ಬಾಂಗ್ಲಾದೇಶ ಹಿಂಸಾಚಾರ | ಮನೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: 7 ವರ್ಷದ ಮಗು ಸಜೀವ ದಹನ

Date:

ಬಾಂಗ್ಲಾದೇಶದಲ್ಲಿ ಹಿಂಸಾಚಾರ ಹೆಚ್ಚುತ್ತಿರುವ ನಡುವೆ, ಶನಿವಾರ ಲಕ್ಷ್ಮಿಪುರ ಸದರ್ ಉಪಜಿಲ್ಲೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್‌ಪಿ) ನಾಯಕನ ಮನೆಗೆ ಹೊರಗಿನಿಂದ ಬೀಗ ಹಾಕಿ ಬೆಂಕಿ ಹಚ್ಚಿದ್ದು ಏಳು ವರ್ಷದ ಹೆಣ್ಣು ಮಗು ಸಾವನ್ನಪ್ಪಿದ್ದು, ಮನೆಯಲ್ಲಿದ್ದ ಇತರ ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ.

- Advertisement -

ಭಬಾನಿಗಂಜ್‌ನ ಉದ್ಯಮಿ ಮತ್ತು ಬಿಎನ್‌ಪಿ ಸಂಘಟನಾ ಕಾರ್ಯದರ್ಶಿ ಬೆಲಾಲ್ ಹೊಸೈನ್ ಅವರ ನಿವಾಸದಲ್ಲಿ ಶನಿವಾರ ಮುಂಜಾನೆ ದಾಳಿ ನಡೆದಿದೆ. ಅವರ ಮಗಳು ಆಯೇಷಾ ಅಕ್ತರ್(7) ಮೃತಪಟ್ಟಿರುವುದಾಗಿ ಪೊಲೀಸರು ಧೃಡಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಲಾಲ್ ಅವರ ಉಳಿದ ಇಬ್ಬರು ಮಕ್ಕಳಾದ ಸಲ್ಮಾ ಅಕ್ತರ್ ಮತ್ತು ಸಮಿಯಾ ಅಕ್ತರ್ ತೀವ್ರ ಗಾಯಗೊಂಡಿದ್ದಾರೆ. ಬೆಂಕಿಯ ದಾಳಿಗೆ ಅವರ ಮೈಕೈ ಎಲ್ಲಾ ಸುಟ್ಟು ಹೋಗಿದೆ. ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಹೆಚ್ಚಿನ ಚಿಕಿತ್ಸೆಗಾಗಿ ಢಾಕಾಗೆ ಕಳುಹಿಸಲಾಗಿದೆ.

ಇದನ್ನೂ ಓದಿ : ಜನಸಾಮಾನ್ಯರ ನಾಯಕ ಷರೀಫ್ ಒಸ್ಮಾನ್ ಹಾದಿ ನಿರ್ಗಮನ

ಬೇಲಾಲ್ ಅವರ ತಾಯಿ ಹಜೇರಾ ಬೇಗಂ ಮಾತನಾಡಿ, ದುಷ್ಕರ್ಮಿಗಳು ಎರಡೂ ಬಾಗಿಲುಗಳನ್ನು ಲಾಕ್ ಮಾಡಿ ಪೆಟ್ರೋಲ್ ಸುರಿದು ಮನೆಗೆ ಬೆಂಕಿ ಹಚ್ಚಿದರು. “ನಾನು ಊಟದ ನಂತರ ಮಲಗಿದ್ದೆ. ಬೆಳಗಿನ ಜಾವ 1:00 ಗಂಟೆ ಸುಮಾರಿಗೆ, ನಾನು ಎಚ್ಚರಗೊಂಡು ಕಿಟಕಿಯ ಮೂಲಕ ನೋಡಿದಾಗ ನನ್ನ ಮಗನ ಮನೆ ಬೆಂಕಿಯಲ್ಲಿ ಹೊತ್ತಿಕೊಂಡಿರುವುದನ್ನು ನೋಡಿದೆ.

“ನಾನು ಕಿರುಚುತ್ತಾ ಹೊರಗೆ ಓಡಿಹೋದೆ. ಆದರೆ ನಮ್ಮ ಮನೆಯ ಎರಡೂ ಬಾಗಿಲುಗಳು ಹೊರಗಿನಿಂದ ಲಾಕ್ ಆಗಿರುವುದನ್ನು ಕಂಡೆ. ನನಗೆ ಹೊರಗೆ ಹೋಗಲು ಸಾಧ್ಯವಾಗಲಿಲ್ಲ. ಕೊನೆಗೆ ನನ್ನ ಮಗ ಬಾಗಿಲು ಮುರಿದು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದ. ಅವನ ಹೆಂಡತಿ ನಜ್ಮಾ ಕೂಡ ತಮ್ಮ ನಾಲ್ಕು ತಿಂಗಳ ಮಗು ಅಬೀರ್ ಹೊಸೈನ್ ಮತ್ತು ಆರು ವರ್ಷದ ಮಗ ಹಬೀಬ್ ಜೊತೆ ಹೊರಬರುವಲ್ಲಿ ಯಶಸ್ವಿಯಾದಳು,” ಎಂದು ಅವರು ಹೇಳಿದರು.

