ಅಪ್ರಾಪ್ತ ಬಾಲಕನೊಂದಿಗೆ ಒಪ್ಪಿತ ಲೈಂಗಿಕ ಸಂಬಂಧ; ಮಗುವಿಗೆ ಜನ್ಮ ನೀಡಿದ್ದ ಐಸ್‌ಲ್ಯಾಂಡ್‌ ಸಚಿವೆ ರಾಜೀನಾಮೆ

Date:

ಅಪ್ರಾಪ್ತ ಬಾಲಕನೊಂದಿಗೆ ವಿವಾಹೇತರ ಒಪ್ಪಿತ ಲೈಂಗಿಕ ಸಂಬಂಧ ಬೆಳೆಸಿದ್ದು, ಆ ಸಂಬಂಧದಿಂದ ಗರ್ಭವತಿಯಾಗಿ, ಮಗುವಿಗೆ ಜನ್ಮ ನೀಡಿದ್ದ ಐಸ್‌ಲ್ಯಾಂಡ್‌ ಸಚಿವೆಯೊಬ್ಬರು ಇದೀಗ ರಾಜೀನಾಮೆ ನೀಡಿದ್ದಾರೆ.

- Advertisement -

ಐಸ್‌ಲ್ಯಾಂಡ್‌ನ ಮಕ್ಕಳ ಸಚಿವೆ ಅಸ್ತಿಲ್ಡರ್ ಲೋವಾ ಥೋರ್ಸ್‌ಡೋಟ್ಟಿರ್ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು 30 ವರ್ಷಗಳ ಹಿಂದೆ ಬಾಲಕನೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದರು. ಮಗುವಿಗೆ ಜನ್ಮವನ್ನೂ ನೀಡಿದ್ದರು. ಆ ಬಗ್ಗೆ ಇತ್ತೀಚೆಗೆ ಭಾರೀ ಚರ್ಚೆಗಳು ಭುಗಿದಿದ್ದವು. ಚರ್ಚೆ, ಟೀಕೆಗಳ ಬೆನ್ನಲ್ಲೇ ಅವರು ರಾಜೀನಾಮೆ ನೀಡಿದ್ದಾರೆ. ವಿವಾದಗಳಿಂದ ದೂರ ಉಳಿಯುವ ಪ್ರಯತ್ನ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಪ್ರಸ್ತುತ 55 ವರ್ಷದ ಅಸ್ತಿಲ್ಡರ್ ಲೋವಾ ಥೋರ್ಸ್‌ಡೋಟ್ಟಿರ್ ಅವರು ತಮ್ಮ 22 ವಯಸ್ಸಿನಲ್ಲಿ 15 ವರ್ಷದ ಬಾಲಕನೊಂದಿಗೆ ವಿವಾಹೇತರ ಒಪ್ಪಿತ ಸಂಬಂಧ ಹೊಂದಿದ್ದುದ್ದಾಗಿ ಹೇಳಿಕೊಂಡಿದ್ದಾರೆ. ಆ ಸಂಬಂಧದಿಂದಲೇ ಗರ್ಭಧರಿಸಿ, ಮಗುವಿಗೆ ಜನ್ಮ ನೀಡಿದ್ದಾಗಿಯೂ ಹೇಳಿಕೊಂಡಿದ್ದಾರೆ.

“ತಮಗೆ ಧಾರ್ಮಿಕ ಸಭೆಯೊಂದರಲ್ಲಿ ಬಾಲಕನ ಪರಿಚಯವಾಗಿತ್ತು. ಅಲ್ಲದೆ, ತಮ್ಮ ಕಷ್ಟದ ಸಮಯದಲ್ಲಿ ಬಾಲಕ ಮನೆಯಲ್ಲಿ ಆಶ್ರಯ ಪಡೆದಿದ್ದ. ಆ ಸಮಯದಲ್ಲಿ ಇಬ್ಬರೂ ಪರಸ್ಪರ ಆಕರ್ಷಿತರಾಗಿದ್ದವು. ಒಪ್ಪಿತ ಸಂಬಂಧದೊಂದಿಗೆ ಜೊತೆಗಿದ್ದೆವು. ನನ್ನ 23ನೇ ವಯಸ್ಸಿನಲ್ಲಿ ಮಗುವಿಗೆ ಜನ್ಮ ನೀಡಿದ್ದೆ” ಎಂದು ಅವರು ಹೇಳಿರುವುದಾಗಿ ವರದಿಯಾಗಿದೆ.

ಅಸ್ತಿಲ್ಡರ್ ಲೋವಾ ಅವರು ತಮ್ಮ ಮಗನನ್ನು ಭೇಟಿ ಮಾಡಲು ಅವಕಾಶ ನೀಡುವಂತೆ ನ್ಯಾಯ ಸಚಿವಾಲಯಕ್ಕೆ ಮನವಿ ಮಾಡಿದ್ದಾರೆ.

ಈ ವರದಿ ಓದಿದ್ದೀರಾ?: ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಸವರಾಜ ಹೊರಟ್ಟಿ

ಐಸ್‌ಲ್ಯಾಂಡ್‌ನಲ್ಲಿ ಒಪ್ಪಿತ ಲೈಂಗಿಕ ಸಂಬಂಧದ ಕನಿಷ್ಠ ವಯಸ್ಸು 15 ವರ್ಷ ಎಂಬ ನಿರ್ಬಂಧವಿದೆ. ಒಂದು ವೇಳೆ, ಸಂಬಂಧ ಬೆಳೆಸುವವರಲ್ಲಿ ಹಿರಿಯರಾಗಿದ್ದವರು ಆ ಕಿರಿಯರಿಗೆ ಮಾರ್ಗದರ್ಶಕ, ಶಿಕ್ಷಕ, ಆರ್ಥಿಕವಾಗಿ ನೆರವುದಾತರಾಗಿದ್ದರೆ, ಅಂತಹವರು 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಕಿರಿಯರೊಂದಿಗೆ ಸಂಬಂಧ ಹೊಂದುವುದು ಕಾನೂನುಬಾಹಿರವೆಂದು ಪರಿಗಣಿಸಲಾಗುತ್ತದೆ. ಅಂತಹ ಅಪರಾಧಗಳಿಗೆ ಗರಿಷ್ಠ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...

ಯುದ್ಧದ ಕರಾಳ ನೆರಳು: ರಷ್ಯಾ ಕನಸು ನಚ್ಚುನೂರಾಗಿ ಉಕ್ರೇನ್‌ನಲ್ಲಿ ಬಂಧಿಯಾದ ಭಾರತೀಯ ಯುವಕ!

ಉತ್ತಮ ಜೀವನ ರೂಪಿಸಿಕೊಳ್ಳಬೇಕು, ದೇಶ ವಿದೇಶ ಸುತ್ತಿ ಆರ್ಥಿಕವಾಗಿ ಕುಟುಂಬವನ್ನು ಬೆಂಬಲಿಸಬೇಕು...