ಬಾಹ್ಯಾಕಾಶ ಯೋಜನೆ ‘ಆಕ್ಸಿಯಮ್ ಮಿಷನ್-4’ ಅನ್ನು ಪದೇ ಪದೆ ಮುಂದೂಡಿದ ನಂತರ ಭಾರತೀಯರು ಕುತೂಹಲದಿಂದ ಕಾಯುತ್ತಿದ್ದ ಐತಿಹಾಸಿಕ ಕ್ಷಣ ಈಡೇರಿದೆ.
‘ಆ್ಯಕ್ಷಿಯಂ-4’ ಅಂತರಿಕ್ಷ ಕಾರ್ಯಕ್ರಮದ ಭಾಗವಾಗಿ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಇಂದು (ಜೂ.25) ಮಧ್ಯಾಹ್ನ 12.01ಕ್ಕೆ (ಭಾರತೀಯ ಕಾಲಮಾನ) ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್) ಪ್ರಯಾಣ ಬೆಳೆಸಿದ್ದಾರೆ.
‘ಶುಭಾಂಶು ಶುಕ್ಲಾ ಅಲ್ಲದೆ, ಹಂಗರಿ ಮತ್ತು ಪೋಲೆಂಡ್‌ನ ಗಗನಯಾತ್ರಿಗಳಿರುವ ಗಗನನೌಕೆಯನ್ನು ಹೊತ್ತ ಸ್ಪೇಸ್‌ಎಕ್ಸ್‌ನ
‘ಫಾಲ್ಕನ್-9’ ರಾಕೆಟ್ ಫ್ಲಾರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ನಭಕ್ಕೆ ಚಿಮ್ಮಿದೆ.

LIVE: @Axiom_Space's #Ax4 mission, with crew from four different countries, is about to launch to the @Space_Station! Liftoff from @NASAKennedy is targeted for 2:31am ET (0631 UTC). https://t.co/yBgO8bxb6Z
— NASA (@NASA) June 25, 2025