ತನ್ನ ವರದಿ ಉಲ್ಲೇಖಿಸಿ ವೀಸಾ ವಿಸ್ತರಿಸಲು ಮೋದಿ ಸರ್ಕಾರ ನಿರಾಕರಣೆ: ಭಾರತ ತೊರೆದ ಆಸ್ಟ್ರೇಲಿಯಾ ಪತ್ರಕರ್ತೆ!

Date:

ಸಿಖ್ ಪ್ರತ್ಯೇಕತಾವಾದಿ ಗುಂಪಾದ ಖಲಿಸ್ತಾನ್ ಬಗ್ಗೆ ವರದಿ ಮಾಡಿದ್ದಕ್ಕೆ, ತನ್ನ ವರದಿಯನ್ನು ಉಲ್ಲೇಖಿಸಿ, ಕೆಲಸದ ವೀಸಾವನ್ನು ವಿಸ್ತರಿಸಲು ಮೋದಿ ಸರ್ಕಾರ ನಿರಾಕರಿಸಿದ ನಂತರ, ನನ್ನನ್ನು ಭಾರತ ತೊರೆಯುವಂತೆ ಬಲವಂತಪಡಿಸಲಾಯಿತು. ಹಾಗಾಗಿ, ನಾನು ಭಾರತ ತೊರೆದಿದ್ದೇನೆ ಎಂದು ಆಸ್ಟ್ರೇಲಿಯಾದ ಪತ್ರಕರ್ತೆಯೊಬ್ಬರು ಸೋಷಿಯಲ್ ಮೀಡಿಯಾ ಮೂಲಕ ಗಂಭೀರ ಆರೋಪ ಹೊರಿಸಿದ್ದಾರೆ.

- Advertisement -

ಆಸ್ಟ್ರೇಲಿಯನ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್‌ನ(ABC) ದಕ್ಷಿಣ ಏಷ್ಯಾ ಬ್ಯೂರೋ ಮುಖ್ಯಸ್ಥೆಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಅವನಿ ಡಯಾಸ್, ಸಿಖ್ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಕುರಿತು ವರದಿ ಮಾಡಿದ್ದಕ್ಕೆ ಸರ್ಕಾರ ಆಕ್ಷೇಪಿಸಿದ ನಂತರ ಲೋಕಸಭೆ ಚುನಾವಣೆ ಪ್ರಾರಂಭವಾದ ಏಪ್ರಿಲ್ 19 ರಂದು ಭಾರತ ತೊರೆಯಬೇಕಾಯಿತು ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, “ಕಳೆದ ವಾರ, ನಾನು ಹಠಾತ್ತನೆ ಭಾರತ ತೊರೆಯಬೇಕಾಯಿತು. ಮೋದಿ ಸರ್ಕಾರವು ನನ್ನ ವರದಿಯು ನಿಯಮ ಮೀರಿದೆ ಎಂದು ಹೇಳಿ ವೀಸಾ ವಿಸ್ತರಣೆ ನಿರಾಕರಿಸಿತ್ತು. ಹಾಗಾಗಿ, ಅವಧಿ ಮುಗಿದದ್ದಕ್ಕಾಗಿ ಭಾರತ ತೊರೆಯಬೇಕಾಯಿತು” ಎಂದು ಬರೆದುಕೊಂಡಿದ್ದಾರೆ.

“ಭಾರತೀಯ ಸಚಿವಾಲಯದ ನಿರ್ದೇಶನದ ಕಾರಣದಿಂದ ಚುನಾವಣಾ ಮಾನ್ಯತೆ ಬರುವುದಿಲ್ಲ ಎಂದು ತಿಳಿಸಲಾಯಿತು. ಮೋದಿ ಪ್ರಜಾಪ್ರಭುತ್ವ ತಾಯಿ ಎಂದು ಕರೆದಿದ್ದ ಮೊದಲ ಹಂತದ ಮತದಾನದಿಂದು ನಾನು ಭಾರತ ತೊರೆದಿದ್ದೇನೆ” ಎಂದು ಡಯಾಸ್ ಹೇಳಿದ್ದಾರೆ. ಅವನಿ ಡಯಾಸ್, ಎಬಿಸಿ ಸಂಸ್ಥೆಯ ಪರ ಭಾರತದಲ್ಲಿ ಕಳೆದ ಎರಡೂವರೆ ವರ್ಷಗಳಿಂದ ದಕ್ಷಿಣ ಏಷ್ಯಾ ಬ್ಯೂರೋ ಮುಖ್ಯಸ್ಥೆಯಾಗಿ ಕೆಲಸ ಮಾಡುತ್ತಿದ್ದರು.

ಆಸ್ಟ್ರೇಲಿಯನ್ ಸರ್ಕಾರದ ಮಧ್ಯಪ್ರವೇಶದ ನಂತರ ವೀಸಾವನ್ನು ಎರಡು ತಿಂಗಳವರೆಗೆ ವಿಸ್ತರಿಸಲಾಯಿತು. ಇದನ್ನು ನನ್ನ ವಿಮಾನ ಪ್ರಯಾಣಕ್ಕೂ 24 ಗಂಟೆಗಳ ಮುನ್ನ ತಿಳಿಸಲಾಯಿತು. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕಾರಿಯೊಬ್ಬರು ಈ ನಿರ್ಧಾರವನ್ನು ಡಯಾಸ್‌ಗೆ ತಿಳಿಸಿದ್ದಾರೆ ಎಂದು ಆಸ್ಟ್ರೇಲಿಯನ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್ ಹೇಳಿದೆ.

ನಿಜ್ಜರ್ ಹತ್ಯೆಯ ಕುರಿತಾದ ತನ್ನ ಸುದ್ದಿ ಸರಣಿಗೆ ಭಾರತದಲ್ಲಿ ಯೂಟ್ಯೂಬ್ ಬ್ಲಾಕ್ ಮಾಡಿದೆ ಎಂದು ಎಬಿಸಿ ಹೇಳಿದೆ.

‘ತಪ್ಪುದಾರಿಗೆಳೆಯುವ ಮಾಹಿತಿ’ ಎಂದ ಕೇಂದ್ರ ಸರ್ಕಾರ!

ಅವನಿ ಡಯಾಸ್ ಅವರ ಹೇಳಿಕೆಯು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದಂತೆಯೇ ಪ್ರತಿಕ್ರಿಯಿಸಿರುವ ಕೇಂದ್ರ ಸರ್ಕಾರ, ‘ಪತ್ರಕರ್ತೆ ಮಾಡಿರುವ ಆರೋಪವು ತಪ್ಪುದಾರಿಗೆಳೆಯುವಂಥದ್ದು ಹಾಗೂ ಚೇಷ್ಟೆಯದ್ದು’ ಎಂದಿದೆ.

ಆಸ್ಟ್ರೇಲಿಯಾದ ಹಿರಿಯ ಪತ್ರಕರ್ತೆಗೆ ವೀಸಾವನ್ನು ವಿಸ್ತರಿಸಲಾಗುವುದು ಎಂದು ಭರವಸೆ ನೀಡಲಾಗಿದೆ, ಅವರು ಲೋಕಸಭಾ ಚುನಾವಣೆಗಳ ಬಗ್ಗೆ ವರದಿ ಮಾಡಬಹುದು ಎಂದು ಅಧಿಕಾರಿಯೋರ್ವರ ಹೇಳಿಕೆ ಉಲ್ಲೇಖಿಸಿ, ಎನ್‌ಡಿಟಿವಿ ವರದಿ ಮಾಡಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...