ಹೈಟಿಯ ಐತಿಹಾಸಿಕ ಲಾಫೆರ್ರಿಯರ್ ಕೋಟೆಯಲ್ಲಿ ಭೀಕರ ಕಾಲ್ತುಳಿತ: ಕನಿಷ್ಠ 30 ಮಂದಿ ಸಾವು

Date:

ಕೆರಿಬಿಯನ್‌ ದ್ವೀಪದ ಹೈಟಿಯ ರಾಷ್ಟ್ರದಲ್ಲಿ ಶನಿವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಹೈಟಿಯ ಉತ್ತರ ಭಾಗದಲ್ಲಿ ಇರುವ ಪ್ರಸಿದ್ಧ ಯುನೆಸ್ಕೋ ವಿಶ್ವ ಪ್ರಸಿದ್ಧ ಸ್ಥಳ ಲಾಫೆರ್ರಿಯರ್ ಕೋಟೆ (Citadelle Laferrière)ಯಲ್ಲಿ ಭೀಕರ ಕಾಲ್ತುಳಿತ ಸಂಭವಿಸಿದೆ. ಈ ಘಟನೆ ಕೋಟೆಯ ಪ್ರವೇಶದ್ವಾರದ ಬಳಿ ನಡೆದಿದೆ. ಕಾರ್ಯಕ್ರಮದಲ್ಲಿ ಅಧಿಕ ಯುವಕರು ಮತ್ತು ವಿದ್ಯಾರ್ಥಿಗಳು (ಅನೇಕರು 12 ವರ್ಷದಿಂದ ಮೇಲ್ಪಟ್ಟವರು) ಭಾಗವಹಿಸಿದ್ದರು ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“Citadel Vibes 3.0” ಎಂಬ ಕಾರ್ಯಕ್ರಮವನ್ನು ಶನಿವಾರ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮ ಆರಂಭವಾಗುವಾಗ ಭಾರೀ ಮಳೆಯಿಂದಾಗಿ ಜನಸಂದಣಿ ಹೆಚ್ಚಾಗಿದೆ. ಜನರು ಆತಂಕಗೊಳ್ಳುತ್ತಿದ್ದಂತೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಅನೇಕರು ಜನಸಂದಣಿ ನಡುವೆ ಉಸಿರುಕಟ್ಟಿ (asphyxiation) ಮತ್ತು ಕಾಲ್ತುಳಿತದಿಂದ ಸಾವಿಗೀಡಾಗಿದ್ದಾರೆ. ನೂರಾಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

“ಸಂತ್ರಸ್ತ ಕುಟುಂಬಗಳಿಗೆ ಸಂತಾಪಗಳು. ಇಂತಹ ದುಃಖದ ಸಮಯದಲ್ಲಿ ಸಂತ್ರಸ್ತ ಕುಟುಂಬಕ್ಕೆ ಧೈರ್ಯ ತುಂಬುತ್ತೇನೆ” ಎಂದು ಪ್ರಧಾನಿ ಅಲಿಕ್ಸ್ ಡಿಡಿಯರ್ ಫಿಲ್ಸ್-ಐಮೆ ತಿಳಿಸಿದ್ದಾರೆ.

ಸ್ಥಳದ ಪ್ರವೇಶದ್ವಾರದಲ್ಲಿ ಕಾಲ್ತುಳಿತ ಸಂಭವಿಸಿದೆ ಮತ್ತು ಮಳೆಯಿಂದಾಗಿ ಕಾಲ್ತುಳಿತ ನಿಯಂತ್ರಣಕ್ಕೆ ಬರದಂತಾಗಿತ್ತು ಎಂದು ಹೈಟಿಯ ಸಿವಿಲ್‌ ಪ್ರೊಟೆಕ್ಷನ್ ಮುಖ್ಯಸ್ಥ ಜೀನ್ ಹೆನ್ರಿ ಪೆಟಿಟ್ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಬೀದರ್‌ | ಮತದಾನ ಹಕ್ಕು ಕಸಿಯುವ ʼಎಸ್‌ಐಆರ್ʼ ಪ್ರಕ್ರಿಯೆ ವಿರೋಧಿಸಿ ಅ.12ರಂದು ಪ್ರತಿಭಟನೆ

ದೇಶಾದ್ಯಂತ ಎಸ್‌ಐಆರ್ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಮತದಾರರನ್ನು ಕೈಬಿಡಲಾಗಿರುವುದನ್ನು ಆರೋಪಿಸಿ,...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ʼವೋಟ್‌ ಚೋರಿʼ ಆರೋಪಕ್ಕೆ ಪುರಾವೆ ಅಗತ್ಯʼ: ಚುನಾವಣಾ ಆಯೋಗದ ಪರ 124 ನಿವೃತ್ತ ಅಧಿಕಾರಿಗಳ ಪತ್ರ

ಚುನಾವಣಾ ಅಕ್ರಮಗಳ ಆರೋಪಗಳಿಗೆ ವಿಶ್ವಾಸಾರ್ಹ ಪುರಾವೆಗಳು ಅಗತ್ಯ ಎಂದು ಪ್ರತಿಪಾದಿಸಿರುವ 124...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...