ಭಾರತದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಾಂಗ್ಲಾದೇಶದ ಇಬ್ಬರು ರಾಜತಾಂತ್ರಿಕರನ್ನು ಕರ್ತವ್ಯದಿಂದ ವಜಾಗೊಳಿಸಿ ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಆದೇಶ ಹೊರಡಿಸಿರುವುದಾಗಿ ವರದಿ ತಿಳಿಸಿದೆ.
ನವದೆಹಲಿಯಲ್ಲಿರುವ ಬಾಂಗ್ಲಾದೇಶ ಹೈ ಕಮಿಷನ್‌ನಲ್ಲಿ ಮಾಧ್ಯಮ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಷಾಬಾನ್ ಮಹಮದ್ ಹಾಗೂ ಕೋಲ್ಕತಾದಲ್ಲಿರುವ ಬಾಂಗ್ಲಾದೇಶ ಕಾನ್ಸುಲೇಟ್‌ನಲ್ಲಿ ಮಾಧ್ಯಮ ಕಾರ್ಯದರ್ಶಿಯಾಗಿದ್ದ ರಂಜನ್ ಸೇನ್ ಅವರನ್ನು ಕರ್ತವ್ಯದಿಂದ ವಜಾಗೊಳಿಸಿರುವುದಾಗಿ ಬಾಂಗ್ಲಾದೇಶ ಮಧ್ಯಂತರ ಸರ್ಕಾರ ಆದೇಶ ಹೊರಡಿಸಿದೆ.
ದೇಶದಲ್ಲಿ ನಡೆದ ಭಾರೀ ಪ್ರತಿಭಟನೆ ನಂತರ ಪ್ರಧಾನಮಂತ್ರಿ ಶೇಕ್ ಹಸೀನಾ ಪದಚ್ಯುತಗೊಂಡ ಬಳಿಕ ಹಿಂಸಾಚಾರ ನಡೆದಿತ್ತು. ರಾಜಕೀಯದ ಬೆಳವಣಿಗೆಯಲ್ಲಿ ನೋಬೆಲ್ ಪ್ರಶಸ್ತಿ ಪುರಸ್ಕೃತ ಮೊಹಮ್ಮದ್ ಯೂನುಸ್ ನೇತೃತ್ವದಲ್ಲಿ ಮಧ್ಯಂತರ ಸರ್ಕಾರ ರಚನೆಯಾಗಿತ್ತು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾನವ ಘನತೆಗಾಗಿ ಹೋರಾಟ – ಕನ್ನಡ ತಮಿಳು ಎಂಬ ಗಡಿಗೆರೆಗಳು ಸಲ್ಲದು
ರಾಜಧಾನಿ ಢಾಕಾದಲ್ಲಿ ಲಕ್ಷಾಂತರ ಜನರು ಬೀದಿಗಿಳಿದು ಹಿಂಸಾಚಾರದಲ್ಲಿ ತೊಡಗಿದ ಪರಿಣಾಮ ಆಗಸ್ಟ್ 5ರಂದು ಶೇಖ್ ಹಸೀನಾ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ, ಭಾರತದಲ್ಲಿ ಆಶ್ರಯ ಪಡೆದಿದ್ದಾರೆ.
ಹಿಂಸಾಚಾರದಲ್ಲಿ 450ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದು, ಸಾವಿರಾರು ಜನರು ಗಾಯಗೊಂಡಿದ್ದರು.ಮಾನವ ಹಕ್ಕುಗಳ ಉಲ್ಲಂಘನೆಯ ಆರೋಪ ಎದುರಿಸುತ್ತಿರುವ ಶೇಖ್ ಹಸೀನಾ ಅವರ 15 ವರ್ಷದ ಆಡಳಿತ ಕೊನೆಗೊಂಡಿತ್ತು.
