ಬಾಂಗ್ಲಾದೇಶ ವಿಮಾನ ದುರಂತ; ಮೃತರ ಸಂಖ್ಯೆ 25ಕ್ಕೆ ಏರಿಕೆ

Date:

ಬಾಂಗ್ಲಾದೇಶದ ರಾಜಧಾನಿ ಢಾಕಾದ ಮೈಲ್ಸ್ಟೋನ್ ಸ್ಕೂಲ್ ಅಂಡ್ ಕಾಲೇಜ್ ಕ್ಯಾಂಪಸ್‌ನಲ್ಲಿ ಸೋಮವಾರ ಬಾಂಗ್ಲಾದೇಶ ವಾಯುಪಡೆಯ ಯುದ್ಧವಿಮಾನ ಪತನಗೊಂಡು ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.

- Advertisement -

ಆರಂಭದಲ್ಲಿ ಸಾವಿನ ಸಂಖ್ಯೆ 20 ಎಂದು ಪ್ರಕಟಿಸಲಾಗಿತ್ತು, ಆದರೆ ವೈದ್ಯರ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಮಾಡಿರುವ ಸುದ್ದಿಸಂಸ್ಥೆಗಳು, ಸಾವಿನ ಸಂಖ್ಯೆ 25 ಎಂದು ಹೇಳಿದೆ. ಒಟ್ಟು 171 ಮಂದಿ ಗಾಯಗೊಂಡಿದ್ದು, ಈ ಪೈಕಿ ಬಹುತೇಕ 8 ರಿಂದ 14 ವರ್ಷ ವಯಸ್ಸಿನ ವಿದ್ಯಾರ್ಥಿಗಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನು ಓದಿದ್ದೀರಾ? ಸಿರಿಯಾದ ಡಮಾಸ್ಕಸ್‌ ಮೇಲೆ ಇಸ್ರೇಲ್ ದಾಳಿ ಮಾಡಿದ್ದರೂ, ಅದರ ನಿಜವಾದ ಗುರಿ ಟರ್ಕಿ!

ಚೀನಾ ನಿರ್ಮಿತ ಎಫ್-7 ಬಿಜೆಐ ವಿಮಾನದ ಪೈಲಟ್ ಕೂಡಾ ದುರಂತದಲ್ಲಿ ಮೃತಪಟ್ಟಿದ್ದಾಗಿ ಬಾಂಗ್ಲಾದೇಶದ ಸೇನೆ ಪ್ರಕಟಿಸಿದೆ. ಯಾಂತ್ರಿಕ ವೈಫಲ್ಯದಿಂದ ಈ ದುರಂತ ಸಂಭವಿಸಿದೆ. ನಿಖರವಾದ ಕಾರಣ ತಿಳಿಯುವ ನಿಟ್ಟಿನಲ್ಲಿ ತನಿಖೆ ಮುಂದುವರಿದಿದೆ ಎಂದು ಸ್ಪಷ್ಟಪಡಿಸಿದೆ.

ಘಟನೆ ಹಿನ್ನೆಲೆಯಲ್ಲಿ ಬಾಂಗ್ಲಾದೇಶದಲ್ಲಿ ಮಂಗಳವಾರ ರಾಷ್ಟ್ರೀಯ ಶೋಕಾಚರಣೆಗೆ ಬಾಂಗ್ಲಾದೇಶದ ಹಂಗಾಮಿ ನಾಯಕ ಮುಹಮದ್ ಯೂನುಸ್ ಕರೆ ನೀಡಿದ್ದಾರೆ. 1984ರಲ್ಲಿ ಚಿತ್ತೋಗ್ರಾಮ್ ನಿಂದ ಢಾಕಾಗೆ ತೆರಳುತ್ತಿದ್ದ ವಿಮಾನ ಮಳೆ ಹಾಗೂ ಗಾಳಿಯ ವೇಳೆ ಅಪಘಾತಕ್ಕೀಡಾಗಿ 49 ಮಂದಿ ಮೃತಪಟ್ಟ ಘಟನೆ ಹೊರತುಪಡಿಸಿದರೆ, ದೇಶದ ಇತಿಹಾಸದಲ್ಲೇ ಇದು ದೊಡ್ಡ ವಿಮಾನ ದುರಂತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕದಲ್ಲಿ ಓದಿದರೂ ಭಾರತೀಯರಿಗೆ ಉದ್ಯೋಗ ಅಸಾಧ್ಯ; ಒಪಿಟಿ ಶುಲ್ಕ 60 ಲಕ್ಷ ರೂ. ಏರಿಸಲು ಟ್ರಂಪ್ ಸರ್ಕಾರ ಚಿಂತನೆ

ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳುವ ಭಾರತೀಯ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಭಾರೀ...

‘8 ಯುದ್ಧಗಳನ್ನು ನಿಲ್ಲಿಸಿದ್ದೇನೆ, ನನಗೇ ನೊಬೆಲ್ ಕೊಡಿ’: ಟ್ರಂಪ್ ಮತ್ತೆ ಪಟ್ಟು

ನಾರ್ವೇಜಿಯನ್ ನೊಬೆಲ್ ಸಮಿತಿಯು ಈ ಸಾಲಿನ ಪ್ರತಿಷ್ಠಿತ ‘ನೊಬೆಲ್ ಶಾಂತಿ ಪ್ರಶಸ್ತಿ’ಯನ್ನು...

ಗಾಜಾ ನರಮೇಧ : ಪ್ಯಾಲೆಸ್ತೀನಿಯನ್ ಪಟ್ಟಣಗಳ ನಾಶವನ್ನು ತೋರಿಸುವ ಉಪಗ್ರಹಚಿತ್ರಗಳು

ಜೆರುಸಲೇಮ್: ಕಳೆದ ವರ್ಷ ಇಸ್ರೇಲ್–ಹಮಾಸ್ ಕದನ ವಿರಾಮ ಒಪ್ಪಂದ ಜಾರಿಯಾದ ಬಳಿಕವೂ...

ಅಮೆಜಾನ್‌ನಲ್ಲಿ ಮತ್ತೆ ಉದ್ಯೋಗ ಕಡಿತ ; ಭಾರತದ ಉದ್ಯೋಗಿಗಳಿಗೂ ತಟ್ಟಿದ ಪರಿಣಾಮ

ದೆಹಲಿ/ವಾಷಿಂಗ್ಟನ್‌ ಡಿಸಿ : ಇ-ಕಾಮರ್ಸ್ ದೈತ್ಯ ಅಮೆಜಾನ್ ಮತ್ತೊಮ್ಮೆ ಉದ್ಯೋಗ ಕಡಿತದ...