ಚಿಲಿ | ಜನನಿಬಿಡ ಪ್ರದೇಶಕ್ಕೆ ಹಬ್ಬಿದ ಕಾಡ್ಗಿಚ್ಚು; 46 ಸಾವು

Date:

ಚಿಲಿ ದೇಶದ ವಾಲ್‌ಪರೈಸೊ ಪ್ರಾಂತ್ಯದ ಅರಣ್ಯದಲ್ಲಿ ಉಂಟಾದ ಕಾಡ್ಗಿಚ್ಚಿನಿಂದ ಕನಿಷ್ಠ 46 ಮಂದಿ ಮೃತಪಟ್ಟು, ಸಾವಿರಕ್ಕೂ ಹೆಚ್ಚು ಮನೆಗಳು ನಾಶವಾಗಿವೆ.

- Advertisement -

ದೇಶದ ಕೇಂದ್ರ ಹಾಗೂ ಮಧ್ಯ ಭಾಗದ ವಾಲ್‌ಪರೈಸೊ ಪ್ರಾಂತ್ಯದ 92 ಅರಣ್ಯಗಳಲ್ಲಿ ಫೆ.03 ರಂದು ಉಂಟಾದ ಕಾಡ್ಗಿಚ್ಚಿನಿಂದ ಈ ಘಟನೆ ಸಂಭವಿಸಿದೆ ಎಂದು ಚಿಲಿಯ ಅಂತರಿಕ ಸಚಿವ ಕರೋಲಿನಾ ತೊಹಾ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಕಾಡ್ಗಿಚ್ಚು ಜನನಿಬಿಡ ಸಮೀಪ ಆವರಿಸಿದ ಕಾರಣ ಹಲವು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಒಂದು ವೇಳೆ ಕಾಡ್ಗಿಚ್ಚಿನ ಸಮೀಪವಿರುವ ಪ್ರದೇಶದಲ್ಲಿ ನೀವು ವಾಸವಿದ್ದರೆ ಮನೆಯನ್ನು ಖಾಲಿ ಮಾಡಲು ಯಾವುದೇ ಕಾರಣಕ್ಕೂ ಹಿಂಜರಿಯಬೇಡಿ. ಬೆಂಕಿಯು ವೇಗವಾಗಿ ಆಗಮಿಸುತ್ತಿದೆ. ಹವಾಮಾನ ಪರಿಸ್ಥಿತಿಯಿಂದಾಗಿ ಬೆಂಕಿಯನ್ನು ನಂದಿಸಲು ಕಷ್ಟವಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.

ಭಯಾನಕವಾದ ಕಾಡ್ಗಿಚ್ಚು ಎಲ್ಲಡೆ ಆವರಿಸುತ್ತಿರುವ ಕಾರಣ ತಮ್ಮ ಮನೆಗಳನ್ನು ತೊರೆಯುವಂತೆ ಸಾವಿರಾರು ಮಂದಿ ವಾಸವಿರುವ ಪ್ರದೇಶಗಳಿಗೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೇಂದ್ರದ ತಾರತಮ್ಯ ನೀತಿಯನ್ನು ಪ್ರಶ್ನಿಸುವುದು ತಪ್ಪೇ?

ಕಾಡ್ಗಿಚ್ಚಿನ ವಿಕೋಪದ ಬಗ್ಗೆ ರಾಷ್ಟ್ರೀಯ ವಾಹಿನಿಯಲ್ಲಿ ಮಾತನಾಡಿರುವ ಚಿಲಿ ಅಧ್ಯಕ್ಷ ಗಾರ್ಬಿಯಲ್ ಬೋರಿಕ್, ಬೆಂಕಿಯು ಮತ್ತಷ್ಟು ಆವರಿಸುವ ಕಾರಣ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಅಗ್ನಿಶಾಮಕದಳದವರು ಕೂಡ ಬೆಂಕಿ ಹೊತ್ತಿಕೊಂಡಿರುವ ಪ್ರದೇಶಕ್ಕೆ ಆಗಮಿಸಲು ಕಷ್ಟಪಡುತ್ತಿದ್ದಾರೆ. ರಕ್ಷಣಾ ಕಾರ್ಯಕರ್ತರು ಆಗಮಿಸುವವರೆಗೂ ತಾಳ್ಮೆಯಿಂದ ಸಹಕರಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಕಾಡ್ಗಿಚ್ಚು 8 ಸಾವಿರ ಎಕ್ಟೇರ್ ಪ್ರದೇಶವಿರುವ ಕ್ಯೂಲ್‌ಪ್ಯೊ ಮತ್ತು ವಿಲ್ಲಾ ಅಲೆಮನಾ ಅರಣ್ಯಗಳನ್ನು ಭಸ್ಮ ಮಾಡಿದೆ. ಜನ ವಾಸಿಸುವ ಕೆಲವು ಕರಾವಳಿ ಪ್ರದೇಶಗಳಿಗೂ ಬೆಂಕಿ ವ್ಯಾಪಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ವಾಲ್‌ಪರೈಸೊ ಪ್ರಾಂತ್ಯದಲ್ಲಿ ಬೆಂಕಿಯನ್ನು ನಂದಿಸಿ ಸಾರ್ವಜನಿಕರನ್ನು ರಕ್ಷಿಸಲು 19 ಹೆಲಿಕಾಪ್ಟರ್‌ಗಳು ಹಾಗೂ 450ಕ್ಕೂ ಹೆಚ್ಚು ರಕ್ಷಣಾ ಕಾರ್ಯಕರ್ತರು ಆಗಮಿಸಿದ್ದಾರೆ ಎಂದು ಅಧ್ಯಕ್ಷರು ತಿಳಿಸಿದ್ದಾರೆ.

ಜನವರಿಯಲ್ಲಿ ಕೊಲಂಬಿಯಾದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ 42 ಸಾವಿರ ಎಕರೆ ಪ್ರದೇಶದ ಅರಣ್ಯ ಭಸ್ಮಗೊಂಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...

ಯುದ್ಧದ ಕರಾಳ ನೆರಳು: ರಷ್ಯಾ ಕನಸು ನಚ್ಚುನೂರಾಗಿ ಉಕ್ರೇನ್‌ನಲ್ಲಿ ಬಂಧಿಯಾದ ಭಾರತೀಯ ಯುವಕ!

ಉತ್ತಮ ಜೀವನ ರೂಪಿಸಿಕೊಳ್ಳಬೇಕು, ದೇಶ ವಿದೇಶ ಸುತ್ತಿ ಆರ್ಥಿಕವಾಗಿ ಕುಟುಂಬವನ್ನು ಬೆಂಬಲಿಸಬೇಕು...