ತನ್ನ ವರದಿ ಉಲ್ಲೇಖಿಸಿ ವೀಸಾ ವಿಸ್ತರಿಸಲು ಮೋದಿ ಸರ್ಕಾರ ನಿರಾಕರಣೆ: ಭಾರತ ತೊರೆದ ಆಸ್ಟ್ರೇಲಿಯಾ ಪತ್ರಕರ್ತೆ!

Date:

ಸಿಖ್ ಪ್ರತ್ಯೇಕತಾವಾದಿ ಗುಂಪಾದ ಖಲಿಸ್ತಾನ್ ಬಗ್ಗೆ ವರದಿ ಮಾಡಿದ್ದಕ್ಕೆ, ತನ್ನ ವರದಿಯನ್ನು ಉಲ್ಲೇಖಿಸಿ, ಕೆಲಸದ ವೀಸಾವನ್ನು ವಿಸ್ತರಿಸಲು ಮೋದಿ ಸರ್ಕಾರ ನಿರಾಕರಿಸಿದ ನಂತರ, ನನ್ನನ್ನು ಭಾರತ ತೊರೆಯುವಂತೆ ಬಲವಂತಪಡಿಸಲಾಯಿತು. ಹಾಗಾಗಿ, ನಾನು ಭಾರತ ತೊರೆದಿದ್ದೇನೆ ಎಂದು ಆಸ್ಟ್ರೇಲಿಯಾದ ಪತ್ರಕರ್ತೆಯೊಬ್ಬರು ಸೋಷಿಯಲ್ ಮೀಡಿಯಾ ಮೂಲಕ ಗಂಭೀರ ಆರೋಪ ಹೊರಿಸಿದ್ದಾರೆ.

- Advertisement -

ಆಸ್ಟ್ರೇಲಿಯನ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್‌ನ(ABC) ದಕ್ಷಿಣ ಏಷ್ಯಾ ಬ್ಯೂರೋ ಮುಖ್ಯಸ್ಥೆಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಅವನಿ ಡಯಾಸ್, ಸಿಖ್ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಕುರಿತು ವರದಿ ಮಾಡಿದ್ದಕ್ಕೆ ಸರ್ಕಾರ ಆಕ್ಷೇಪಿಸಿದ ನಂತರ ಲೋಕಸಭೆ ಚುನಾವಣೆ ಪ್ರಾರಂಭವಾದ ಏಪ್ರಿಲ್ 19 ರಂದು ಭಾರತ ತೊರೆಯಬೇಕಾಯಿತು ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ರಾಹುಲ್ ಗಾಂಧಿ ಅವರ ಶೈಕ್ಷಣಿಕ...

ಭಾರತದ ಆರ್ಥಿಕ ಬಿಕ್ಕಟ್ಟು, ನಿರುದ್ಯೋಗ, ಶಿಕ್ಷಣ, ಯುವಜನರ ಚಳವಳಿಗಳು, ಪ್ರಜಾಪ್ರಭುತ್ವ ಮತ್ತು ಜಾಗತಿಕ ರಾಜಕೀಯದ ಕುರಿತು ಮಹತ್ವದ ವಿಚಾರ ವಿನಿಮಯ ಭಾರತದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನವೆಂಬರ್ 17,...

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ...

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ ಕೆಲವು ಕೆಲಸಗಳನ್ನೂ ಯಂತ್ರಗಳು ಮಾಡತೊಡಗಿವೆ. ಭಾಷಾಂತರ, ಲೆಕ್ಕಾಚಾರ, ವಿನ್ಯಾಸ, ಮಾಹಿತಿ ವಿಶ್ಲೇಷಣೆ, ವೈದ್ಯಕೀಯ ಪರೀಕ್ಷೆಗಳಿಗೆ ನೆರವು, ಆಡಳಿತದ ನಿರ್ಧಾರಗಳಿಗೆ ಸಹಾಯ...

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, “ಕಳೆದ ವಾರ, ನಾನು ಹಠಾತ್ತನೆ ಭಾರತ ತೊರೆಯಬೇಕಾಯಿತು. ಮೋದಿ ಸರ್ಕಾರವು ನನ್ನ ವರದಿಯು ನಿಯಮ ಮೀರಿದೆ ಎಂದು ಹೇಳಿ ವೀಸಾ ವಿಸ್ತರಣೆ ನಿರಾಕರಿಸಿತ್ತು. ಹಾಗಾಗಿ, ಅವಧಿ ಮುಗಿದದ್ದಕ್ಕಾಗಿ ಭಾರತ ತೊರೆಯಬೇಕಾಯಿತು” ಎಂದು ಬರೆದುಕೊಂಡಿದ್ದಾರೆ.

“ಭಾರತೀಯ ಸಚಿವಾಲಯದ ನಿರ್ದೇಶನದ ಕಾರಣದಿಂದ ಚುನಾವಣಾ ಮಾನ್ಯತೆ ಬರುವುದಿಲ್ಲ ಎಂದು ತಿಳಿಸಲಾಯಿತು. ಮೋದಿ ಪ್ರಜಾಪ್ರಭುತ್ವ ತಾಯಿ ಎಂದು ಕರೆದಿದ್ದ ಮೊದಲ ಹಂತದ ಮತದಾನದಿಂದು ನಾನು ಭಾರತ ತೊರೆದಿದ್ದೇನೆ” ಎಂದು ಡಯಾಸ್ ಹೇಳಿದ್ದಾರೆ. ಅವನಿ ಡಯಾಸ್, ಎಬಿಸಿ ಸಂಸ್ಥೆಯ ಪರ ಭಾರತದಲ್ಲಿ ಕಳೆದ ಎರಡೂವರೆ ವರ್ಷಗಳಿಂದ ದಕ್ಷಿಣ ಏಷ್ಯಾ ಬ್ಯೂರೋ ಮುಖ್ಯಸ್ಥೆಯಾಗಿ ಕೆಲಸ ಮಾಡುತ್ತಿದ್ದರು.

