ಬಾಂಗ್ಲಾ ಬಿಕ್ಕಟ್ಟು | ಭಾರತವು ಕಾದು ನೋಡುವ ತಂತ್ರ ಅನುಸರಿಸುತ್ತಿದೆ – ಸೇನೆಯು ಜಾಗರೂಕವಾಗಿದೆ; ಸರ್ವಪಕ್ಷ ಸಭೆಯಲ್ಲಿ ಎಸ್ ಜೈಶಂಕರ್ ಮಾಹಿತಿ

Date:

ಬಾಂಗ್ಲಾದೇಶದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಗಳಿಗೆ ನೀಡಿದ್ದ ಮೀಸಲಾತಿ ವಿರುದ್ದದ ಹೋರಾಟವು ಹಿಂಸಾಚಾರಕ್ಕೆ ತಿರುಗಿದೆ. ಅಲ್ಲಿನ ಪ್ರಧಾನಿ ಶೇಕ್ ಹಸೀನಾ ಅವರು ತಮ್ಮ ಹುದ್ದೆಗೆ ರಾಜೀನಾಮೆ ಕೊಟ್ಟು, ದೇಶ ತೊರೆದಿದ್ದಾರೆ. ಇದೀಗ, ಸೇನೆಯು ಬಾಂಗ್ಲಾ ಆಡಳಿತದ ಚುಕ್ಕಾಣಿಯನ್ನು ತನ್ನ ಸುಪರ್ದಿಗೆ ತೆಗೆದುಕೊಂಡಿದೆ. ಈ ನಡುವೆ, ಬಾಂಗ್ಲಾ ಬಿಕ್ಕಟ್ಟಿನ ಬಗ್ಗೆ ಭಾರತದಲ್ಲಿ ಕೇಂದ್ರ ಸರ್ಕಾರವು ಸರ್ವಪಕ್ಷಗಳ ಸಭೆ ನಡೆಸಿದೆ. ‘ಭಾರತವು ಕಾದು ನೋಡುವ ತಂತ್ರ ಅನುಸರಿಸುತ್ತಿದೆ. ಭಾರತೀಯ ಸೇನೆಯು ಜಾಗರೂಕವಾಗಿದೆ’ ಎಂದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.

- Advertisement -

ಬಾಂಗ್ಲಾದೇಶದ ಬೆಳವಣಿಗೆಯಲ್ಲಿ ಯಾವುದೇ ಹೊರಗಿನ ಶಕ್ತಿಗಳ ಪಾತ್ರವಿದೆಯೇ ಎಂಬುದರ ಬಗ್ಗೆ ಸರ್ಕಾರದ ಬಳಿ ಯಾವುದಾದರೂ ಮಾಹಿತಿ ಇದೆಯೇ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. ಅವರ ಪ್ರಶ್ನೆಗೆ ಉತ್ತರಿಸಿದ ಜೈಶಂಕರ್, “ಪಾಕಿಸ್ತಾನದ ರಾಜತಾಂತ್ರಿಕರು ಬದಲಾಗಿದ್ದು, ಬಾಂಗ್ಲಾ ದಂಗೆಗೆ ಅವರ ಬೆಂಬಲದ ಭಾಗವಾಗಿದೆ ಎಂಬ ಬಗ್ಗೆ ಮಾತ್ರವೇ ಸರ್ಕಾರದ ಬಳಿ ಮಾಹಿತಿ ಇದೆ” ಎಂದು ಹೇಳಿರುವುದಾಗಿ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಶೇಖ್ ಹಸೀನಾ ಅವರ ನಡೆಗಳು ಏನಾಗಿರಲಿವೆ ಎಂಬುದರ ಬಗ್ಗೆ ಭಾರತ ಸರ್ಕಾರದ ಗಮನಕ್ಕಿದೆಯೇ ಎಂದು ರಾಹುಲ್ ಪ್ರಶ್ನಿಸಿದ್ದು, “ಅವರೊಂದಿಗೆ ಸರ್ಕಾರವು ಮಾತುಕತೆ ನಡೆಸಿದೆ. ಆದರೆ, ಈ ಕ್ಷಣದಲ್ಲಿ ಅದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ” ಎಂದು ಜೈಶಂಕರ್ ಹೇಳಿದ್ದಾರೆ.

“ಭಾರತವು ಬಾಂಗ್ಲಾದೇಶ ಸೇನೆಯೊಂದಿಗೆ ಸಂಪರ್ಕದಲ್ಲಿದೆ. ಭಾರತೀಯ ಸೇನೆ ಕೂಡ ಜಾಗರೂಕವಾಗಿದೆ. ನಮ್ಮ ದೇಶದ ಸುರಕ್ಷತೆ ಮತ್ತು ಭದ್ರತೆಯನ್ನು ಖಾತ್ರಿಪಡಿಸುವ ಕೆಲಸ ನಡೆಯುತ್ತಿದೆ. ಪರಿಸ್ಥಿತಿ ಮತ್ತಷ್ಟು ಹದಗೆಟ್ಟರೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲು ಭಾರತ ಸಿದ್ಧವಾಗಿದೆ” ಎಂದು ಜೈಶಂಕರ್ ಹೇಳಿದ್ದಾರೆ.

ಪ್ರತಿಪಕ್ಷ ನಾಯಕರು ಸರ್ಕಾರದ ಜೊತೆ ನಿಲ್ಲುವುದಾಗಿ ಭರವಸೆ ನೀಡಿದ್ದಾರೆ. ಸಭೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಕೆ ಸಿ ವೇಣುಗೋಪಾಲ್,ಡಿಎಂಕೆ ಪಕ್ಷದ ಟಿ ಆರ್ ಬಾಲು, ಜೆಡಿಯು ನಾಯಕ ಲಲ್ಲನ್ ಸಿಂಗ್, ಸಮಾಜವಾದಿ ಪಕ್ಷದ ರಾಮ್ ಗೋಪಾಲ್ ಯಾದವ್, ತೃಣಮೂಲ ಕಾಂಗ್ರೆಸ್‌ನ ಸುದೀಪ್ ಬಂಡೋಪಾಧ್ಯಾಯ ಮತ್ತು ಆರ್‌ಜೆಡಿ ಮುಖಂಡ ಡೆರೆಕ್ ಒ’ಬ್ರಿಯಾನ್, ಶಿವಸೇನೆ (ಉದ್ದವ್ ಬಣ)ದ ಅರವಿಂದ್ ಸಾವಂತ್, ಬಿಜು ಜನತಾ ದಳದ ಸಸ್ಮಿತ್ ಪಾತ್ರ, ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎಸ್‌ಪಿ) ಸುಪ್ರಿಯಾ ಸುಳೆ ಮತ್ತು ಟಿಡಿಪಿ ನಾಯಕ ರಾಮ್ ಮೋಹನ್ ನಾಯ್ಡು ಸಭೆಯಲ್ಲಿ ಭಾಗವಹಿಸಿದ್ದರು. ಎಎಪಿ ನಾಯಕರನ್ನು ಸಭೆಗೆ ಆಹ್ವಾನಿಸಿರಲಿಲ್ಲ ಎಂದು ಹೇಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶರತ್ತುಗಳು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ತೆರೆಯುವುದಿಲ್ಲ: ಇರಾನ್ ಸ್ಪಷ್ಟನೆ

ತನ್ನ ಎಲ್ಲ ಶರತ್ತುಗಳು ಸಂಪೂರ್ಣವಾಗಿ ಈಡೇರುವವರೆಗೆ ಜಾಗತಿಕ ತೈಲ ಮತ್ತು ಅನಿಲ...

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...