್ರಶಸ್ತಿ ಲಭಿಸಿದೆ. ಅನುಪರ್ಣಾ ಅವರ ನಿರ್ದೇಶನದ ಮೊದಲ ಸಿನಿಮಾ ಇದಾಗಿದೆ. ಚಲನಚಿತ್ರ ನಿರ್ಮಾಪಕ ಅನುರಾಗ್ ಕಶ್ಯಪ್ ಅವರು ಪ್ರಸ್ತುತಪಡಿಸಿದ ಈ ಚಿತ್ರವು ಸೆಪ್ಟೆಂಬರ್ 1ರಂದು ವೆನಿಸ್ ಚಿತ್ರೋತ್ಸವದ ಪ್ರತಿಷ್ಠಿತ ಒರಿಝೋಂಟಿ ಸ್ಪರ್ಧಾ ವಿಭಾಗದಲ್ಲಿ ಪ್ರಥಮ ಪ್ರದರ್ಶನಗೊಂಡಿತ್ತು.

- Advertisement -

ವೆನಿಸ್ ಚಿತ್ರೋತ್ಸವವು ಚೊಚ್ಚಲ ಕೃತಿಗಳು, ಯುವ ಪ್ರತಿಭೆಗಳನ್ನು ಕೇಂದ್ರಿಕರಿಸಿದ್ದು, ಇದು ಹೊಸ ಪ್ರವೃತ್ತಿಗಳನ್ನು ಎತ್ತಿ ತೋರಿಸುವ ಚಲನಚಿತ್ರಗಳಿಗಾಗಿ ನಡೆಸುವ ಅಂತಾರಾಷ್ಟ್ರೀಯ ಸ್ಪರ್ಧೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ವೆನಿಸ್ ಚಿತ್ರೋತ್ಸವ | ದಾಖಲೆಯ 23 ನಿಮಿಷಗಳ ಚಪ್ಪಾಳೆ ಗಿಟ್ಟಿಸಿಕೊಂಡ ಗಾಝಾದ ‘ಹಿಂದ್ ರಜಬ್’ ಚಿತ್ರ

ಇನ್ನು ಈ ಪ್ರಶಸ್ತಿ ಪಡೆದ ಬಳಿಕ ಮಾತನಾಡಿದ ನಿರ್ದೇಶಕಿ ಅನುಪರ್ಣಾ ರಾಯ್‌ ಅವರು, “ಈ ಪ್ರಶಸ್ತಿಯು ಕಡೆಗಣಿಸಲ್ಪಟ್ಟ ಅಥವಾ ಸಮಾಜದಲ್ಲಿ ಮೂಲೆಗುಂಪು ಮಾಡಲಾದ ಎಲ್ಲಾ ಮಹಿಳೆಯರಿಗೆ ನೀಡಿದ ಗೌರವಾಗಿದೆ. ಈ ಸಿನಿಮಾ, ಅದರಾಚೆಗಿನ ಮಹಿಳೆಯರಿಗೆ ಧ್ವನಿ ಎತ್ತಲು ಹೆಚ್ಚಿನ ಪ್ರೇರಣೆ, ಶಕ್ತಿಯನ್ನು ಈ ಸಿನಿಮಾ ನೀಡಲಿ ಎಂದು ಆಶಿಸುತ್ತೇನೆ” ಎಂದು ಹೇಳಿದ್ದಾರೆ.

ಸಾಂಗ್ಸ್ ಆಫ್ ಫಾರ್ಗಾಟನ್ ಟ್ರೀಸ್ ಸಿನಿಮಾ ವಲಸೆ ಬಂದ ಮತ್ತು ಮಹತ್ವಾಕಾಂಕ್ಷಿ ನಟಿ ಥೂಯಾ ಅವರ ಕಥೆಯನ್ನು ಹೊಂದಿದೆ. ತಮ್ಮ ಸೌಂದರ್ಯ ಮತ್ತು ಬುದ್ಧಿವಂತಿಕೆಯನ್ನು ಬಳಸಿಕೊಂಡು ನಗರದಲ್ಲಿ ಹೇಗೆ ಬದುಕು ಕಟ್ಟಿಕೊಳ್ಳುತ್ತಾರೆ ಎಂಬುದನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ.

ಈ ಸಿನಿಮಾದಲ್ಲಿ ನಾಜ್ ಶೇಖ್, ಸುಮಿ ಬಘೇಲ್ ನಟಿಸಿದ್ದಾರೆ. ಬಿಭಾನ್ಶು ರೈ, ರೋಮಿಲ್ ಮೋದಿ ಮತ್ತು ರಂಜನ್ ಸಿಂಗ್ ಸಿನಿಮಾ ನಿರ್ಮಿಸಿದ್ದು, ಭೂಷಣ್ ಶಿಂಪಿ, ರವಿ ಮಾನ್, ಪ್ರೀತಮ್ ಪಿಲಾನಿಯಾ ಮತ್ತು ಲವ್ಲಿ ಸಿಂಗ್ ಕೂಡ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕದ ಮತದಾರರಿಗೆ ‘ಎಚ್ಚೆತ್ತುಕೊಳ್ಳಿ’ ಎಂದ ಇರಾನ್: ಟ್ರಂಪ್‌ರನ್ನು ತಿರಸ್ಕರಿಸುವಂತೆ 25 ಪುಟಗಳ ಪತ್ರ ಬಿಡುಗಡೆ

ಅಮೆರಿಕದ ಮಧ್ಯಂತರ ಚುನಾವಣೆಗಳು (Midterm Elections) ಸಮೀಪಿಸುತ್ತಿರುವಂತೆಯೇ, ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...

ಅಮೆರಿಕದಲ್ಲಿ ಡೀಸೆಲ್ ರಫ್ತು ನಿಷೇಧದ ಚರ್ಚೆ; ಭಾರತದ ಮೇಲಾಗುವ ಪರಿಣಾಮವೇನು?

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ...

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...