ಬಾಂಗ್ಲಾ ಜೊತೆ ಭಾರತ ನಿಕಟ-ಸ್ನೇಹ ಸಂಬಂಧ ಬಯಸುತ್ತದೆ: ವಿದೇಶಾಂಗ ಸಚಿವಾಲಯ

Date:

ಭಾರತವು ಬಾಂಗ್ಲಾ ಜೊತೆಗೆ ಸ್ನೇಹ ಸಂಬಂಧ ಬಯಸುತ್ತದೆ. ಬಾಂಗ್ಲಾದೇಶದಲ್ಲಿ ಮುಕ್ತ, ನ್ಯಾಯಯುತ, ಎಲ್ಲರನ್ನೂ ಒಳಗೊಂಡ ಚುನಾವಣೆ ನಡೆಸಲು ಭಾರತವು ಬೆಂಬಲ ವ್ಯಕ್ತಪಡಿಸುತ್ತದೆ ಎಂದು ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

- Advertisement -

ಬಾಂಗ್ಲಾದೇಶವು ಕಳೆದ ಒಂದು ವರ್ಷದಿಂದ ಉದ್ವಿಗ್ನತೆಯಲ್ಲಿದೆ. ಪದೇ-ಪದೇ ಹಿಂಸಾಚಾರ ನಡೆಯುತ್ತಿದೆ. ಭಾರತದಲ್ಲಿ ರಕ್ಷಣೆ ಪಡೆದಿರುವ ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಹಸ್ತಾಂತರಕ್ಕೆ ಬಾಂಗ್ಲಾದೇಶ ಒತ್ತಾಯಿಸಿದೆ. ಶೇಖ್ ಹಸೀನಾ ಅವರ ಅವಾಮಿ ಲೀಗ್ ಪಕ್ಷವನ್ನು ನಿಷೇಧಿಸಲಾಗಿದೆ. 17 ವರ್ಷಗಳ ನಂತರ ಬಿಎನ್‌ಪಿ ನಾಯಕ ತಾರಿಕ್ ರೆಹಮಾನ್ ಢಾಕಾಗೆ ಮರಳಿದ್ದಾರೆ. ಇದೆಲ್ಲವೂ ಬಾಂಗ್ಲಾ ರಾಜಕೀಯದಲ್ಲಿ ಭಾರೀ ತಲ್ಲಣ ಉಂಟುಮಾಡಿದೆ. ಇದೆಲ್ಲದರ ನಡುವೆ ಬಾಂಗ್ಲಾ ಜೊತೆಗಿನ ಸಂಬಂಧದ ಬಗ್ಗೆ ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಮಾತನಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ‌ ಅವರು, “ಬಾಂಗ್ಲಾದೇಶದ ಪ್ರಸ್ತುತ ರಾಜಕೀಯ ಪರಿಸ್ಥಿತಿಯ ಸಂದರ್ಭದಲ್ಲಿ, ನಾವು ಬಾಂಗ್ಲಾದೇಶದಲ್ಲಿ ಶಾಂತಿ ಮತ್ತು ಸ್ಥಿರತೆ ಕಾಪಾಡಲು ಬಯಸುತ್ತೇವೆ. ಬಾಂಗ್ಲಾದೇಶದಲ್ಲಿ ಮುಕ್ತ, ನ್ಯಾಯಯುತ ಮತ್ತು ಎಲ್ಲರೂ ಸಕ್ರಿಯವಾಗಿ ತೊಡಗಿಸಿಕೊಳ್ಳುವಿಕೆಯ ಚುನಾವಣೆಗಳನ್ನು ನಾವು ಬೆಂಬಲಿಸುತ್ತೇವೆ. ಇದೇ ಸಂಧರ್ಭದಲ್ಲಿ ಲಂಡನ್‌ನಿಂದ ಬಿಎನ್‌ಪಿ ನಾಯಕನ ಮರಳುವಿಕೆಯನ್ನು ಗಮನಿಸಬೇಕಿದೆ” ಎಂದಿದ್ದಾರೆ.

“ಮೊಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರದ ಅಡಿಯಲ್ಲಿ ಬಾಂಗ್ಲಾದಲ್ಲಿ ಭಾರತದ ವಿಚಾರವಾಗಿ ಉದ್ವಿಗ್ನತೆ ವಾತಾವರಣ ಸೃಷ್ಟಿಯಾಗಿದೆ. ಇದರ ಹೊರತಾಗಿಯೂ, ಬಾಂಗ್ಲಾದೇಶದೊಂದಿಗೆ ಭಾರತದ ಸಾಲ ಮತ್ತು ಅಭಿವೃದ್ಧಿ ಸಹಕಾರವು ಮುಂದುವರಿಯುತ್ತದೆ” ಎಂದಿದ್ದಾರೆ.

“ನಾವು ಬಾಂಗ್ಲಾದೇಶದ ಜನರೊಂದಿಗೆ ಬಲವಾದ ಸಂಬಂಧಗಳನ್ನು ಹೊಂದಲು ಮತ್ತು ಮುಂದುವರೆಸಲು ಬಯಸುತ್ತೇವೆ” ಎಂದು ಹೇಳಿದ್ದಾರೆ.

“ಹಸೀನಾ ಅವರನ್ನು ಹಸ್ತಾಂತರಿಸುವಂತೆ ಕೋರಿ ಮಧ್ಯಂತರ ಸರ್ಕಾರ ಭಾರತಕ್ಕೆ ಪತ್ರ ಬರೆದಾಗಿನಿಂದ, ಭಾರತ ಅದನ್ನು ಪರಿಶೀಲಿಸುತ್ತಿದೆ. ನಾವು ಶಾಂತಿ ಮತ್ತು ಸ್ಥಿರತೆ ಪರ ನಿಲ್ಲುತ್ತೇವೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

4 ವರ್ಷಗಳಲ್ಲಿ 111 ಸಂಸದರು, ಶಾಸಕರ ಪಕ್ಷಾಂತರ: ಶೇ. 26ರಷ್ಟು ನಾಯಕರನ್ನು ಸೇರಿಸಿಕೊಂಡ ಬಿಜೆಪಿ!

ದೇಶದ ರಾಜಕೀಯ ಕ್ಷೇತ್ರದಲ್ಲಿ ಜನಪ್ರತಿನಿಧಿಗಳ ಪಕ್ಷಾಂತರ ಪರ್ವ ತಡೆಯಿಲ್ಲದೆ ಮುಂದುವರಿದಿದೆ. ಅದರಲ್ಲೂ...

ಮಳೆ ಅಬ್ಬರ: ಉತ್ತರ ಪ್ರದೇಶದಲ್ಲಿ 10 ಮಂದಿ ಸಾವು; ಒಡಿಶಾದಲ್ಲಿ ಪ್ರವಾಹ

ದೇಶದ ಹಲವು ರಾಜ್ಯಗಳಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಉತ್ತರ ಪ್ರದೇಶ...

26 ಬಾರಿ ಸೋತರೂ ಕುಗ್ಗದ ಛಲ; 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕ ಹುದ್ದೆ ಪಡೆದ ವೃದ್ಧ

ಸರಿಯಾದ ಪ್ರಯತ್ನ ಮತ್ತು ಛಲವಿದ್ದರೆ ವಯಸ್ಸು ಕೇವಲ ಒಂದು ಸಂಖ್ಯೆಯಷ್ಟೇ ಎಂಬುದನ್ನು...

1,870 ಕೋಟಿ ರೂ. ದೇಣಿಗೆ ದಂಧೆ ಆರೋಪ: ಗುಜರಾತ್‌ನ 3 ರಾಜಕೀಯ ಪಕ್ಷಗಳ ಅಕ್ರಮ ಬಯಲು

ಗುಜರಾತ್‌ನಲ್ಲಿ ನೋಂದಾಯಿತವಾಗಿದ್ದ, ಆದರೆ ಮಾನ್ಯತೆ ಪಡೆಯದ ಮೂರು ರಾಜಕೀಯ ಪಕ್ಷಗಳು ಆದಾಯ...