ರಷ್ಯಾ | ಕನ್ಸರ್ಟ್ ಹಾಲ್ ಮೇಲೆ ದಾಳಿ; 60 ಮಂದಿ ಸಾವು; 100ಕ್ಕೂ ಹೆಚ್ಚು ಮಂದಿ ಗಾಯ

Date:

ರಷ್ಯಾದ ಮಾಸ್ಕೊದಲ್ಲಿ ಕನ್ಸರ್ಟ್‌ ಹಾಲ್‌ ಮೇಲೆ ಬಂದೂಕುಧಾರಿಗಳು ದಾಳಿ ನಡೆಸಿದ್ದಾರೆ. ಗುಂಡಿನ ದಾಳಿಯಲ್ಲಿ 60ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಸುಮಾರು 115 ಮಂದಿ ಗಾಯಗೊಂಡಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

ಐದು ಮಕ್ಕಳು ಸೇರಿದಂತೆ 115 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಒಬ್ಬ ಮಗು ಸೇರಿದಂತೆ 60 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇಸ್ಲಾಮಿಕ್ ಸ್ಟೇಟ್ ಗುಂಪು ದಾಳಿಯ ಹೊಣೆ ಹೊತ್ತುಕೊಂಡಿದೆ. ಅದರ ಕಾರ್ಯಕರ್ತರು ಮುಸುಕುಧಾರಿ ವಸ್ತ್ರಗಳನ್ನು ಧರಿಸಿ, ಕಟ್ಟಡವನ್ನು ಪ್ರವೇಶಿಸಿದ್ದರು. ಗುಂಡಿನ ದಾಳಿ ನಡೆಸಿ, ಬೆಂಕಿಯ ಬಾಂಬ್‌ಗಳನ್ನು ಎಸೆದರು ಎಂದು ಹೇಳಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸಭಾಂಗಣದಲ್ಲಿ ಬೆಂಕಿಯ ಜ್ವಾಲೆ ಮತ್ತು ಕಪ್ಪು ಹೊಗೆ ಹರಡಿಕೊಂಡಿತ್ತು. ಮೂರು ಹೆಲಿಕಾಪ್ಟರ್‌ಗಳ ಮೂಲಕ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆದಿದೆ. ಮಧ್ಯರಾತ್ರಿಯ ನಂತರ ಬೆಂಕಿಯನ್ನು ನಂದಿಸಲಾಯಿತು ಎಂದು ತುರ್ತು ಸಚಿವಾಲಯ ಹೇಳಿದೆ.

“ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಎಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಹಾರೈಸಿದರು ಮತ್ತು ಗಾಯಗೊಂಡವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ” ಎಂದು ಉಪ ಪ್ರಧಾನ ಮಂತ್ರಿ ಟಟಯಾನಾ ಗೋಲಿಕೋವಾ ತಿಳಿಸಿದ್ದಾರೆ.

ಐರೋಪ್ಯ ಒಕ್ಕೂಟ, ಫ್ರಾನ್ಸ್, ಸ್ಪೇನ್ ಮತ್ತು ಇಟಲಿ ಹಲವಾರು ದೇಶಗಳು ದಾಳಿಯನ್ನು ಖಂಡಿಸಿವೆ. ದಾಳಿಯನ್ನು ಅಮೆರಿಕಾ ‘ಭಯಾನಕ’ ಎಂದು ಕರೆದಿದೆ. ಉಕ್ರೇನ್‌ನಲ್ಲಿನ ಸಂಘರ್ಷಕ್ಕೂ ಈ ದಾಳಿಗೂ ಸಂಬಂಧದ ಬಗ್ಗೆ ತಕ್ಷಣದ ಲಕ್ಷಣಗಳಿಲ್ಲ ಎಂದು ಹೇಳಿದೆ.

