‘ಬಾಂಗ್ಲಾ ಜನರ ಹಿತಾಸಕ್ತಿಗೆ ಮೊದಲ ಆದ್ಯತೆ’; ಏಕತೆಗೆ ಕರೆಕೊಟ್ಟ ಬಿಎನ್‌ಪಿ ನಾಯಕ

Date:

ಬಾಂಗ್ಲಾದೇಶ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷ (ಬಿಎನ್‌ಪಿ) ಭರ್ಜರಿ ಗೆಲುವು ಸಾಧಿಸಿದೆ. ಪಕ್ಷದ ಅಧ್ಯಕ್ಷ ತಾರೀಖ್ ರೆಹಮಾನ್ ಅವರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿದ್ದಾರೆ. ಅವರು ಬಾಂಗ್ಲಾದೇಶದ ಜನರ ಹಿತಾಸಕ್ತಿಯೇ ತಮಗೆ ಆದ್ಯತೆಯೆಂದು ಹೇಳಿಕೊಂಡಿದ್ದು, ದೇಶದಲ್ಲಿನ ಏಕತೆಗೆ ಕರೆಕೊಟ್ಟಿದ್ದಾರೆ.

- Advertisement -

ಶನಿವಾರ, ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ರೆಹಮಾನ್, “ಬಾಂಗ್ಲಾದೇಶದ ಹಿತಾಸಕ್ತಿಗಾಗಿ ದೇಶದ ಎಲ್ಲ ಪ್ರಜೆಗಳು ಒಗ್ಗಟ್ಟಿನಿಂದ ಇರಬೇಕು” ಎಂದಿದ್ದಾರೆ. ತಮ್ಮ ಪಕ್ಷದ ಗೆಲುವನ್ನು ‘ಪ್ರಜಾಪ್ರಭುತ್ವಕ್ಕಾಗಿ ಬಲಿದಾನ ಮಾಡಿದ ಜನರಿಗೆ’ ಅರ್ಪಿಸುತ್ತೇವೆ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

“ದೇಶದಲ್ಲಿ ಪ್ರಜಾಪ್ರಭುತ್ವ ಸ್ಥಾಪನೆಗೆ ನಾವು ದಾರಿ ಮಾಡಿಕೊಟ್ಟಿದ್ದೇವೆ. ಸರ್ವಾಧಿಕಾರಿ ಆಡಳಿತದಿಂದ ಎದುರಾಗಿರುವ ದುರ್ಬಲ ಆರ್ಥಿಕತೆ, ಸಾಂವಿಧಾನಿಕ ಮತ್ತು ರಚನಾತ್ಮಕ ಸಂಸ್ಥೆಗಳ ದುರ್ಬಲತೆ, ಕಾನೂನು ಮತ್ತು ಸುವ್ಯವಸ್ಥೆಯಲ್ಲಿನ ತೊಡಕುಗಳನ್ನು ನಿವಾರಿಸುವ ಪ್ರಯಾಣವನ್ನು ನಾವು ಆರಂಭಿಸಲಿದ್ದೇವೆ” ಎಂದು ಹೇಳಿದ್ದಾರೆ.

ಭಾರತದೊಂದಿಗಿನ ಸಂಬಂಧಗಳ ಕುರಿತು ಮಾತನಾಡಿದ ರೆಹಮಾನ್, “ವಿದೇಶಾಂಗ ನೀತಿಯ ಬಗ್ಗೆ ನಾವು ಸ್ಪಷ್ಟವಾಗಿದ್ದೇವೆ. ವಿದೇಶಾಂಗ ನೀತಿಯಲ್ಲಿ ಬಾಂಗ್ಲಾದೇಶ ಮತ್ತು ಬಾಂಗ್ಲಾದೇಶದ ಜನರ ಹಿತಾಸಕ್ತಿಗೆ ಮೊದಲ ಆದ್ಯತೆಯಾಗಿರಲಿದೆ. ಈ ಅದ್ಯತೆಯ ಆಧಾರದಲ್ಲಿಯೇ ವಿದೇಶಾಂಗ ನೀತಿಗಳು ಇರುತ್ತವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...

ಯುದ್ಧದ ಕರಾಳ ನೆರಳು: ರಷ್ಯಾ ಕನಸು ನಚ್ಚುನೂರಾಗಿ ಉಕ್ರೇನ್‌ನಲ್ಲಿ ಬಂಧಿಯಾದ ಭಾರತೀಯ ಯುವಕ!

ಉತ್ತಮ ಜೀವನ ರೂಪಿಸಿಕೊಳ್ಳಬೇಕು, ದೇಶ ವಿದೇಶ ಸುತ್ತಿ ಆರ್ಥಿಕವಾಗಿ ಕುಟುಂಬವನ್ನು ಬೆಂಬಲಿಸಬೇಕು...