ಆಸ್ಟ್ರೇಲಿಯನ್ ಸರ್ಕಾರದ ಮಧ್ಯಪ್ರವೇಶದ ನಂತರ ವೀಸಾವನ್ನು ಎರಡು ತಿಂಗಳವರೆಗೆ ವಿಸ್ತರಿಸಲಾಯಿತು. ಇದನ್ನು ನನ್ನ ವಿಮಾನ ಪ್ರಯಾಣಕ್ಕೂ 24 ಗಂಟೆಗಳ ಮುನ್ನ ತಿಳಿಸಲಾಯಿತು. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕಾರಿಯೊಬ್ಬರು ಈ ನಿರ್ಧಾರವನ್ನು ಡಯಾಸ್‌ಗೆ ತಿಳಿಸಿದ್ದಾರೆ ಎಂದು ಆಸ್ಟ್ರೇಲಿಯನ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್ ಹೇಳಿದೆ.

ನಿಜ್ಜರ್ ಹತ್ಯೆಯ ಕುರಿತಾದ ತನ್ನ ಸುದ್ದಿ ಸರಣಿಗೆ ಭಾರತದಲ್ಲಿ ಯೂಟ್ಯೂಬ್ ಬ್ಲಾಕ್ ಮಾಡಿದೆ ಎಂದು ಎಬಿಸಿ ಹೇಳಿದೆ.

‘ತಪ್ಪುದಾರಿಗೆಳೆಯುವ ಮಾಹಿತಿ’ ಎಂದ ಕೇಂದ್ರ ಸರ್ಕಾರ!

ಅವನಿ ಡಯಾಸ್ ಅವರ ಹೇಳಿಕೆಯು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದಂತೆಯೇ ಪ್ರತಿಕ್ರಿಯಿಸಿರುವ ಕೇಂದ್ರ ಸರ್ಕಾರ, ‘ಪತ್ರಕರ್ತೆ ಮಾಡಿರುವ ಆರೋಪವು ತಪ್ಪುದಾರಿಗೆಳೆಯುವಂಥದ್ದು ಹಾಗೂ ಚೇಷ್ಟೆಯದ್ದು’ ಎಂದಿದೆ.

ಆಸ್ಟ್ರೇಲಿಯಾದ ಹಿರಿಯ ಪತ್ರಕರ್ತೆಗೆ ವೀಸಾವನ್ನು ವಿಸ್ತರಿಸಲಾಗುವುದು ಎಂದು ಭರವಸೆ ನೀಡಲಾಗಿದೆ, ಅವರು ಲೋಕಸಭಾ ಚುನಾವಣೆಗಳ ಬಗ್ಗೆ ವರದಿ ಮಾಡಬಹುದು ಎಂದು ಅಧಿಕಾರಿಯೋರ್ವರ ಹೇಳಿಕೆ ಉಲ್ಲೇಖಿಸಿ, ಎನ್‌ಡಿಟಿವಿ ವರದಿ ಮಾಡಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿನೆಮಾ ನೋಡುವುದು: ಕಲೆಯ ಆಂತರ್ಯವನ್ನು ಗ್ರಹಿಸುವ ಕ್ರಮ

ಸಿನೆಮಾ ವಿಶ್ಲೇಷಣೆ ಎಂದರೆ ಕೇವಲ ದೋಷಗಳನ್ನು ಎಣಿಸುವ ಮೇಲ್ನೋಟದ ತೀರ್ಪಲ್ಲ. ಪರದೆಯ...

ಬಾಂಗ್ಲಾ ಗಾರ್ಮೆಂಟ್ಸ್ ಬಿಕ್ಕಟ್ಟು: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಮುಷ್ಕರ; 150ಕ್ಕೂ ಹೆಚ್ಚು ಕಾರ್ಖಾನೆಗಳು ಬಂದ್!

ಬಾಂಗ್ಲಾದೇಶದ ಪ್ರಮುಖ ಸಿದ್ಧ ಉಡುಪು (ಗಾರ್ಮೆಂಟ್ಸ್) ಉತ್ಪಾದನಾ ಕೇಂದ್ರಗಳಲ್ಲಿ ಕನಿಷ್ಠ ವೇತನ...

ಭಾರತದ ಸರಕುಗಳಿಗೆ ಅಮೆರಿಕ ಮಾರುಕಟ್ಟೆಯಲ್ಲಿ ಆದ್ಯತೆ; ಸುಂಕ ಕಡಿತದ ಒಪ್ಪಂದಕ್ಕೆ ಒಪ್ಪಿಗೆ

ಅಮೆರಿಕದ ಮಾರುಕಟ್ಟೆಯಲ್ಲಿ ಭಾರತದ ಸರಕುಗಳಿಗೆ ಆದ್ಯತೆ ನೀಡಿ, ಬೇರೆ ರಾಷ್ಟ್ರಗಳ ಸರಕುಗಳಿಗೆ...