“ನನ್ನ ಮೊಮ್ಮಗಳು, ಸಲ್ಮಾ, ಸಾಮಿಯಾ ಮತ್ತು ಆಯೇಷಾ ಒಂದು ಕೋಣೆಯಲ್ಲಿ ಮಲಗಿದ್ದರು. ಅವರಲ್ಲಿ ಇಬ್ಬರು ತೀವ್ರ ಸುಟ್ಟಗಾಯಗಳಿಂದ ರಕ್ಷಿಸಲ್ಪಟ್ಟರು, ಆದರೆ ಕಿರಿಯ ಹುಡುಗಿ (ಆಯೇಷಾ) ಒಳಗೆ ಸುಟ್ಟು ಕರಕಲಾಗಿದ್ದಳು” ಎಂದು ಅವರು ದುಖಃದಿಂದ ಹೇಳಿದರು.

ಲಕ್ಷ್ಮಿಪುರ ಜಿಲ್ಲಾ ಬಿಎನ್‌ಪಿಯ ಸಂಚಾಲಕರಾದ ಹಸಿಬುರ್ ರೆಹಮಾನ್ ಈ ಘಟನೆಯನ್ನು ಖಂಡಿಸಿದರು. ಅಪರಾಧಿಗಳನ್ನು ಪತ್ತೆಹಚ್ಚಿ ಶಿಕ್ಷೆ ಕೊಡಬೇಕು ಎಂದು ಆಗ್ರಹ ಮಾಡಿದರು.

ಬಾಂಗ್ಲಾದೇಶದ ಯುವನಾಯಕ ಹಾದಿ ಅವರ ಹತ್ಯೆಯ ನಂತರ ಇಡೀ ಬಾಂಗ್ಲಾದೇಶವೇ ಹೊತ್ತಿ ಉರಿಯುತ್ತಿದೆ. ಮೊಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರದ ಅಡಿಯಲ್ಲಿ ಬಾಂಗ್ಲಾದೇಶದಾದ್ಯಂತ ಹೆಚ್ಚುತ್ತಿರುವ ಹಿಂಸಾಚಾರ ಮತ್ತು ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವ ಮಧ್ಯೆ ಈ ಘಟನೆ ದುರ್ಘಟನೆ ನಡೆದಿದೆ.

Manoj
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಳುಗುತ್ತಿರುವ ಬ್ಯಾಂಕಾಕ್: 50 ಜಿಲ್ಲೆಗಳಲ್ಲಿ ‘ವಿಪತ್ತು’ ಘೋಷಣೆ, ಸ್ತಬ್ಧಗೊಂಡ ಜನಜೀವನ

ಸತತ ಮಳೆಯಿಂದಾಗಿ ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್ ಅಕ್ಷರಶಃ ಜಲಾವೃತಗೊಂಡಿದ್ದು, ನಗರದ ಎಲ್ಲಾ...

ವಿಶ್ವಸಂಸ್ಥೆಯಲ್ಲಿ ನೆತನ್ಯಾಹು ಭಾಷಣಕ್ಕೆ ಜಾಗತಿಕ ಬಹಿಷ್ಕಾರ: ಖುರ್ಚಿಗೆ ಅಂಟಿಕೊಂಡ ಭಾರತದ ಧೋರಣೆಗೆ ಖಂಡನೆ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (UNGA) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾಷಣ...

CNN, MS NOW, Politicoಗೆ ಶ್ವೇತಭವನ ಪ್ರವೇಶ ನಿರ್ಬಂಧ; ಟ್ರಂಪ್ ಆದೇಶಕ್ಕೆ ಫೆಡರಲ್ ಕೋರ್ಟ್ ತಡೆ

CNN, MS NOW ಮತ್ತು Politico ಸುದ್ದಿ‌ ಸಂಸ್ಥೆಗಳ ಪತ್ರಕರ್ತರಿಗೆ ಶ್ವೇತಭವನ...

ಸೂಚನೆಯಿಲ್ಲದೆ ಆಸ್ಟ್ರೇಲಿಯಾದ ಸರ್ಕಾರಿ ವೆಬ್‌ಸೈಟ್ ಹ್ಯಾಕ್ ಮಾಡಿದ ‘OpenAI’

ಆಸ್ಟ್ರೇಲಿಯಾದ ಸರ್ಕಾರಿ ಆರೋಗ್ಯ ಇಲಾಖೆಯ ವೆಬ್‌ಸೈಟ್‌ ಒಂದನ್ನು ಕೃತಕ ಬುದ್ಧಿಮತ್ತೆ (AI)...