ಉಕ್ರೇನ್‌ನ ಪ್ರೆಸಿಡೆನ್ಸಿಯು ದಾಳಿಗೂ ಉಕ್ರೇನ್‌ಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದೆ. ಆದರೆ, ಅದರ ಮಿಲಿಟರಿ ಗುಪ್ತಚರ ಘಟಕವು ಇದು ರಷ್ಯಾದ ಪ್ರಚೋದನೆ ಎಂದು ಕರೆದಿದೆ.

ಮಾಸ್ಕೋದಲ್ಲಿ ಸಂಗೀತ ಕಚೇರಿಗಳು ಸೇರಿದಂತೆ ಸಾಮೂಹಿಕ ಸಭೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಯುವ ಅಪಾಯವಿದೆ ಎಂದು ದಾಳಿಯ ಎರಡು ವಾರಗಳ ಮೊದಲು ಅಮೆರಿಕಾ ರಾಯಭಾರ ಕಚೇರಿ ಹೇಳಿತ್ತು.

ಮಾಸ್ಕೋದಲ್ಲಿ ನಡೆದ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ. “ಮಾಸ್ಕೋದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ನಾವು ಬಲವಾಗಿ ಖಂಡಿಸುತ್ತೇವೆ. ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ತಿಳಿಸುತ್ತೇವೆ. ಈ ದುಃಖದ ಸಮಯದಲ್ಲಿ ಭಾರತ ಸರ್ಕಾರ ಮತ್ತು ರಷ್ಯಾದ ಒಕ್ಕೂಟದ ಜನರೊಂದಿಗೆ ಒಗ್ಗಟ್ಟಿನಿಂದ ನಿಂತಿದೆ” ಮೋದಿ ಟ್ವೀಟ್ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶ್ರೀಲಂಕಾ| ಪ್ರೇಕ್ಷಕರೆಡೆಗೆ ನುಗ್ಗಿದ ರೇಸಿಂಗ್ ಕಾರು; ಏಳು ಮಂದಿ ಸಾವು

ಶ್ರೀಲಂಕಾದ ದಿಯಾತಲಾವಾದಲ್ಲಿ ಭಾನುವಾರ ನಡೆದ ಫಾಕ್ಸ್ ಹಿಲ್ ಸೂಪರ್ ಕ್ರಾಸ್ 2024...

ಮಾಲ್ಡೀವ್ಸ್ ಸಂಸತ್ ಚುನಾವಣೆ | ಚೀನಾ ಬೆಂಬಲಿತ ಅಧ್ಯಕ್ಷ ಮುಯಿಝ್ಜು ಮತ್ತೆ ಅಧಿಕಾರಕ್ಕೆ; ಭಾರತದ ಪರ MDPಗೆ ಹೀನಾಯ ಸೋಲು

ಮಾಲ್ಡೀವ್ಸ್‌ನ ಸಂಸತ್ತಿನ ಮಜ್ಲಿಸ್‌ಗೆ ನಡೆದ ಚುನಾವಣೆಯಲ್ಲಿ ಚೀನಾ ಪರ ಅಧ್ಯಕ್ಷ ಮೊಹಮ್ಮದ್...

ಗಾಜಾದಲ್ಲಿ ಇಸ್ರೇಲ್ ಪಡೆಗಳ ದಾಳಿ: 9 ಮಕ್ಕಳು ಸೇರಿ 13 ಸಾವು

ದಕ್ಷಿಣ ಗಾಜಾ ಪಟ್ಟಣದ ರಾಫಾದಲ್ಲಿ ಕಳೆದ ರಾತ್ರಿ ಇಸ್ರೇಲ್‌ ಪಡೆಗಳು ದಾಳಿ...

ಟೆಸ್ಲಾ ಕಾರಣ; ಭಾರತ ಭೇಟಿ ಮುಂದೂಡಿದ ಎಲಾನ್ ಮಸ್ಕ್!

ಟೆಸ್ಲಾ ಸಿಇಒ, ವಿಶ್ವದ ಮೂರನೇ ಅತೀ ಶ್ರೀಮಂತ ವ್ಯಕ್ತಿ ಎಲಾನ್ ಮಸ್ಕ್...