‘ಇಸ್ಕಾನ್’ ನಿಷೇಧಕ್ಕೆ ಬಾಂಗ್ಲಾ ಹೈಕೋರ್ಟ್‌ ನಕಾರ

Date:

Advertisements

ಬಾಂಗ್ಲಾದೇಶದಲ್ಲಿ ‘ಇಂಟರ್ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್ಶಿಯಸ್ನೆಸ್’ (ಇಸ್ಕಾನ್)ನ ಚಟುವಟಿಕೆಗಳನ್ನು ನಿಷೇಧಿಸಲು ಬಾಂಗ್ಲಾ ಹೈಕೋರ್ಟ್ ನಿರಾಕರಿಸಿದೆ. ಇಸ್ಕಾನ್‌ನ ಇತ್ತೀಚಿನ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಸರ್ಕಾರವು ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿ ಒದಗಿಸುವಂತೆ ನ್ಯಾಯಾಲಯವು ಅಟಾರ್ನಿ ಜನರಲ್‌ಗೆ ಸೂಚನೆ ನೀಡಿದೆ.

ಇತ್ತೀಚೆಗೆ, ದೇಶದ್ರೋಹದ ಆರೋಪದ ಮೇಲೆ ಹಿಂದು ಸಂಘಟನೆಯ ಮುಖಂಡ ಚಿನ್ಮೋಯ್ ಕೃಷ್ಣ ದಾಸ್ ಎಂಬಾತನನ್ನು ಬಂಧಿಸಲಾಗಿತ್ತು. ಆತನನ್ನು ಈ ಹಿಂದೆ ಇಸ್ಕಾನ್‌ನಿಂದ ಹೊರಹಾಕಲಾಗಿತ್ತು. ಆತನನ್ನು ಬಂಧಿಸಿದ ಕಾರಣಕ್ಕೆ ಆತನ ಬೆಂಬಲಿಗರು ಮತ್ತು ಭದ್ರತಾ ಸಿಬ್ಬಂದಿಗಳ ನಡುವೆ ಘರ್ಷಣೆ ನಡೆದು, ವಕೀಲರೊಬ್ಬರು ಸಾವನ್ನಪ್ಪಿದ್ದರು. ಘರ್ಷಣೆ ನಡೆಸಿದ ಸಂಘಟನೆಗೆ ಇಸ್ಕಾನ್‌ ಜೊತೆ ನೇರ ಸಂಬಂಧವಿದ್ದು, ಇಸ್ಕಾನ್‌ಅನ್ನು ದೇಶದಲ್ಲಿ ನಿಷೇಧಿಸಬೇಕೆಂದು ಕೆಲ ವಕೀಲರು ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದರು.

ಗುರುವಾರ ಹೈಕೋರ್ಟ್ ಕಲಾಪ ಆರಂಭವಾದಾಗ, ಅಟಾರ್ನಿ ಜನರಲ್ ಕಚೇರಿಯು, “ವಕೀಲ ಸೈಫುಲ್ ಇಸ್ಲಾಂ ಅಲಿಫ್ ಹತ್ಯೆ ಮತ್ತು ಇಸ್ಕಾನ್ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಪ್ರಕರಣಗಳಲ್ಲಿ 33 ಆರೋಪಿಗಳನ್ನು ಬಂಧಿಸಲಾಗಿದೆ” ಎಂದು ನ್ಯಾಯಾಲಯಕ್ಕೆ ತಿಳಿಸಿದೆ.

Advertisements

“ಇಸ್ಕಾನ್‌ಅನ್ನು ನಿಷೇಧಿಸಲು ಸಾಧ್ಯವಿಲ್ಲ. ನಿಷೇಧದ ಕ್ರಮ ತೆಗೆದುಕೊಳ್ಳಲು ಅಂತಹ ಯಾವುದೇ ಪುರಾವೆಗಳಿಲ್ಲ. ಆದಾಗ್ಯೂ, ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಬಾಂಗ್ಲಾದೇಶದ ಜನ ಜೀವನ ಮತ್ತು ಆಸ್ತಿಯನ್ನು ರಕ್ಷಿಸುವ ಬಗ್ಗೆ ಸರ್ಕಾರವು ಜಾಗರೂಕರಾಗಿರಬೇಕು. ಹಿಂದು ಸೇರಿದಂತೆ ಇತರ ಎಲ್ಲ ಅಲ್ಪಸಂಖ್ಯಾತ ಸಮುದಾಯಗಳ ಸುರಕ್ಷತೆ ಮತ್ತು ಭದ್ರತೆಯನ್ನು ಸರ್ಕಾರವು ಖಾತ್ರಿಪಡಿಸಬೇಕು” ಎಂದು ಹೈಕೋರ್ಟ್‌ ಹೇಳಿದೆ.

ಈ ನಡುವೆ, ಸುಪ್ರೀಂ ಕೋರ್ಟ್ ವಕೀಲರ ಸಂಘವು ಬುಧವಾರ ಬಾಂಗ್ಲಾ ಸರ್ಕಾರಕ್ಕೆ ಲೀಗಲ್‌ ನೋಟಿಸ್ ಕಳುಹಿಸಿದೆ. “ಇಸ್ಕಾನ್ಅನ್ನು ‘ತೀವ್ರಗಾಮಿ ಸಂಘಟನೆ’ ಎಂದು ಘೋಷಿಸಿ, ನಿಷೇಧಿಸಬೇಕು” ಎಂದು ಒತ್ತಾಯಿಸಿದೆ.

“ಇಸ್ಕಾನ್ ಬಾಂಗ್ಲಾದೇಶದಲ್ಲಿ ತೀವ್ರಗಾಮಿ ಸಂಘಟನೆಯಾಗಿ ಕಾರ್ಯನಿರ್ವಹಿಸುತ್ತಿದೆ. ಕೋಮುಗಲಭೆಯನ್ನು ಪ್ರಚೋದಿಸುವ ತಂತ್ರಗಳನ್ನು ಎಣೆಯುವ ಚಟುವಟಿಕೆಗಳಲ್ಲಿ ತೊಡಗಿದೆ. ಪಂಥೀಯ ಹಿಂಸಾಚಾರವನ್ನು ಪ್ರಚೋದಿಸುವ ಉದ್ದೇಶದಿಂದ ಸಾಂಪ್ರದಾಯಿಕ ಹಿಂದು ಸಮುದಾಯಗಳ ಮೇಲೆ ತನ್ನ ನಂಬಿಕೆಗಳನ್ನು ಹೇರುವ ಕೆಲಸ ಮಾಡುತ್ತಿದೆ” ಎಂದು ನೋಟಿಸ್‌ನಲ್ಲಿ ಆರೋಪಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌...

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

ಗಾಝಾದಲ್ಲಿ ಇಸ್ರೇಲ್ ದಾಳಿ: ಐವರು ಅಲ್‌ಜಝೀರಾ ಪತ್ರಕರ್ತರು ಹತ

ಭಾನುವಾರ ಗಾಝಾ ನಗರದಲ್ಲಿ ಅಲ್‌ಜಝೀರಾ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ...

Download Eedina App Android / iOS

X